ಶಿವಮೊಗ್ಗ, ಜೂನ್ 03: ತುಂಗಾ ಜಲಾಶಯ ವೀಕ್ಷಣೆಗೆ ತೆರಳಿದ್ದ ಪ್ರೇಮಿಗಳ (lovers) ಮೇಲೆ ನೈತಿಕ ಪೊಲೀಸ್ಗಿರಿ (Moral Policing) ನಡೆದಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ತುಂಗಾ ಜಲಾಶಯ ಬಳಿ ನಡೆದಿದೆ. ನಿನ್ನೆ ತುಂಗಾ ಜಲಾಶಯದ ವೀಕ್ಷಣೆಗೆ ಪ್ರೇಮಿಗಳು ತೆರಳಿದ್ದರು. ಜೊತೆಗೆ ಅವರೊಟ್ಟಿಗೆ ಪ್ರಿಯಕರನ ಸ್ನೇಹಿತ ತೆರಳಿದ್ದ. ಈ ವೇಳೆ ಸ್ಥಳೀಯ ನಾಲ್ವರು ಯುವಕರಿಂದ ಅನುಚಿತ ವರ್ತನೆ ಮತ್ತು ಇಬ್ಬರು ಯುವಕರ ಮೇಲೆ ಹಲ್ಲೆ ಆರೋಪ ಮಾಡಿದ್ದಾರೆ.
ಹಲ್ಲೆ ಮಾಡುತ್ತಿದ್ದಂತೆ ಪ್ರಿಯಕರ ಹಾಗೂ ಆತನ ಸ್ನೇಹಿತ ಸ್ಥಳದಿಂದ ಓಡಿಹೋಗಿದ್ದಾರೆ. ಯುವತಿಯನ್ನು ಮಾತ್ರ ಸ್ಥಳೀಯ ಯುವಕರು ಸ್ಥಳದಲ್ಲೇ ಇರಿಸಿಕೊಂಡಿದ್ದಾರೆ. ಯುವತಿ ಕಿಡ್ನ್ಯಾಪ್ ಬಗ್ಗೆ ಪ್ರಿಯಕರ ಹಾಗೂ ಸ್ನೇಹಿತನಿಂದ ದೂರು ನೀಡಲಾಗಿದೆ.
ಇದನ್ನೂ ಓದಿ: ಬೀದರ್: ನೈತಿಕ ಪೊಲೀಸ್ಗಿರಿ ಪ್ರಕರಣ; ಮೂವರು ಯುವಕರ ಬಂಧನ
ದೂರು ಮೇರೆಗೆ ಸ್ಥಳಕ್ಕೆ ತೆರಳಿದ್ದ ತುಂಗಾನಗರ ಠಾಣೆ ಪೊಲೀಸರು ಯುವತಿ, ಸ್ಥಳೀಯ ಯುವಕರನ್ನು ಠಾಣೆಗೆ ಕರೆತಂದಿದ್ದು, ಯುವತಿ ಹಾಗೂ ಯುವಕರ ವಿಚಾರಣೆ ಮಾಡಿದ್ದಾರೆ.
ಇನ್ನು ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿತ್ತು. ಯುವಕನೊಬ್ಬನನ್ನ ರೂಮ್ನಲ್ಲಿ ಹಾಕಿ ಹಲ್ಲೆಎಂಟತ್ತು ಜನರಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿತ್ತು. ಯುವಕ ಪರಿ ಪರಿಯಾಗಿ ಬೇಡಿಕೊಂಡರು ಬಿಡದೇ ಹಲ್ಲೆ ಮಾಡಿ ನೈತಿಕ ಪೊಲೀಸ್ ಗಿರಿ ಮೆರೆಯಲಾಗಿತ್ತು.
ಇದನ್ನೂ ಓದಿ: ಬೆಳಗಾವಿಯಲ್ಲಿ ಹಿಂದೂ ಕಾರ್ಯಕರ್ತರಿಂದ ನೈತಿಕ ಪೊಲೀಸ್ಗಿರಿ: ಅಕ್ರಮವಾಗಿ ಗೋವು ಸಾಗಾಟ ಮಾಡ್ತಿದ್ದ ಚಾಲಕನಿಗೆ ಥಳಿತ
ಘಟನೆಯ ವಿಡಿಯೋಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ವಿಡಿಯೋದಲ್ಲಿ ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರು. ಹಲ್ಲೆ ಮಾಡಿ ನಂತರ ತಲೆ ಬೊಳಿಸಿ ಹಿಂಸೆ ನೀಡಿದ ಮತ್ತೊಂದು ವಿಡಿಯೋ ಕೂಡ ವೈರಲ್ ಆಗಿತ್ತು. ಹಲ್ಲೆಗೆ ನಿಖರ ಕಾರಣ ಮಾತ್ರ ತಿಳಿದುಬಂದಿಲ್ಲ.
ಘಟನೆ ಬಗ್ಗೆ ಹಲ್ಲೆಗೊಳಗಾದ ಯುವಕ ಪೊಲೀಸರಿಗೆ ಅಧಿಕೃತ ದೂರು ನೀಡಿದ್ದ. ಹಲ್ಲೆ ಮಾಡುವಾಗ ಐದಾರು ಜನ ತಮ್ಮ ಮೊಬೈಲ್ನಲ್ಲಿ ಯುವಕನ ವಿಡಿಯೋ ಮಾಡಿದ್ದಾರೆ. ಪ್ರಕರಣದ ಪತ್ತೆಗೆ ಹರಿಹರ ಪೊಲೀಸರು ಮುಂದಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.