ಕರ್ನಾಟಕದಲ್ಲಿವೆ 1,695 ಕ್ಕೂ ಹೆಚ್ಚು ಅಕ್ರಮ ಶಾಲೆಗಳು; ಹಂತ ಹಂತವಾಗಿ ಮುಚ್ಚಲಾಗುವುದು ಎಂದ ಸಚಿವ ಮಧು ಬಂಗಾರಪ್ಪ

Illegal Schools in Karnataka; ರಾಜ್ಯದಲ್ಲಿ 1,695 ಅಕ್ರಮ ಶಾಲೆಗಳಿವೆ. ಈ ಶಾಲೆಗಳಲ್ಲಿ ಸಾವಿರಾರು ಮಕ್ಕಳು ಓದುತ್ತಿರುವುದರಿಂದ ಅವುಗಳನ್ನು ತಕ್ಷಣವೇ ಮುಚ್ಚಲು ಸಾಧ್ಯವಿಲ್ಲ. ಹಂತ ಹಂತವಾಗಿ ಎಲ್ಲಾ ಅಕ್ರಮ ಶಾಲೆಗಳನ್ನು ಮುಚ್ಚಲಾಗುವುದು. ಶೀಘ್ರದಲ್ಲೇ ಇಂತಹ ಅಕ್ರಮ ಶಾಲೆಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತೇವೆ ಎಂದು ಬಂಗಾರಪ್ಪ ಹೇಳಿದ್ದಾರೆ.

ಕರ್ನಾಟಕದಲ್ಲಿವೆ 1,695 ಕ್ಕೂ ಹೆಚ್ಚು ಅಕ್ರಮ ಶಾಲೆಗಳು; ಹಂತ ಹಂತವಾಗಿ ಮುಚ್ಚಲಾಗುವುದು ಎಂದ ಸಚಿವ ಮಧು ಬಂಗಾರಪ್ಪ
ಮಧು ಬಂಗಾರಪ್ಪ
Follow us
TV9 Web
| Updated By: Ganapathi Sharma

Updated on: Aug 11, 2023 | 5:05 PM

ಬೆಂಗಳೂರು, ಆಗಸ್ಟ್ 11: ರಾಜ್ಯದಲ್ಲಿ 1,695 ಕ್ಕೂ ಹೆಚ್ಚು ಅಕ್ರಮ ಶಾಲೆಗಳಿದ್ದು (Illegal Schools), ಅಂತಹ ಶಾಲೆಗಳನ್ನು ಹಂತ-ಹಂತವಾಗಿ ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಶುಕ್ರವಾರ ಹೇಳಿದ್ದಾರೆ. ಅನುಮತಿಯಿಲ್ಲದೆ ಆರಂಭಿಸಲಾಗುವ ಹೊಸ ಶಾಲೆಗಳಿಗೆ ಬ್ಲಾಕ್ ಶಿಕ್ಷಣಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಕರ್ನಾಟಕ ಪ್ರೈವೇಟ್ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್‌ನೊಂದಿಗೆ ನಡೆದ ಸಭೆಯ ನಂತರ ಬಂಗಾರಪ್ಪ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಖಾಸಗಿ ಶಾಲಾ ಸಂಘದ ಸದಸ್ಯರು ತಮ್ಮ ಕುಂದುಕೊರತೆಗಳ ಬಗ್ಗೆ ನನಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ರಮ ಶಾಲೆಗಳ ಬಗ್ಗೆ ದೂರು ನೀಡಿದ್ದಾರೆ. ಸಮಸ್ಯೆಯನ್ನು ಪರಿಹರಿಸಲು ನಾವು ವಿವಿಧ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಿದ್ದೇವೆ. ಶೀಘ್ರದಲ್ಲೇ ಅವುಗಳನ್ನು ಕಾರ್ಯಗತಗೊಳಿಸಲು ಪ್ರಾರಂಭಿಸುತ್ತೇವೆ ಎಂದು ಬಂಗಾರಪ್ಪ ಹೇಳಿದ್ದಾರೆ.

ಅಕ್ರಮ ಶಾಲೆಗಳನ್ನು ತಕ್ಷಣವೇ ಮುಚ್ಚಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಒಂದನೇ ತರಗತಿಗೆ ಪ್ರವೇಶ ಪಡೆಯಲು 6 ವರ್ಷ ತುಂಬಿರಬೇಕು; ರಾಜ್ಯ ಸರ್ಕಾರದ ಅಧಿಸೂಚನೆ ಎತ್ತಿಹಿಡಿದ ಹೈಕೋರ್ಟ್

ರಾಜ್ಯದಲ್ಲಿ 1,695 ಅಕ್ರಮ ಶಾಲೆಗಳಿವೆ. ಈ ಶಾಲೆಗಳಲ್ಲಿ ಸಾವಿರಾರು ಮಕ್ಕಳು ಓದುತ್ತಿರುವುದರಿಂದ ಅವುಗಳನ್ನು ತಕ್ಷಣವೇ ಮುಚ್ಚಲು ಸಾಧ್ಯವಿಲ್ಲ. ಹಲವಾರು ಶಾಲೆಗಳನ್ನು ಅನುಮತಿ ಪಡೆಯದೆ ಮೇಲ್ದರ್ಜೆಗೇರಿಸಲಾಗಿದೆ. 190 ಶಾಲೆಗಳು ಸೂಕ್ತ ಅನುಮತಿ ಪಡೆಯದೆ ಸ್ಥಳ ಬದಲಾಯಿಸಿವೆ. ಹಂತ ಹಂತವಾಗಿ ಎಲ್ಲಾ ಅಕ್ರಮ ಶಾಲೆಗಳನ್ನು ಮುಚ್ಚಲಾಗುವುದು. ಶೀಘ್ರದಲ್ಲೇ ಇಂತಹ ಅಕ್ರಮ ಶಾಲೆಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತೇವೆ ಎಂದು ಬಂಗಾರಪ್ಪ ಹೇಳಿದ್ದಾರೆ.

ಆಗಸ್ಟ್ 14 ರೊಳಗೆ ಅಕ್ರಮ ಶಾಲೆಗಳನ್ನು ಮುಚ್ಚುವಂತೆ ಶಿಕ್ಷಣ ಇಲಾಖೆಯು ಆಗಸ್ಟ್ 9 ರಂದು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ