ಪ್ರತ್ಯೇಕ ಘಟನೆ: ಭೀಕರ ಅಪಘಾತದಲ್ಲಿ ತಾಯಿ-ಮಗು ಸಾವು, ಎದೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

| Updated By: ರಮೇಶ್ ಬಿ. ಜವಳಗೇರಾ

Updated on: Jan 15, 2023 | 11:19 PM

ಪ್ರತೇಕವಾಗಿ ನಡೆದ ಘಟನೆಯಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತದಲ್ಲಿ ತಾಯಿ-ಮಗು ಮೃತಪಟ್ಟಿದ್ದರೆ, ಮಡಿಕೇರಿಯಲ್ಲಿ ಯುವ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪ್ರತ್ಯೇಕ ಘಟನೆ: ಭೀಕರ ಅಪಘಾತದಲ್ಲಿ ತಾಯಿ-ಮಗು ಸಾವು, ಎದೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ
ಬೈಕ್ ಮತ್ತು ಕಾರು ನಡುವೆ ಡಿಕ್ಕಿ
Follow us on

ರಾಯಚೂರು: ಎಲ್ಲಡೆ ಮಕರ ಸಂಕ್ರಾಂತಿ ಹಬ್ಬ ಮನೆ ಮಾಡಿದ್ದರೆ, ಇತ್ತ ರಾಯಚೂರು (Raichur) ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಭೀಕರ ರಸ್ತೆ ಅಪಘಾತ(Road Accident) ಸಂಭವಿಸಿದ್ದು, ತಾಯಿ-ಮಗ ದುರಂತ ಅಂತ್ಯ ಕಂಡಿದ್ದಾರೆ. ಕಾರು (Car) ಮತ್ತು ಬೈಕ್(Bike) ನಡುವೆ ಡಿಕ್ಕಿ ಸಂಭವಿಸಿ ತಾಯಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಅಯ್ಯೋ ವಿಧಿಯೇ..! ರೇವಣಸಿದ್ದೇಶ್ವರ ಬೆಟ್ಟದಲ್ಲಿ ಯಾರೋ ಹಚ್ಚಿದ ಬೆಂಕಿಗೆ ಆಹುತಿಯಾದ ಪಾದಯಾತ್ರಿ

ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಬೈಕ್ ನಲ್ಲಿದ್ದ ತಾಯಿ ಭಾರತಿ(29) ಹಾಗೂ, ಮಗ ಉದಯ್ ಸಿಂಗ್ (11) ಮೃತ ದುರ್ವೈವಿಗಳು. ಇನ್ನು ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಮುದಗಲ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ತಾಯಿ ಮಗ ಲಿಂಗಸುಗೂರು ತಾಲ್ಲೂಕಿನ ಯರದೊಡ್ಡಿ ತಾಂಡಾದ ನಿವಾಸಿಗಳು ಎಂದು ತಿಳಿದುಬಂದಿದೆ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಟಾ ಏಸ್ ಡಿಕ್ಕಿಯಾಗಿ ಬೈಕ್‌ ಸವಾರ ದುರ್ಮರಣ

ಇನ್ನು ತುಮಕೂರಿನ ಜಯನಗರದ ಮಿನಿ ಮಾರ್ಕೆಟ್ ಬಳಿ ಟಾಟಾ ಏಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಟಾಟ ಏಸ್ ಹಾಗೂ ಬೈಕ್ ನಡುವೆ ಡಿಕ್ಕಿ ಬೈಕ್ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಸುಮಾರು 40 ವರ್ಷದ ವ್ಯಕ್ತಿ. ಆದ್ರೆ, ಮೃತನ ಗುರುತು ಪತ್ತೆಯಾಗಿಲ್ಲ.

ಎದೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮಡಿಕೇರಿ: 26 ವರ್ಷದ ಯುವಕನೊಬ್ಬ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು(ಜ.15) ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗರ್ವಾಲೆ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್​, ಇಂದು ಗರ್ವಾಲೆ ಗ್ರಾಮದ ಕಾಫಿತೋಟದಲ್ಲಿ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಮಾದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.