ಸರ್ಕಾರಿ ಆಸ್ಪತ್ರೆಯ ಬಚ್ಚಲಲ್ಲಿ ನವಜಾತ ಶಿಶು ಹತ್ಯೆ; ಆರೋಪಿ ತಾಯಿ ಅರೆಸ್ಟ್

ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ಶಿಶು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತಾಮಣಿ ನಗರ ಪೊಲೀಸರು ಆರೋಪಿ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ.

ಸರ್ಕಾರಿ ಆಸ್ಪತ್ರೆಯ ಬಚ್ಚಲಲ್ಲಿ ನವಜಾತ ಶಿಶು ಹತ್ಯೆ; ಆರೋಪಿ ತಾಯಿ ಅರೆಸ್ಟ್
ಹತ್ಯೆಯಾದ ನತದೃಷ್ಟ ಮಗು
Follow us
TV9 Web
| Updated By: ಆಯೇಷಾ ಬಾನು

Updated on: Jul 05, 2021 | 9:52 AM

ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ಶಿಶು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತಾಮಣಿ ನಗರ ಪೊಲೀಸರು ಆರೋಪಿ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ. ಚಾಕವೇಲು ನಿವಾಸಿ ಮಮತಾ(29) ಬಂಧಿತ ಮಹಿಳೆ. ಆಸ್ಪತ್ರೆಯ ಸಿಸಿಟಿವಿ ದೃಶ್ಯ ಆಧರಿಸಿ ಮಹಿಳೆಯನ್ನು ಬಂಧಿಸಲಾಗಿದೆ.

ಘಟನೆ ಹಿನ್ನೆಲೆ ಚಿಕ್ಕಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಜೂನ್ 3ರಂದು ಈ ಹೃದಯವಿದ್ರಾವಕ ಕೃತ್ಯ ನಡೆದಿದ್ದು, ಆಗತಾನೇ ಹುಟ್ಟಿದ ಮಗುವನ್ನು ಬಚ್ಚಲ ಕೋಣೆಯ ಕಿಟಕಿಗೆ ನೇತುಹಾಕಲಾಗಿದೆ. ಆಸ್ಪತ್ರೆಯ ಸಿಬ್ಬಂದಿ ಆಸ್ಪತ್ರೆಯನ್ನು ಸ್ವಚ್ಚಗೊಳಿಸುತ್ತಿದ್ದಾಗ ಬೆಳಗ್ಗೆ 8 ಗಂಟೆ ಸಮಯದಲ್ಲಿ ಬಚ್ಚಲಿನ ಬಾಗಿಲು ಬಂದ್ ಆಗಿತ್ತು, ಸ್ವಚ್ಚಗೊಳಿಸಲೆಂದು ಎರಡು ಮೂರು ಸಲ ಹೋದಾಗಲೂ ಬಾಗಿಲು ಹಾಕಿತ್ತು. ನಂತರ ಬೆಳಗ್ಗೆ 9 ಗಂಟೆ ಸಮಯದಲ್ಲಿ ಹೋಗಿ ನೋಡಿದಾಗ ಅಲ್ಲಿ ಹೆರಿಗೆಯಾದ ವಾಸನೆ ಬಂದಿದೆ. ತಕ್ಷಣ ಸಿಬ್ಬಂದಿ ಆಚೀಚೆ ನೋಡಿ ಕಣ್ಣೆತ್ತಿ ಗಮನ ಹರಿಸಿದಾಗ ಆಗ ತಾನೆ ಜನಿಸಿದ ಹೆಣ್ಣು ನವಜಾತ ಶಿಶು ನೇತಾಡುತ್ತಿರುವುದು ಕಂಡುಬಂದಿದೆ.

ನವಜಾತ ಶಿಶುವನ್ನು ನೇತು ಹಾಕಿದ್ದನ್ನು ನೋಡಿ ಗಾಬರಿಗೊಂಡ ಆಸ್ಪತ್ರೆ ಸಿಬ್ಬಂದಿ ವೆಂಕಟೇಶ ಕೂಡಲೇ ವಿಷಯವನ್ನು ಕರ್ತವ್ಯ ನಿರತ ವೈದ್ಯ ಡಾ.ಜಯರಾಮ್ ಅವರಿಗೆ ತಿಳಿಸಿದ್ದಾರೆ. ತಕ್ಷಣ ವೈದ್ಯರು, ದಾದಿಯರು ಬಂದು ಪರಿಶೀಲಿಸಿದಾಗ ಮಗು ನೇತಾಡುತ್ತಾ ಉಸಿರಾಡುತ್ತಿತ್ತು. ತಡಮಾಡದೇ ಚಿಕಿತ್ಸೆ ನೀಡಲು ವೈದ್ಯರು ಪ್ರಯತ್ನಿಸಿದರಾದರೂ ಅಷ್ಟರಲ್ಲಿ ನವಜಾತ ಶಿಶು ಮೃತಪಟ್ಟಿದೆ.

ಬಹುಶಃ ಹೆಣ್ಣು ಮಗು ಎಂಬ ಕಾರಣಕ್ಕೆ ಹೀಗೆ ಮಾಡಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ, ಹೆರಿಗೆ ನೋವು ಬಂದ ಕೂಡಲೇ ಆಸ್ಪತ್ರೆಗೆ ಬಂದು ಬಾತ್ರೂಮ್ ಒಳಗೆ ತೆರಳಿ ಹೆರಿಗೆ ಮಾಡಿಕೊಂಡಿದ್ದಾರೆ. ಆದರೆ ಹುಟ್ಟಿದ ಮಗು ಹೆಣ್ಣು ಎಂಬ ಕಾರಣಕ್ಕೆ ಶಿಶುವಿನ ಕುತ್ತಿಗೆಗೆ ನೇಣು ಬಿಗಿದು ಒಳಗಡೆಯಿಂದ ಹೊರಗಡೆ ತಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಮಗು ಕಿಟಕಿಯಲ್ಲಿ ಆಚೆ ತೂರಿಲ್ಲವಾದ್ದರಿಂದ ಅಲ್ಲೇ ಬಿಟ್ಟು ಗಾಬರಿಯಲ್ಲಿ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಚ್ಚಲಲ್ಲೇ ಹೆತ್ತು, ಮಗುವನ್ನು ನೇಣಿಗೆ ಹಾಕಿದ ತಾಯಿ; ಚಿಕ್ಕಬಳ್ಳಾಪುರ ಸರ್ಕಾರಿ ಆಸ್ಪತ್ರೆಯ ಕಿಟಕಿಯಲ್ಲಿ ನವಜಾತ ಶಿಶು ಪತ್ತೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್