ಕೌಟುಂಬಿಕ ಕಲಹ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

| Updated By: ವಿವೇಕ ಬಿರಾದಾರ

Updated on: Dec 13, 2022 | 9:39 PM

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಬಳಿಯ ಮುಳವಾಡ ಏತ ನೀರಾವರಿ ಕಾಲುವೆಗೆ ಹಾರಿ ಇಬ್ಬರು ಹೆಣ್ಣುಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೌಟುಂಬಿಕ ಕಲಹ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Follow us on

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ (Basavnbagevadi) ತಾಲೂಕಿನ ಉಕ್ಕಲಿ ಗ್ರಾಮದ ಬಳಿಯ ಮುಳವಾಡ ಏತ ನೀರಾವರಿ ಕಾಲುವೆಗೆ ಹಾರಿ ಇಬ್ಬರು ಹೆಣ್ಣುಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೇಣುಕಾ ಅಮೀನಪ್ಪ ಕೋನಿನ್(26), ಯಲ್ಲವ್ವ(2), ಅಮೃತಾ(1) ಮೃತ ದೃದೈವಿಗಳು. ರೇಣುಕಾ 2 ದಿನದ ಹಿಂದೆ ಪತಿ ಮನೆಯಲ್ಲಿ ಜಗಳವಾಡಿಕೊಂಡು ಮನೆ ಬಿಟ್ಟು ಬಂದಿದ್ದರು.

ಹೀಗಾಗಿ ಗಂಡನ ಮನೆಯವರು ರೇಣುಕಾ ಮತ್ತು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು. ಈ ಸಂಬಂಧ ಪತಿ ಮನೆಯವರು ಮನಗೂಳಿ ಪೊಲೀಸ್ ಠಾಣೆಗೆ ನಿನ್ನೆ (ಡಿ.10) ದೂರು ನೀಡಿದ್ದರು. ಇಂದು (ಡಿ.13) ಮುಳವಾಡ ಏತ ನೀರಾವರಿ ಕಾಲುವೆಯಲ್ಲಿ ರೇಣುಕಾ, ಓರ್ವ ಹೆಣ್ಣು ಮಗಳ ಶವ ಪತ್ತೆಯಾಗಿದೆ. ಮತ್ತೋರ್ವ ಹೆಣ್ಣು ಮಗುವಿನ ಶವಕ್ಕಾಗಿ ಸ್ಥಳಿಯರು ಹಾಗೂ ಪೊಲೀಸರಿಂದ ಶೋಧ ಕಾರ್ಯ ಮುಂದುವರೆಸಿದ್ದಾರೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಾವಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದ ಹೊರವಲಯದ ಬಾವಿಯಲ್ಲಿ ನಲವತ್ತು ವರ್ಷದ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಆಳಂದ ಪೊಲೀಸ್​​ ಠಾಣೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಮಾಡಲು ಮುಂದಾಗಿದ್ದಾರೆ.

ಸರ್ಕಾರಿ ಬಸ್ ಡಿಕ್ಕಿ, ಇಬ್ಬರ ಸಾವು

ತುಮಕೂರು: ಸರ್ಕಾರಿ ಬಸ್ ಡಿಕ್ಕಿಯಾಗಿ ಇಬ್ಬರ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ದೊಡ್ಡಗುಣಿ-ಕೊಂಡ್ಲಿ ಕ್ರಾಸ್ ನಡೆದಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಪಘಾತ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿ‌ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ

ರಾಮನಗರ: ಜಿಲ್ಲೆ ಮಾಗಡಿ ತಾಲೂಕಿನ ಬಾಣವಾಡಿ ಬಳಿ ಕಾರಿನಲ್ಲಿ‌ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಬೆಂಗಳೂರಿನ ನಾಗರಬಾವಿ ನಿವಾಸಿ ರಾಕೇಶ್ ಶರ್ಮಾ(45) ಅವರ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಕುದೂರು ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಹೋರಿ ತಿವಿದು ಓರ್ವ ಯುವಕ ಸಾವು

ಹಾವೇರಿ: ಹೋರಿ ತಿವಿದು ಓರ್ವ ಯುವಕ ಸಾವನ್ನಪ್ಪಿದ್ದು, 6 ಜನರು ಗಾಯಗೊಂಡಿರುವ ಘಟನೆ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಸಂಗೂರು ಗ್ರಾಮದ ಯುವಕ ಮೈಲಾರಪ್ಪ ಚಳ್ಳಕ್ಕನವರ(27) ಮೃತ ಯುವಕ. ವಾಸು ಲಮಾಣಿ, ಕುಮಾರ ಕಮ್ಮಾರ, ಸೊಮಣ್ಣ ಬಿಳಗಲಿ ಹಿರೇಹಳ್ಳಿ ಪ್ರಶಾಂತ‌ ಮುಡಿ, ವಿರೂಪಾಕ್ಷ ಹಾಗೂ ಹೊನ್ನಪ್ಪ ಕುರುಬರ ಗಾಯಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:26 pm, Tue, 13 December 22