ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಘೋಷಣೆ: ಸಿಎಂಗೆ 150ಕ್ಕೂ ಹೆಚ್ಚು ಶರಣರು, ಸ್ವಾಮೀಜಿಗಳಿಂದ ಸನ್ಮಾನ

'ವಿಶ್ವಗುರು ಬಸವಣ್ಣನವರನ್ನ ಕರ್ನಾಟಕದ ಸಾಂಸ್ಕೃತಿಕ ನಾಯಕ' ಎಂದು ಘೋಷಣೆ ಹಿನ್ನೆಲೆ ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ - ಬಸವಕಲ್ಯಾಣ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಬೀದರ್​ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನೂ 150ಕ್ಕೂ ಹೆಚ್ಚು ಶರಣಗುರುಗಳು, ಸ್ವಾಮೀಜಿಗಳಿಂದ ಸನ್ಮಾನಿಸಲಾಗಿದೆ.

ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಘೋಷಣೆ: ಸಿಎಂಗೆ 150ಕ್ಕೂ ಹೆಚ್ಚು ಶರಣರು, ಸ್ವಾಮೀಜಿಗಳಿಂದ ಸನ್ಮಾನ
ಸಿಎಂ ಸಿದ್ದರಾಮಯ್ಯ ಮತ್ತು ಸ್ವಾಮೀಜಿಗಳು
Follow us
ಸುರೇಶ ನಾಯಕ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 07, 2024 | 3:55 PM

ಬೀದರ್​, ಮಾರ್ಚ್​​ 7: ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಚಾರಿತ್ರಿಕ ಸಂಗತಿಗಾಗಿ 160 ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಗೆ ಸನ್ಮಾನಿಸಲಾಗಿದೆ. ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ – ಬಸವಕಲ್ಯಾಣ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಸನ್ಮಾನಿಸಲಾಗಿದೆ. ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮೀಜಿ, ಜಗದ್ಗುರು ಬಸವಜಯಮೃತ್ಯುಂಜಯ ಮಹಾಸ್ವಾಮಿಗಳು, ಜಗದ್ಗುರು ಡಾ.ಮಾತೆ ಗಂಗಾದೇವಿ, ಜಗದ್ಗುರು ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಷ.ಬ್ರ.ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿ 160 ಮಂದಿ ಶರಣ ಗುರುಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದರು.

ಬಸವಕಲ್ಯಾಣ ಅನುಭವ ಮಂಟಪದ ವಿಶ್ವ ಬಸವ ಧರ್ಮ ಟ್ರಸ್ಟ್‍ನ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದೇವರು ಮತ್ತು 150 ಕ್ಕೂ ಹೆಚ್ಚು ಶರಣಗುರುಗಳು, ಸ್ವಾಮೀಜಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಹರಸಿದರು.

ಸಿದ್ದರಾಮಯ್ಯರನ್ನು ಹೊಗಳಿದ ನಾಡೋಜ ಡಾ. ಬಸವಲಿಂಗ ಪಟ್ಟದೇವರು

ಬಳಿಕ ಮಾತನಾಡಿದ ನಾಡೋಜ ಡಾ. ಬಸವಲಿಂಗ ಪಟ್ಟದೇವರು, ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯಗೊಳಿಸಿದ್ದು ಏಕೈಕ ನಾಯಕ ಸಿದ್ದರಾಮಯ್ಯ. ಮಹಿಳಾ ವಿವಿಗೆ ಅಕ್ಕ ಮಹಾದೇವಿ ಹೆಸರಿಟ್ಟಿದ್ದು ಏಕೈಕ ನಾಯಕ ಸಿದ್ದರಾಮಯ್ಯ. ಬಸವ ತತ್ವದ ಆಧಾರದಲ್ಲಿ ಅನ್ನ ಭಾಗ್ಯ ಸೇರಿ ಹಲವು ಭಾಗ್ಯಗಳನ್ನು ಕೊಟ್ಟಿದ್ದೇನೆ ಎಂದು ಸಾರಿದವರು ಏಕೈಕ ನಾಯಕ ಸಿದ್ದರಾಮಯ್ಯ ಅವರು ಎಂದರು.

ಇದನ್ನೂ ಓದಿ: Basavanna: “ಬಸವಣ್ಣ ಸಾಂಸ್ಕೃತಿಕ ನಾಯಕ”: ಘೋಷಣೆ ಮಾತ್ರ ಸಾಕೆ?

ಅನುಭವ ಮಂಟಪದಲ್ಲಿ 12 ನೇ ಶತಮಾನದಲ್ಲಿ ಲಿಂಗಾಯತ ಸ್ವತಂತ್ರ ಧರ್ಮ ಎಂದು ಬಸವಣ್ಣನವರು ಘೋಷಿಸಿದರು. ಬಸವಣ್ಣನವರು ಮಾಡಿದ ಘೋಷಣೆಗೆ ಆಧುನಿಕ ಕರ್ನಾಟಕದಲ್ಲಿ ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಎಂದು ಮುದ್ರೆ ಒತ್ತಿದ ಏಕೈಕ ನಾಯಕ ಧೀಮಂತ ನಾಯಕ, ಬಸವಣ್ಣನವರ ಅಪ್ಪಟ ಅನುಯಾಯಿ ಸಿದ್ದರಾಮಯ್ಯ ಅವರು. ಬಸವಣ್ಣನವರು ತಮ್ಮ ರಾಜಕೀಯಕ್ಕೆ ಮಾದರಿ ಎಂದು ಘೋಷಿಸಿಕೊಂಡ, ಅದನ್ನೇ ಪಾಲಿಸುತ್ತಿರುವ ಏಕೈಕ ನಾಯಕರು ನಮ್ಮೆಲ್ಲರ ಅಭಿಮಾನದ ಸಿದ್ದರಾಮಯ್ಯ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು ಹಾಗೂ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಉದ್ಘಾಟಿಸಿದರು. ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಈಶ್ವರ್ ಖಂಡ್ರೆ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ: ಅಧಿಕೃತ ಘೋಷಣೆಯೊಂದೇ ಬಾಕಿ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಬಿ.ಆರ್.ಪಾಟೀಲ್, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಡಾ. ಗೊ.ರು. ಚನ್ನಬಸಪ್ಪ, ಬಸವ ಸಮಿತಿಯ ಅಧ್ಯಕ್ಷರಾದ ಡಾ. ಅರವಿಂದ ಜತ್ತಿ, ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಪೌರಾಡಳಿತ, ಹಜ್ ಸಚಿವ ರಹೀಖಾನ್, ಮಾಜಿ ಸಚಿವರಾದ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ್, ವಿಜಯ್ ಸಿಂಗ್, ಶಾಸಕ ಚನ್ನಾರೆಡ್ಡಿ ಸೇರಿ ಪ್ರಮುಖರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ