ರಾಯಚೂರಿನಲ್ಲಿ ವಾಲ್ಮೀಕಿ ಭವನದ ಮೇಲೆಯೇ ಮಸೀದಿ ನಿರ್ಮಾಣ: ಏನಿದು ವಿವಾದ?

ರಾಯಚೂರಿನ ಸಿಂಧನೂರು ತಾಲ್ಲೂಕಿನ ಗೋನವಾರದಲ್ಲಿ ವಾಲ್ಮೀಕಿ ಭವನದ ಮೇಲೆ ಮಸೀದಿ ನಿರ್ಮಿಸಿದಕ್ಕೆ ವಿವಾದ ಉಂಟಾಗಿದೆ. ವಾಲ್ಮೀಕಿ ಸಮುದಾಯದವರು ಅಕ್ರಮ ಕಟ್ಟಡ ತೆರವುಗೊಳಿಸುವಂತೆ ಆಗ್ರಹಿಸುತ್ತಿದ್ದಾರೆ. ಅಧಿಕಾರಿಗಳು ಗ್ರಾಮಸಭೆ ನಡೆಸಿದರೂ ಸಮಸ್ಯೆ ಇತ್ಯರ್ಥವಾಗಿಲ್ಲ. ಈ ವಿವಾದ ಬೂದಿ ಮುಚ್ಚಿದ ಕೆಂಡದಂತಾಗಿದೆ.

ರಾಯಚೂರಿನಲ್ಲಿ ವಾಲ್ಮೀಕಿ ಭವನದ ಮೇಲೆಯೇ ಮಸೀದಿ ನಿರ್ಮಾಣ: ಏನಿದು ವಿವಾದ?
ರಾಯಚೂರಿನಲ್ಲಿ ವಾಲ್ಮೀಕಿ ಭವನದ ಮೇಲೆಯೇ ಮಸೀದಿ ನಿರ್ಮಾಣ: ಏನಿದು ವಿವಾದ?
Follow us
ಭೀಮೇಶ್​​ ಪೂಜಾರ್
| Updated By: ಗಂಗಾಧರ​ ಬ. ಸಾಬೋಜಿ

Updated on: Nov 14, 2024 | 9:20 PM

ರಾಯಚೂರು, ನವೆಂಬರ್​ 14: ಗಡಿ ಜಿಲ್ಲೆ ರಾಯಚೂರಿನಲ್ಲಿ ವಾಲ್ಮೀಕಿ ಭವನದ (Valmiki Bhavan) ಮೇಲೆಯೇ ಮಸೀದಿ ನಿರ್ಮಾಣ ಮಾಡಿರುವ ವಿವಾದ ಪ್ರಕರಣ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ. ಅನ್ಯಕೋಮಿನ ಜನ ಅಕ್ರಮ ಕಟ್ಟಡ ಕಟ್ಟಿರುವ ಆರೋಪದ ಬಗ್ಗೆ ಅಧಿಕಾರಿಗಳು ಗ್ರಾಮ ಸಭೆ ನಡೆಸಿದರೂ, ಪ್ರಕರಣ ಇತ್ಯರ್ಥವಾಗಿಲ್ಲ. ಈ ವೇಳೆ ಹೈಡ್ರಾಮೇ ನಡೆದುಹೋಗಿದೆ.

ವಾಲ್ಮೀಕಿ ಭವನದ ಮೇಲೆ ಮಸೀದಿ ಕಟ್ಟಣ ನಿರ್ಮಾಣ

ರಾಯಚೂರಿನಲ್ಲಿ ವಾಲ್ಮೀಕಿ ಭವನದ ಮೇಲೆ ಮಸೀದಿ ನಿರ್ಮಾಣ ಮಾಡಲಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಗೋನವಾರ ಗ್ರಾಮದಲ್ಲಿರುವ ವಾಲ್ಮೀಕಿ ಭವನದ ಮೇಲೆ ಮಸೀದಿ ಕಟ್ಟಣ ನಿರ್ಮಾಣ ಮಾಡಲಾಗಿದೆ. ಗೋನವಾರ ಗ್ರಾಮದಲ್ಲಿರುವ ವಾಲ್ಮೀಕಿ ಭವನವನ್ನ 2014-25 ನೇ ಸಾಲಿನಲ್ಲಿ 4 ಲಕ್ಷ 98 ಸಾವಿರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು.

ಇದನ್ನೂ ಓದಿ: ರಾಯಚೂರು: 10 ತಿಂಗಳಲ್ಲಿ ರಸ್ತೆ ಅಪಘಾತದಲ್ಲಿ 240 ಸಾವು, ಬೈಕ್ ಸವಾರರಿಗೆ ಇನ್ನಷ್ಟು ಕಠಿಣ ರೂಲ್ಸ್

ಆ ಬಳಿಕ ಆ ಭವನದ ಮೇಲೆ ಅನ್ಯಕೋಮಿನಿಂದ 2016-17 ರಲ್ಲಿ ಒಂದು ಕೊಠಡಿ ನಿರ್ಮಾಣ ಮಾಡಲಾಗಿತ್ತು. ಜನರ ಬಳಕೆಗೆ ಆ ಕೊಠಡಿ ಬಳಕೆ ಆಗತ್ತೆ ಅಂತ ವಾಲ್ಮೀಕಿ ಸಮುದಾಯದ ಜನರು ಸುಮ್ಮನಿದ್ದರು. ಕಾಲಕ್ರಮೇಣ ಅಲ್ಲಿ 2019ರಲ್ಲಿ ಆ ಕಟ್ಟಡದ ಮೇಲೆ ಗುಂಬಜ್ ನಿರ್ಮಿಸಿ ಆ ಕಟ್ಟಡದಲ್ಲಿ ಬೇರೆ ಕೋಮಿನ ಧಾರ್ಮಿಕ ಚಟುವಟಿಕೆಗಳನ್ನ ಶುರು ಮಾಡಲಾಗಿದೆಯಂತೆ. ಈ ಬಗ್ಗೆ ಸ್ಥಳೀಯ ವಾಲ್ಮೀಕಿ ಸಮುದಾಯದ ಮುಖಂಡರು ಹೋರಾಟಕ್ಕಿಳಿದಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಈ ವಿವಾದ ದೊಡ್ಡದಾಗುತ್ತಿದ್ದಂತೆಯೇ ಅಧಿಕಾರಿಗಳು ಅಲರ್ಟ್ ಆಗಿದ್ದರು. ವಾಲ್ಮೀಕಿ ಸಮುದಾಯದ ಮುಖಂಡರು ಈ ಬಗ್ಗೆ ಮಾಹಿತಿ ಕಲೆ ಹಾಕಿದಾಗ ವಿವಾದಿತ ಸ್ಥಳ ವಾಲ್ಮೀಕಿ ಭವನಕ್ಕೆ ಸೇರಿದ್ದು, ಅಂತಲೇ ದಾಖಲೆಗಳಲ್ಲಿ ಉಲ್ಲೇಖವಿದೆ. ಆದರೆ ಅಧಿಕಾರಿಗಳು ಅನಧಿಕೃತ ಕಟ್ಟಡ ಅಂತ ಹೇಳ್ತಿದ್ದಾರೆ ಹೊರತು ಅದನ್ನ ತೆರವುಗೊಳಿಸಲು ಮುಂದಾಗುತ್ತಿಲ್ಲವಂತೆ. ಇದು ವಾಲ್ಮೀಕಿ ಸಮುದಾಯವನ್ನ ಕೆರಳಿಸಿದೆ.

ಇದೇ ಕಾರಣಕ್ಕೆ ನಿನ್ನೆ ಗೋನವಾರ ಗ್ರಾಮದಲ್ಲಿ ಪೊಲೀಸ್ ಅಧಿಕಾರಿಗಳು, ಸಿಂಧನೂರು ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ಸಭೆ ನಡೆದಿದೆ. ಈ ವೇಳೆ ವಾಲ್ಮೀಕಿ ಸಮುದಾಯದ ಮುಖಂಡರು ಅನಧಿಕೃತ ಕಟ್ಟಡ ತೆರುವುಗೊಳಿಸಿ ಅಂತ ಪಟ್ಟು ಹಿಡಿದಿದ್ದಾರೆ. ಈ ವೇಳೆ ಅಧಿಕಾರಿಗಳು ಹೋರಾಟಗಾರರ ಮಧ್ಯೆ ವಾಗ್ವಾದ ಕೂಡ ನಡೆದಿದೆ. ಆದರೆ ದಾಖಲೆಗಳಲ್ಲಿ ಸ್ಪಷ್ಟವಾಗಿ ವಾಲ್ಮೀಕಿ ಸಮುದಾಯದ ಕಟ್ಟಡ ಅಂತಿದ್ದರೂ ಅಧಿಕಾರಿಗಳ ಕ್ರಮಕೈಗೊಳ್ಳಲು ಮೀನಮೇಷ ಎಣಿಸುತ್ತಿರುವುದರಿಂದ ವಿರುದ್ಧ ಹೋರಾಟಗಾರರು ಕೆರಳಿದ್ದು, ನಮಗೆ ನ್ಯಾಯ ಬೇಕು ಅಂತ ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ರಾಯಚೂರು: ರೊಟ್ಟಿ, ಬೆಂಡೆಕಾಯಿ ಪಲ್ಯ ಸೇವಿಸಿದ್ದ 7 ಜನರು ಅಸ್ವಸ್ಥ

ಈಗಲಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ತಪ್ಪಿತಸ್ಥರ ವಿರುದ್ಧ ಕಾನೂನಿನಡಿ ಕೇಸ್ ದಾಖಲಿಸಬೇಕು. ಇಲ್ಲದಿದ್ದರೆ ಬೂದಿ ಮುಚ್ಚಿದ ಕೆಂಡದಂತಿರುವ ಪ್ರಕರಣ ಯಾವಾಗ ಬೇಕಾದರೂ ದೊಡ್ಡ ವಿವಾದಕ್ಕೆ ದಾರಿ ಮಾಡಿಕೊಡುವುದರಲ್ಲಿ ಅನುಮಾನವಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ