ಹರಿಹರದಲ್ಲಿ 3 ವರ್ಷದ ಹೆಣ್ಣು ಮಗುವಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹ, ಪೋಷಕರ ಬೇಜವಾಬ್ದಾರಿ ಹಾಗೂ ಇತರ ಹಲವಾರು ಕಾರಣಗಳಿಂದಾಗಿ ಎಳೆಯ ಮಕ್ಕಳು ಅಮಾನುಷವಾಗಿ ಸಾವನ್ನಪ್ಪುತ್ತಿರುವುದು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿದೆ. ಇದೇ ಮಾದರಿಯ ಎರಡು ಪ್ರತ್ಯೇಕ ಪ್ರಕರಣಗಳು ರಾಜ್ಯದಲ್ಲಿ ಇಂದು ವರದಿಯಾಗಿವೆ.

ಹರಿಹರದಲ್ಲಿ 3 ವರ್ಷದ ಹೆಣ್ಣು ಮಗುವಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Digi Tech Desk

Updated on: Jul 03, 2021 | 4:15 PM

3 ವರ್ಷದ ಹೆಣ್ಣು ಮಗುವಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಮಗಳು ಹರ್ಷಿತಾ ಎಂಬ ಮೂರು ವರ್ಷದ ಮಗುವಿಗೆ ನೇಣು ಬಿಗಿದು ತಾಯಿ ಚಂದ್ರಮ್ಮ(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹವು ತಾಯಿ, ಮಗುವಿನ ಆತ್ಮಹತ್ಯೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಣ್ಣು ಮಗುವಿನ ಹತ್ಯೆ ರಾಜ್ಯದಲ್ಲಿ ಇಂದು ಎರಡನೇ ಬಾರಿ ವರದಿಯಾಗುತ್ತಿದೆ. ಇಂದು ಮುಂಜಾನೆ ಚಿಕ್ಕಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿನ ಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು. ಹುಟ್ಟಿದ ಮಗುವನ್ನು ಬಚ್ಚಲ ಕೋಣೆಯ ಕಿಟಕಿಗೆ ನೇತುಹಾಕಿ ಕೊಂದಿರುವ ಅಮಾನವೀಯ ಘಟನೆ ನಡೆದಿತ್ತು. ಕೌಟುಂಬಿಕ ಕಲಹ, ಪೋಷಕರ ಬೇಜವಾಬ್ದಾರಿ ಹಾಗೂ ಇತರ ಹಲವಾರು ಕಾರಣಗಳಿಂದಾಗಿ ಎಳೆಯ ಮಕ್ಕಳು ಅಮಾನುಷವಾಗಿ ಸಾವನ್ನಪ್ಪುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ.

ಇದನ್ನೂ ಓದಿ: ಬಚ್ಚಲಲ್ಲೇ ಹೆತ್ತು, ಮಗುವನ್ನು ನೇಣಿಗೆ ಹಾಕಿದ ತಾಯಿ; ಚಿಕ್ಕಬಳ್ಳಾಪುರ ಸರ್ಕಾರಿ ಆಸ್ಪತ್ರೆಯ ಕಿಟಕಿಯಲ್ಲಿ ನವಜಾತ ಶಿಶು ಪತ್ತೆ

ಇದನ್ನೂ ಓದಿ: ಮುಂಬೈ: ಕುಟುಂಬ ಕಲಹದಿಂದ ಮಕ್ಕಳಿಗೆ ಇಲಿ ಪಾಷಾಣ ನೀಡಿದ ತಂದೆ, 5 ವರ್ಷದ ಮಗು ಸಾವು

(Mother hanged her 3 years old daughter and commits suicide in Harihara Davanagere)

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ