ಕರ್ನಾಟಕದಲ್ಲಿ 1 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳು ನೋಂದಣಿ; ಸಚಿವ ಮುರುಗೇಶ್ ನಿರಾಣಿ

| Updated By: ಸುಷ್ಮಾ ಚಕ್ರೆ

Updated on: Jun 28, 2022 | 1:14 PM

ವಾಹನ ತಯಾರಿಕಾ ಕಂಪೆನಿಗಳೂ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಪ್ರೀ ಬುಕ್ಕಿಂಗ್ ಇರುವವರಿಗೆ ವಾಹನ ಒದಗಿಸಲು ಹೆಣಗಾಡುವಂತಹ ರೀತಿಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಕರ್ನಾಟಕದಲ್ಲಿ 1 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳು ನೋಂದಣಿ; ಸಚಿವ ಮುರುಗೇಶ್ ನಿರಾಣಿ
ಸಚಿವ ಮುರುಗೇಶ್ ನಿರಾಣಿ
Follow us on

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ, ದೇಶದಾದ್ಯಂತ ಎಲೆಕ್ಟ್ರಾನಿಕ್ ವಾಹನಗಳು (Electric Vehicles) ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿವೆ. ಕರ್ನಾಟಕವು ವಿದ್ಯುತ್ ಚಾಲಿತ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ (Murugesh Nirani) ಹೇಳಿದ್ದಾರೆ.

ಈ ಬಗ್ಗೆ ಕೂನಲ್ಲಿ ಪೋಸ್ಟ್​ ಮಾಡಿರುವ ಸಚಿವ ಮುರುಗೇಶ್ ನಿರಾಣಿ, ಬಳಕೆಯ ಖರ್ಚನ್ನು ಕಡಿಮೆ ಮಾಡುವ ಜೊತೆಗೆ ಎಲೆಕ್ಟ್ರಾನಿಕ್ ವಾಹನಗಳು ಪರಿಸರ ಸ್ನೇಹಿ, ವಾಯುಮಾಲಿನ್ಯ ನಿಯಂತ್ರಣದಲ್ಲೂ ಪರಿಣಾಮಕಾರಿಯಾಗಲಿದೆ. ಹೀಗಾಗಿ, ಸರ್ಕಾರವು ಇವಿ ವಾಹನಗಳ ಬಳಕೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಜನರು ಸಹ ಇವಿ ವಾಹನಗಳ ಕಡೆಗೆ ಒಲವು ಹೆಚ್ಚಿಸಿಕೊಂಡಿದ್ದಾರೆ ಎಂದಿದ್ದಾರೆ.

ವಾಹನ ತಯಾರಿಕಾ ಕಂಪೆನಿಗಳೂ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಪ್ರೀ ಬುಕ್ಕಿಂಗ್ ಇರುವವರಿಗೆ ವಾಹನ ಒದಗಿಸಲು ಹೆಣಗಾಡುವಂತಹ ರೀತಿಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದ ಎಲ್ಲ ಭಾಗಗಳಲ್ಲಿಯೂ ಇವಿ ಬಳಕೆ ಹೆಚ್ಚುತ್ತಿದೆ. ಕರ್ನಾಟಕವೂ ಇದಕ್ಕೆ ಹೊರತಾಗಿಲ್ಲ. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ ಎಂದು ಸಚಿವ ಮುರುಗೇಶ್ ನಿರಾಣಿ ತಮ್ಮ ಕೂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ಇವಿಗಳು ಭವಿಷ್ಯದಲ್ಲಿ ಕರ್ನಾಟಕದ ಪ್ರಮುಖ ಭಾಗವಾಗಿ ಮುಂದುವರೆಯಲಿದೆ. ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿದ್ಯುತ್ ಚಾಲಿತ ವಾಹನಗಳ ನೋಂದಣಿಯಾಗಿವೆ. ಕೈಗಾರಿಕಾ ಸ್ನೇಹಿ ವಾತಾವರಣ ಹಾಗೂ ಉದ್ಯಮ ಸ್ನೇಹಿ ನೀತಿಗಳು ಕರ್ನಾಟಕವು ಭಾರತದಲ್ಲಿ ಇವಿ ಹಬ್ ಆಗಿ ಬೆಳೆಯಲು ಪ್ರಮುಖ ಕಾರಣವಾಗಿದೆ’ ಎಂದು ನಿರಾಣಿ ಹೇಳಿದ್ದಾರೆ.