ಬೆಂಗಳೂರು: 10ಕ್ಕೂ ಹೆಚ್ಚು ಬಿಜೆಪಿ ಕಾರ್ಪೋರೇಟರ್ಗಳು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.
ಅನರ್ಹರ ಕ್ಷೇತ್ರಗಳಲ್ಲಿರುವ 10ಕ್ಕೂ ಹೆಚ್ಚು ಕಾರ್ಪೋರೇಟರ್ಗಳು, ಮಾಜಿ ಕಾರ್ಪೋರೇಟರ್ಗಳು ರಾಮಲಿಂಗಾರೆಡ್ಡಿ ಅವರ ಜೊತೆ ಸಂಪರ್ಕದಲ್ಲಿದ್ದಾರೆ. ಕೆಲ ಮಾಜಿ ಕಾರ್ಪೋರೇಟರ್ಗಳು ರಾಮಲಿಂಗಾರೆಡ್ಡಿ ಜತೆ ಚರ್ಚೆ ನಡೆಸಿದ್ದು,ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ.
ತಮ್ಮ ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಟಿಕೆಟ್ ಪಡೆದುಕೊಂಡಿದ್ದಾರೆ. ಕ್ಷೇತ್ರಗಳಲ್ಲಿ ನಾಯಕತ್ವ ಬದಲಾವಣೆಯಾಗಿದೆ. ಈ ಹಿನ್ನೆಲೆ ಮುಂದಿನ ಚುನಾವಣೆಗಳಲ್ಲಿ ಟಿಕೆಟ್ ಸಿಗುವ ಬಗ್ಗೆ ಅನುಮಾನ ಉಂಟಾಗಿದೆ. ಹೀಗಾಗಿ ಕಾರ್ಪೋರೇಟರ್ಗಳು ರಾಮಲಿಂಗಾರೆಡ್ಡಿ ಜೊತೆ ಚರ್ಚೆ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ರಾಮಲಿಂಗಾರೆಡ್ಡಿ. ರಾಜಕೀಯ ಅಸ್ತಿತ್ವದ ಪ್ರಶ್ನೆ ಬಂದಾಗ ಇದೆಲ್ಲಾ ಸಹಜ, ಸಮಯ ಬಂದಾಗ ಎಲ್ಲ ವಿಷಯ ಹೇಳ್ತೇನೆ ಎಂದಿದ್ದಾರೆ.
Published On - 7:22 am, Tue, 19 November 19