ಕೈಮುಗಿದು ಒಳಗೆ ಬಾ ವಾಕ್ಯ ಬದಲಾವಣೆ: ಮಣಿವಣ್ಣನ್ ಗಪ್​ಚುಪ್, ಅಶೋಕ್​ ಕೆಂಡಾಮಂಡಲ

ರಾಜ್ಯದ ಎಲ್ಲ ವಸತಿ ಶಾಲೆಗಳ (Residential Schools) ಪ್ರವೇಶ ದ್ವಾರದಲ್ಲಿ ಇದ್ದ ಘೋಷ ವಾಕ್ಯವನ್ನು ಬದಲಾಯಿಸಿರುವ ಸಮಾಜ ಕಲ್ಯಾಣ ಇಲಾಖೆ ಕ್ರಮಕ್ಕೆ ರಾಜ್ಯಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಅದರಲ್ಲೂ ವಿಪಕ್ಷ ಬಿಜೆಪಿ ಸದನದಲ್ಲಿ ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದೆ. ಆದ್ರೆ, ಇದಕ್ಕೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.​ ಇನ್ನು ಈ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.

ಕೈಮುಗಿದು ಒಳಗೆ ಬಾ ವಾಕ್ಯ ಬದಲಾವಣೆ: ಮಣಿವಣ್ಣನ್ ಗಪ್​ಚುಪ್, ಅಶೋಕ್​ ಕೆಂಡಾಮಂಡಲ
ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಆರ್ ಅಶೋಕ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Feb 19, 2024 | 4:44 PM

ಬೆಂಗಳೂರು, (ಫೆಬ್ರವರಿ 19): ಕರ್ನಾಟಕದ ಎಲ್ಲ ವಸತಿ ಶಾಲೆಗಳ (Residential Schools) ಪ್ರವೇಶ ದ್ವಾರದ ‘ಜ್ಞಾನ ದೇಗುಲವಿದು, ಕೈಮುಗಿದು ಒಳಗೆ ಬಾ ಘೋಷ ವಾಕ್ಯವನ್ನು ಬದಲಾಯಿಸಿರುವ ಸಮಾಜ ಕಲ್ಯಾಣ ಇಲಾಖೆ (Department of Social Welfare) ಕ್ರಮಕ್ಕೆ ರಾಜ್ಯಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ತಪ್ಪನ್ನು ಸರಿಪಡಿಸಿಕೊಂಡಿದೆ. ಇನ್ನು ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ (manivannan) ಅವರನ್ನು ಮಾಧ್ಯಮಗಳು ಸ್ಪಷ್ಟನೆ ಕೇಳಿದ್ದಕ್ಕೆ  ಗರಂ ಆಗಿದ್ದಾರೆ. ಅಲ್ಲದೇ ಇದಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಮತ್ತೊಂದೆಡೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್(R Ashok)​, ಮಣಿವಣ್ಣನ್​ ವಿರುದ್ಧ ಕೆಂಡಾಮಂಡಲರಾಗಿದ್ದು, ಇಲಾಖೆಯಿಂದ ಅವರನ್ನು ಎತ್ತಂಗಡಿ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಘೋಷ ವಾಕ್ಯದ ಆದೇಶದ ಬ್ಗಗೆ ಮಾಧ್ಯಮಗಳು ಪ್ರತಿಕ್ರಿಯೆ ಕೇಳಿದ್ದಕ್ಕೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಗರಂ ಆಗಿದದ್ದು. ಘೋಷವಾಕ್ಯ ಬದಲಾವಣೆ ಬಗ್ಗೆ 2 ಸದನಗಳಲ್ಲಿ ಪ್ರಸ್ತಾಪವಾಗಿದೆ. ಸದನದಲ್ಲೇ ಉತ್ತರ ಸಿಗುತ್ತೆ, ನಾವು ಹೇಳಿದ್ರೆ ಸರಿಯಾಗಲ್ಲ. ನಾನು ಸರ್ಕಾರಿ ಅಧಿಕಾರಿಯಾಗಿ ಈಗ ಉತ್ತರ ಕೊಡಲು ಆಗಲ್ಲ. ಅಸೆಂಬ್ಲಿಯಲ್ಲಿ ಚರ್ಚೆ ಆಗದೆ ನಾನು ಹೇಗೆ ಉತ್ತರಿಸಲಿ ಸಿಡಿಮಿಡಿಗೊಂಡರು.

ಇದನ್ನೂ ಓದಿ: ಕೈಮುಗಿದು ಒಳಗೆ ಬಾ…: ಕುವೆಂಪು ಕವಿತೆಯ ಧ್ವನಿಯೇನು? ಇಲ್ಲಿದೆ ಸಾಹಿತ್ಯ, ಅರ್ಥ ವಿವರ

ಇನ್ನು ಈ ಬಗ್ಗೆ ವಿಪಕ್ಷ ನಾಯಕ ಆರ್​​ ಆಶೋಕ್ ಮಾತನಾಡಿದ್ದು, ಮಣಿವಣ್ಣನ್ ಪ್ರಧಾನ ಕಾರ್ಯದರ್ಶಿಯಾಗಿ ಬದಲಾವಣೆಯಾಗಿದ್ದಾರೆ ಎಂದು ಪ್ರಪಂಚವೇ ಬದಲಾಗಬೇಕು ಎನ್ನುವ ಮನಸ್ಥಿತಿಯಲ್ಲಿದ್ದಾರೆ. ಇವರು ಧೈರ್ಯದಿಂದ ಪ್ರಶ್ನಿಸಿ ಅಂದ್ರೆ ಪ್ರಶ್ನೆ ಮಾಡೋದು ಎಲ್ಲಿ? ಕುವೆಂಪು ವೇದವಾಕ್ಯವನ್ನು ತೆಗೆದು ಹಾಕುವಂಥದ್ದು ಇದು ಕೆಟ್ಟ ಸಂಸ್ಕೃತಿ. ಇಡೀ ಸರ್ಕಾರ ಇದರ ಹಿಂದೆ ಇದೆ ಅಂತಾ ಅನ್ನಿಸುತ್ತಿದೆ ಎಂದು ಕಿಡಿಕಾರಿದರು.

ಕುವೆಂಪು ವೇದವಾಕ್ಯ ತೆಗೆದು ಮಣಿವಣ್ಣನ್ ವೇದವಾಕ್ಯ

ಕುವೆಂಪು ವೇದವಾಕ್ಯವನ್ನು ತೆಗೆದು ಮಣಿವಣ್ಣನ್ ಅವರ ವೇದವಾಕ್ಯವನ್ನು ಹಾಕಿದ್ದಾರೆ. ಸರ್ಕಾರದ ಆದೇಶ ಎಲ್ಲಿದೆ?, ಮಂತ್ರಿಗಳ ಆದೇಶ ಎಲ್ಲಿದೆ? ಇದುವರೆಗೂ ಮಂತ್ರಿಗಳ ಆದೇಶದ ಪ್ರತಿ ನಮಗೆ ಸಿಕ್ಕಿಲ್ಲ. ಒಬ್ಬ ಪ್ರಧಾನ ಕಾರ್ಯದರ್ಶಿ ಹುಚ್ಚುಚ್ಚಾಗಿ ಅವನಿಗೆ ಮನಸ್ಸಿಗೆ ಬಂದ ಹಾಗೆ ಚೇಂಜ್ ಮಾಡಿದ್ದಾನೆ. ಈಗ ವಿಧಾನಸೌಧದ ಮುಂದೆ ಸರ್ಕಾರದ ಕೆಲಸ ದೇವರ ಕೆಲಸ ಅಂತ ಇದೆ. ಯಾರೋ ಕಾರ್ಯದರ್ಶಿ ಬಂದು ಅದನ್ನ ಅಳಿಸು ಹಾಕಿ ಅಂದ್ರೆ ಏನು ಅರ್ಥ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಕ್ಕೆ ಅಧಿಕಾರಿಗಳಿಂದ ಕವಡೆ ಕಾಸಿನ ಕಿಮ್ಮತ್ತಿಲ್ಲ

ಕೇಡುಗಾಲ ಬಂದಿರುವ ಈ ಸರ್ಕಾರ ಆದೇಶ ಇಲ್ಲದೇ ನಾಮಫಲಕ ಬದಲಾಯಿಸಿದ್ದಾರೆ. ಯಾವ ಅಧಿಕಾರಿಗಳೂ ಸರ್ಕಾರದ ಮಾತು ಕೇಳುತ್ತಿಲ್ಲ. ಕಳೆದ ಬಾರಿಯ ಸಿದ್ದರಾಮಯ್ಯನವರೇ ಬೇರೆ ಈಗಿರುವ ಸಿದ್ದರಾಮಯ್ಯನವರೇ ಬೇರೆ. ಸಿದ್ದರಾಮಯ್ಯನವರಿಗೆ ಆಡಳಿತದಲ್ಲಿ ಹಿಡಿತ ಇಲ್ಲ. ಅಧಿಕಾರಿಗಳು ಬೇಕಾಬಿಟ್ಟಿ ಆದೇಶವನ್ನು ಚೇಂಜ್ ಮಾಡುತ್ತಿದ್ದಾರೆ . ಮಂತ್ರಿಗಳನ್ನು ಕೇಳಲ್ಲ, ಮುಖ್ಯಮಂತ್ರಿಗಳನ್ನೂ ಕೇಳಲ್ಲ. ಸರ್ಕಾರಕ್ಕೆ ಅಧಿಕಾರಿಗಳಿಂದ ಕವಡೆ ಕಾಸಿನ ಕಿಮ್ಮತ್ತಿಲ್ಲ. ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ ದಿಕ್ಕು ದೆಸೆ ಇಲ್ಲದೇ ಓಡುತ್ತಿದೆ. ಅಧಿಕಾರಿಗಳ ಕೈಗೆ ಅಧಿಕಾರ ಕೊಟ್ಟು ಸಚಿವರು ಮೋಜು-ಮಸ್ತಿಯಲ್ಲಿದ್ದಾರೆ. ಯಾರು ಪ್ರಧಾನ ಕಾರ್ಯದರ್ಶಿ ಇದ್ದಾರೋ ಅವರ ವಿರುದ್ಧ ಕ್ರಮ ಆಗಬೇಕು. ಅವರನ್ನು ಅಲ್ಲಿಂದ ಎತ್ತಂಗಡಿ ಮಾಡುವ ಕೆಲಸ ಮಾಡಬೇಕು. ಆದರೆ ಬೇರೆ ಮಂತ್ರಿಗಳು ಸಮರ್ಥನೆ ಮಾಡಿಕೊಂಡಿದ್ದು, ಮಂತ್ರಿಮಂಡಲದಲ್ಲೇ ಗೊಂದಲ ಇದೆ ಎಂದು ಟೀಕಿಸಿದರು.

ಸರ್ಕಾರದ ವಿರುದ್ಧ ಅಶ್ವತ್ಥ್ ನಾರಾಯಣ ಕಿಡಿ

ಇನ್ನು ಈ ಬಗ್ಗೆ ಟಿವಿ9ಗೆ ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿ, ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಈ ವಾಕ್ಯವನ್ನ ಬದಲಾಯಿಸಿ, ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಇವರದೇ ಹೊಸ ವಾಕ್ಯ ಹಾಕಿದ್ದಾರೆ. ಈ ಸರ್ಕಾರದಲ್ಲಿ ಏನು ಆಗುತ್ತಿದೆ ಎಂದು ಆಡಳಿತದ ಮೇಲೆ ಕಂಟ್ರೋಲ್ ಇಲ್ಲ. ದ್ವೇಷದ ರಾಜಕಾರಣ ಸಮಾಜ ಹೊಡೆಯುವ ರಾಜಕಾರಣ ಮಾಡುತ್ತಿದೆ. ಈ ದ್ವೇಷ ಅಸೂಯೆಯಲ್ಲಿ ಅವರಿಗೆ ಏನು ಮಾಡುತ್ತಿದ್ದಾರೆ ಎನ್ನುವುದೇ ಗೊತ್ತಿಲ್ಲ ಎಂದು ಕಿಡಿಕಾರಿದರು.

ಎಲ್ಲೋ ಒಂದು ಕಡೆ ಇಲಾಖೆಯಲ್ಲಿ ಅವರಿಗೆ ಮನ ಬಂದತೆ ಹಾಕಿಕೊಳ್ಳುತ್ತಿದ್ದಾರೆ. ಇದಕ್ಕೆ ಹೊಣೆ ಯಾರು ಜವಾಬ್ದಾರಿ ಯಾರು ಇವರ ಬಳಿ ಉತ್ತರವೇ ಇಲ್ಲ. ಇದನ್ನ ಶೂನ್ಯ ವೇಳೆಯಲ್ಲಿ ಪ್ರಶ್ನೆ ಕೇಳಿದಾಗ ಅವರಿಗೇ ಗೊತ್ತಿಲ್ಲ. ಈ ರೀತಿ ಸರ್ಕಾರ ನಡೆಯುತ್ತಿದೆ . ಸರ್ಕಾರ ಬದುಕಿದಿಯೋ ಇಲ್ಲವೋ ಗೊತ್ತಿಲ್ಲ. ಹಾಗಾಗೀ ಸರ್ಕಾರ ಭಾವನಾತ್ಮಕವಾಗಿ ಜ್ಞಾನಪೀಠ ಪುರಸ್ಕೃತರಾದ ಕುವೆಂಪು ಕೊಟ್ಟಂತಹ ವಾಕ್ಯದ ವಿರುದ್ದವಾಗಿ ಅವರದೇ ಆದ ವಾಕ್ಯ ಹಾಕಿ ಅವರಿಗೆ ಅಗೌರವ ಧಕ್ಕೆ ತರುವಂತಹ ಕೆಲಸ ಸರ್ಕಾರ ಮಾಡಿದೆ. ಸರ್ಕಾರದ ಈ ನಡುವಳಿಕೆ ಸಂಪೂರ್ಣವಾಗಿ ಖಂಡಿಸುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:43 pm, Mon, 19 February 24

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?