20 ದಿನದಲ್ಲಿ 700ಕ್ಕೂ ಹೆಚ್ಚು ಸಾವು.. ಗ್ರಾಮೀಣ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿದೆ ವಿವಿಧ ಕಾಯಿಲೆಗಳು
ಮೂಡಲಗಿ, ಗೋಕಾಕ್ ತಾಲೂಕಿನಲ್ಲಿ ಕಳೆದ 20 ದಿನಗಳಲ್ಲಿ 700ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಇದು ಗ್ರಾಮಸ್ಥರಲ್ಲಿ ಆತಂಕವನ್ನು ಹೆಚ್ಚಿಸಿದೆ. ಅದರಲ್ಲೂ ಮೂಡಲಗಿ ತಾಲೂಕಿನ ಮುನ್ಯಾಳ, ವಡ್ಡೆರಹಟ್ಟಿ, ರಾಜಾಪುರ, ತುಕ್ಕಾನಟ್ಟಿ ಗ್ರಾಮಗಳಲ್ಲಿ ಅತಿ ಹೆಚ್ಚು ಸಾವುಗಳು ಸಂಭವಿಸಿವೆ.
ಬೆಳಗಾವಿ: ಗ್ರಾಮೀಣ ಪ್ರದೇಶಗಳಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಬೆಳಗಾವಿ ಜಿಲ್ಲೆ ಗೋಕಾಕ್, ಮೂಡಲಗಿ ತಾಲೂಕಿನಲ್ಲಿ ಹೆಚ್ಚು ಕೊವಿಡ್ ಕೇಸ್ಗಳು ಪತ್ತೆಯಾಗಿವೆ. ಕಳೆದ 20 ದಿನದಲ್ಲಿ ಕೊವಿಡ್, ನಾನ್ ಕೊವಿಡ್ ಸೇರಿ 700ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ.
ಮೂಡಲಗಿ, ಗೋಕಾಕ್ ತಾಲೂಕಿನಲ್ಲಿ ಕಳೆದ 20 ದಿನಗಳಲ್ಲಿ 700ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಇದು ಗ್ರಾಮಸ್ಥರಲ್ಲಿ ಆತಂಕವನ್ನು ಹೆಚ್ಚಿಸಿದೆ. ಅದರಲ್ಲೂ ಮೂಡಲಗಿ ತಾಲೂಕಿನ ಮುನ್ಯಾಳ, ವಡ್ಡೆರಹಟ್ಟಿ, ರಾಜಾಪುರ, ತುಕ್ಕಾನಟ್ಟಿ ಗ್ರಾಮಗಳಲ್ಲಿ ಅತಿ ಹೆಚ್ಚು ಸಾವುಗಳು ಸಂಭವಿಸಿವೆ. 15 ದಿನಗಳ ಅಂತರದಲ್ಲಿ 4 ಗ್ರಾಮಗಳಲ್ಲಿ 186ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಗ್ರಾಮಗಳಲ್ಲಿ ಆಗುತ್ತಿರುವ ಸರಣಿ ಸಾವಿನಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಇನ್ನು ಗ್ರಾಮದಲ್ಲಿ ವಿವಿಧ ಖಾಯಿಲೆಗಳು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಹೋಗಲು ಹೆದರಿ ಮನೆಯಲ್ಲೇ ಜೀವ ಕಳೆದುಕೊಳ್ಳುತ್ತಿದ್ದಾರೆ. ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದಲ್ಲೂ 12 ಜನ ಮೃತಪಟ್ಟಿದ್ದಾರೆ. ಬಹುತೇಕ ಗ್ರಾಮಗಳಲ್ಲಿ ಪ್ರತಿ ಮನೆಯಲ್ಲೂ ಜ್ವರ, ನೆಗಡಿ ಕೆಮ್ಮಿನಿಂದ ಬಳಲುತ್ತಿರುವ ಜನ ಇದ್ದಾರೆ. ಆದರೆ ವಿಪರ್ಯಾಸವೆಂದರೆ ಗ್ರಾಮದಲ್ಲಿ ಜನ ಸಾಯುತ್ತಿದ್ದರು ಬೆಳಗಾವಿ ಜಿಲ್ಲಾಡಳಿತ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಮೆಡಿಕಲ್ ಕ್ಯಾಂಪ್ ಮಾಡುವ ಅಗತ್ಯತೆ ಇದೆ. ಕ್ರಮ ಕೈಗೊಳ್ಳದ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಆದಷ್ಟು ಬೇಗ ಈ ಬಗ್ಗೆ ಅಧಿಕಾರಿಗಳು ಗಮನಹರಿಸಿ ಜನರ ಪ್ರಾಣ ಉಳಿಸಬೇಕಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿದೆ ವಿವಿಧ ಕಾಯಿಲೆಗಳು ಇನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮನ್ನೇಕೋಟೆ ಗ್ರಾಮದಲ್ಲಿ 25ದಿನದಲ್ಲಿ 15 ಜನ ಮೃತಪಟ್ಟಿದ್ದರು. ಹಾಗೂ ಗದಗ ಜಿಲ್ಲೆಯ ಕದಡಿ ಗ್ರಾಮದಲ್ಲಿ 10ದಿನದಲ್ಲಿ 10ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. ಹೀಗೆ ಅನೇಕ ಹಳ್ಳಿಗಳಲ್ಲಿ ವಿವಿಧ ರೀತಿಯ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದು ಅನೇಕರು ಬಲಿಯಾಗುತ್ತಿದ್ದಾರೆ.
ಇದನ್ನೂ ಓದಿ: ಸಚಿವ ಸಿ.ಸಿ ಪಾಟೀಲ್ ಸ್ವಕ್ಷೇತ್ರದಲ್ಲೂ ಎದುರಾಗಿದೆ ಸಮಸ್ಯೆ, ಕೊರೊನಾಗಿಂತ ಬೇರೆ ಕಾಯಿಲೆಯಿಂದ ಸಾಯುತ್ತಿದ್ದಾರೆ ಜನ