ಚಿತ್ರದುರ್ಗದಲ್ಲಿ ಮದುವೆ ಊಟ ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ: ಫುಡ್​ ಪಾಯಿಸನ್​ ಶಂಕೆ

ದಾವಣಗೆರೆ ಜಿಲ್ಲೆಯ ಚಿತ್ರದುರ್ಗ ತಾಲೂಕಿನ ಕಾಲಗೇರೆ ಗ್ರಾಮದಲ್ಲಿ ಮದುವೆ ಊಟ ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವಂತಹ ಘಟನೆ ನಡೆದಿದೆ. ಮಗಳ ಮದುವೆ ಮನೆಯಲ್ಲಿ ಊಟ ಸೇವಿಸಿದ ಜನರು ರಾತ್ರಿ ವೇಳೆಗೆ ವಾಂತಿ ಭೇದಿಯಿಂದ ಬಳಲಿದ್ದಾರೆ. ಕೊಡಲೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಮದುವೆ ಊಟ ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ: ಫುಡ್​ ಪಾಯಿಸನ್​ ಶಂಕೆ
ಚಿತ್ರದುರ್ಗದಲ್ಲಿ ಮದುವೆ ಊಟ ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ: ಫುಡ್​ ಪಾಯಿಸನ್​ ಶಂಕೆ
Edited By:

Updated on: May 11, 2024 | 3:45 PM

ದಾವಣಗೆರೆ, ಮೇ 11: ಮದುವೆ ಊಟ (food) ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವಂತಹ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಕಾಲಗೇರೆ ಗ್ರಾಮದಲ್ಲಿ ನಡೆದಿದೆ. ಕಾಲಗೇರೆಯ ಸಣ್ಣರುದ್ರಪ್ಪ ಪುತ್ರಿ ಮದುವೆ ಕಾರ್ಯಕ್ರಮದಲ್ಲಿ ಜನರು ಊಟ ಮಾಡಿದ್ದಾರೆ. ರಾತ್ರಿ ವೇಳೆಗೆ ವಾಂತಿ ಭೇದಿಯಿಂದ ಜನರು ಬಳಲಿದ್ದಾರೆ.  ಕೂಡಲೇ ಭರಮಸಾಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಅಸ್ವಸ್ಥರು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮದುವೆ ಊಟದಲ್ಲಿ ಫುಡ್​ ಪಾಯಿಸನ್​ ಆಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೀಗರ ಔತಣಕೂಟದಲ್ಲಿ ಊಟ ಮಾಡಿದ್ದ 200ಕ್ಕೂ ಹೆಚ್ಚು ಜನ ಅಸ್ವಸ್ಥ

ಇತ್ತೀಚೆಗೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಬೀಗರ ಔತಣಕೂಟದಲ್ಲಿ ಊಟ ಮಾಡಿದ್ದ 200ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ನಡೆದಿತ್ತು. ಬೀಗರ ಔತಣ ಊಟವನ್ನು ಸೇವಿಸಿದ ಸುಮಾರು 200ಕ್ಕೂ ಹೆಚ್ಚು ಮಂದಿಗೆ ತೀವ್ರ ವಾಂತಿ ಬೇಧಿಯಾಗಿದ್ದು, ಕೂಡಲೇ ಅವರನ್ನು ಸಮೀಪದ ಕುಶಾಲನಗರ ಆಸ್ಪತ್ರೆ, ಕೊಪ್ಪ ಆಸ್ಪತ್ರೆ, ಬೈಲಕುಪ್ಪೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬೀಗರ ಔತಣಕೂಟದಲ್ಲಿ ಸಚಿವ ಕೆ, ವೆಂಕಟೇಶ್ ಸಹ ಭಾಗಿಯಾಗಿದ್ದರು. ಆದರೆ, ಅವರು ಮಾಂಸ ಆಹಾರ ಬದಲಿಗೆ ಸಸ್ಯಹಾರಿ ಆಹಾರ ಸೇವಿಸಿದ್ದರು. ಇದರಿಂದ ಅವರು ಆರೋಗ್ಯವಾಗಿದ್ದರು.

150 ಕ್ಕೂ ಹೆಚ್ಚು ಜನರು ಅಸ್ವಸ್ಥ

ರಾಮನಗರ: ಜಿಲ್ಲೆಯಲ್ಲಿ ಇತ್ತೀಚೆಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ 150 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವಂತಹ ಘಟನೆ ನಡೆದಿತ್ತು. ಫುಡ್​ ಪಾಯಿಸನ್​ ಲಕ್ಷಣಗಳು ಕಂಡ ಬಂದ ಹಿನ್ನೆಲೆ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ರಾಮನಗರದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ಬೆಂಗಳೂರಿನಿಂದ ಕೇವಲ 60 ಕಿಮೀ ದೂರದಲ್ಲಿರುವ ಚನ್ನಪಟ್ಟಣ ಪಟ್ಟಣದಲ್ಲಿ ಈ ಘಟನೆ ನಡೆದಿತ್ತು. ಚನ್ನಪಟ್ಟಣ ಪೊಲೀಸರ ಪ್ರಕಾರ, ಟಿಪ್ಪುನಗರದ ಮಿಲನ್ ಶಾದಿ ಮಾಲ್‌ನಲ್ಲಿ 200 ಕ್ಕೂ ಹೆಚ್ಚು ಜನರು  ಮದುವೆ ಕಾರ್ಯದಲ್ಲಿ ಭಾಗವಸಿದ್ದರು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us