ಬೆಂಗಳೂರು: ಮಹಾಮಾರಿ ಕೊರೊನಾ ದೇಶಕ್ಕೆ ದೊಡ್ಡ ಕಂಟಕವನ್ನೇ ಸೃಷ್ಟಿಸಿದೆ. ಕೊವಿಡ್ ಹಿಮ್ಮೆಟ್ಟಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್ಗಳಲ್ಲಿ ಒಬ್ಬರಾದ ಪೊಲೀಸರಿಗೆ ಮಹಾಮಾರಿ ಬೆನ್ನು ಬಿಡದೆ ಕಾಡುತ್ತಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಪೊಲೀಸರ ದೇಹ ಹೊಕ್ಕುತ್ತಿದೆ. ಇಂದು ನಗರದಲ್ಲಿ ಮತ್ತೆ ಇಬ್ಬರು ಪೊಲೀಸರಿಗೆ ಸೋಂಕು ತಗುಲಿದೆ. ಹೆಚ್ಎಎಲ್ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ಗಳಿಗೆ ಕೊರೊನಾ ದೃಢಪಟ್ಟಿದೆ. ಹಾಗೂ ಬೆಳ್ಳಂದೂರು ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್‌ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪೊಲೀಸ್ ಠಾಣೆ ಸ್ಯಾನಿಟೈಸ್ ಮಾಡಲಾಗಿದೆ.
ಮೈಸೂರು, ಬೀದರ್ನಲ್ಲೂ ಸಿಬ್ಬಂದಿಗೆ ಕೊರೊನಾ?
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಿವಾಸಿಯಾಗಿರುವ ಟಿ.ನರಸೀಪುರ ಪೊಲೀಸ್ ಠಾಣೆ ಸಿಬ್ಬಂದಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡುವ ಸಾಧ್ಯತೆ ಇದೆ.
ಬೀದರ್‌ನ ಗಾಂಧಿಗಂಜ್ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್‌ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಇವರು ಕಳೆದ 10 ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದರು. ಇಂದು ವರದಿ ಪಾಸಿಟಿವ್ ಬಂದ್ರೆ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡುವ ಸಾಧ್ಯತೆ ಇದೆ.
Published On - 1:18 pm, Sun, 28 June 20