ಮರಕ್ಕೆ ಕಾರು ಡಿಕ್ಕಿ: ತಾಯಿ, ಮಗಳು ಸ್ಥಳದಲ್ಲೇ ಸಾವು, ಯಾವೂರಲ್ಲಿ?
ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸೌಂದಲಗಾ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಬೆಳಗಾವಿ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸೌಂದಲಗಾ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ವೇಳೆ, ವಾಹನದಲ್ಲಿದ್ದ ಲತಾ ಪಾಟೀಲ್(38) ಹಾಗೂ ಅನಿಷಾ ಪಾಟೀಲ್ (16) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಇನ್ನು ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು ನಿಪ್ಪಾಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನದಲ್ಲಿದ್ದವರು ಸಾಂಗ್ಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದರು. ನಿಪ್ಪಾಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 11:14 pm, Sun, 7 February 21