CET 2021: ಈ ಬಾರಿ ವಿದ್ಯಾರ್ಥಿಗಳಿಗೆ ಸಿಇಟಿ ಮೇಲೆ ಹೆಚ್ಚು ಒಲವು, ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ವಿದ್ಯಾರ್ಥಿಗಳಿಂದ ನೊಂದಣಿ

ಕಳೆದ ವರ್ಷ 1,75,349 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ವರ್ಷ 2,00,215 ವಿದ್ಯಾರ್ಥಿಗಳಿಂದ ನೊಂದಣಿಯಾಗಿದೆ. ಈ ಪೈಕಿ 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿನಿಯರು ಹಾಗೂ 98 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಈ ಬಾರಿ ಓರ್ವ ತೃತೀಯ ಲಿಂಗಿ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ.

ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jul 18, 2021 | 3:05 PM

ಬೆಂಗಳೂರು: ಸರ್ಕಾರದ ಆದೇಶದಂತೆ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ, ನ್ಯಾಚುರೋಪತಿ, ಬಿ ಫಾರ್ಮ, 2ನೇ ವರ್ಷದ ಬಿ ಫಾರ್ಮ, ಫಾರ್ಮಾ ಡಿ, ಕೃಷಿ ವಿಜ್ಞಾನ ಕೋರ್ಸ್​ಗಳ ಮತ್ತು ವೆಟರ್ನರಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಯುವ ಸಿಇಟಿ ಪರೀಕ್ಷೆಯ ದಿನಾಂಕ ಈಗಾಗಲೇ ನಿಗದಿಯಾಗಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆ 2021, ಮುಂಬರುವ ಆಗಸ್ಟ್ 28 ಮತ್ತು ಆಗಸ್ಟ್ 29ರಂದು ನಡೆಯಲಿರುವ ಬಗ್ಗೆ ದಿನಾಂಕ ಘೋಷಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ನಲ್ಲಿ ನಿಗದಿತ ಲಿಂಕ್ ಕ್ಲಿಕ್ ಮಾಡಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಸದ್ಯ ಹಂಚಿಕೊಳ್ಳುವ ವಿಷಯ ಎಂದರೆ ಈ ಬಾರಿ ಸಿಇಟಿ ಪರೀಕ್ಷೆಗೆ ಹೆಚ್ಚು ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.

ಕಳೆದ ವರ್ಷ 1,75,349 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ವರ್ಷ 2,00,215 ವಿದ್ಯಾರ್ಥಿಗಳಿಂದ ನೊಂದಣಿಯಾಗಿದೆ. ಈ ಪೈಕಿ 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿನಿಯರು ಹಾಗೂ 98 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಈ ಬಾರಿ ಓರ್ವ ತೃತೀಯ ಲಿಂಗಿ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ.

ಜುಲೈ 16ರವರೆಗೆ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ನೀಟ್ ಪರೀಕ್ಷೆ ಹೆಚ್ಚು ವಿದ್ಯಾರ್ಥಿಗಳು ತಯಾರಾಗದ ಕಾರಣ. ಈ ಬಾರಿ ಕೆಲ ವಿದ್ಯಾರ್ಥಿಗಳು ಸಿಇಟಿಗೆ ಒಲವು ತೋರಿಸಿದ್ದಾರೆ. ಹೀಗಾಗಿ ಹೆಚ್ಚು ವಿದ್ಯಾರ್ಥಿಗಳಿಂದ ಸಿಇಟಿಗೆ ಅರ್ಜಿ ಸಲ್ಲಿಕೆಯಾಗಿದೆ ಎಂದು ಕೆಇಎ ಬೋರ್ಡ್ ನಿರ್ದೇಶಕಿ ಎಸ್.ರಮ್ಯಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: CET 2021: ಸಿಇಟಿ ಪರೀಕ್ಷೆಗೆ ಆನ್​ಲೈನ್ ಮೂಲಕ ಅರ್ಜಿ ಆಹ್ವಾನ; ಅಪ್ಲೈ ಮಾಡೋದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?

ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ