ನೈತಿಕ ಮೌಲ್ಯಗಳು ಶಿಕ್ಷಣದ ಒಂದು ಅವಿಭಾಜ್ಯ ಅಂಗವಾಗಬೇಕು: ರಾಷ್ಟ್ರಪತಿ ದ್ರೌಪದಿ ಮುರ್ಮು

ಇಂದು ಕರ್ನಾಟಕಕ್ಕೆ ಆಗಮಿಸಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್​​ ಸುವರ್ಣ ಮಹೋತ್ಸವ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ನೈತಿಕ ಮೌಲ್ಯಗಳು ಶಿಕ್ಷಣದ ಒಂದು ಅವಿಭಾಜ್ಯ ಅಂಗವಾಗಬೇಕು ಎಂದು ಹೇಳಿದ್ದಾರೆ.

ನೈತಿಕ ಮೌಲ್ಯಗಳು ಶಿಕ್ಷಣದ ಒಂದು ಅವಿಭಾಜ್ಯ ಅಂಗವಾಗಬೇಕು: ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್, ರಾಷ್ಟ್ರಪತಿ ದ್ರೌಪದಿ ಮುರ್ಮು
Follow us
Malatesh Jaggin
| Updated By: ಗಂಗಾಧರ​ ಬ. ಸಾಬೋಜಿ

Updated on: Oct 26, 2023 | 7:04 PM

ಬೆಂಗಳೂರು, ಅಕ್ಟೋಬರ್​​​ 26: ನೀತಿಯಿಲ್ಲದ ವ್ಯಾಪಾರ, ಮಾನವೀಯತೆಯಿಲ್ಲದ ವಿಜ್ಞಾನ ಬೇಕಿಲ್ಲ. ನೈತಿಕ ಮೌಲ್ಯಗಳು ಶಿಕ್ಷಣದ ಒಂದು ಅವಿಭಾಜ್ಯ ಅಂಗವಾಗಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಹೇಳಿದ್ದಾರೆ. ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಐಐಎಂ ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿಷ್ಠಾನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿಜಿಯವರ ಆಶಯವನ್ನ ಜೀವನದಲ್ಲಿ ಅಳವಡಿಸಿಕೊಳ್ಳಿ. ಪರಸ್ಪರ ಸೌಹಾರ್ದತೆ, ಸದವಕಾಶಗಳಿಂದ ದೇಶವನ್ನು ಕಟ್ಟಬೇಕು. ಭವಿಷ್ಯದ ಸಂಪತನ್ನ ಸೃಷ್ಠಿಸುವ ಸಾಮರ್ಥ್ಯ ಐಐಎಂಸಂಸ್ಥೆ ಹೊಂದಿದೆ ಎಂದು ಹೇಳಿದ್ದಾರೆ.

ಸಂಸ್ಥಾಪನಾ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿರುವ 50 ಗಂಟೆಗಳ ರಿಲೇ ವಾಕಥಾನ್​ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ವರ್ಚುವಲ್ ಆಗಿ ಹಸಿರು ನಿಶಾನೆ ತೋರಿಸಿದರು. ಎನ್‌.ಎಸ್. ರಾಘವನ್ ಉದ್ಯಮಶೀಲತೆ ತರಬೇತಿ ಕೇಂದ್ರದಲ್ಲಿ ಮಹಿಳಾ ಉದ್ಯಮಿಗಳು ಹಾಗೂ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಾಯಿತು.

ಕರ್ನಾಟಕ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಛಾಪು ಮೂಡಿಸಿದೆ: ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್

ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್​ ಮಾತನಾಡಿ, ಕರ್ನಾಟಕ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಛಾಪು ಮೂಡಿಸಿದೆ. ದೇಶದ ಉನ್ನತ ಗುಣಮಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಐಐಎಂ ಒಂದಾಗಿದೆ. ದೇಶದ ಊಟಿ ಹಬ್​​​​​​ಆಗಿ ಬೆಳೆಯಲು ಐಐಎಂ ತನ್ನದೇ ಕೊಡುಗೆ ನೀಡಿದೆ. ಇಲ್ಲಿನ ಅಧ್ಯಯನಗಳು ಸಮಾಜ, ವ್ಯಕ್ತಿ ವಿಕಸನಕ್ಕೆ ಸದ್ಬಳಕೆಯಾಗಲಿ. ದೇಶ ಆರ್ಥಿಕ ವ್ಯವಸ್ಥೆಯಾಗಿ ರೂಪಿಸಲು ಸಂಸ್ಥೆ ಕೈಜೋಡಿಸಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ಹಿಂದೆ ಕೂಡ ಚರ್ಚೆ ಮಾಡಿ ಕ್ಷಮೆ ಕೇಳಿದ್ದ ಹೆಚ್​ಡಿ ಕುಮಾರಸ್ವಾಮಿ: ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

ಕಾರ್ಯಕ್ರಮ ಮುಕ್ತಾಯ ಬಳಿಕ ಬೆಂಗಳೂರಿನಿಂದ ಚೆನ್ನೈಗೆ ತೆರಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು ತೆರಳಿದ್ದು, ಹೆಚ್​ಎಎಲ್ ಏರ್​ಪೋರ್ಟ್​ನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಸಿಎಸ್ ವಂದಿತಾ ಶರ್ಮಾ, ಡಿಜಿ&ಐಜಿಪಿ ಅಲೋಕ್ ಮೋಹನ್, ಡಿಸಿ ಕೆ.ಎ.ದಯಾನಂದ, ಆಯುಕ್ತ ಬಿ.ದಯಾನಂದರಿಂದ ಬೀಳ್ಕೊಡಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.