Tumakuru: ಸೊಸೆ ಕಾಟಕ್ಕೆ ಅತ್ತೆ ಆತ್ಮಹತ್ಯೆ? ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ತುಮಕೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. 60 ವಷ್ಧ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಸೊಸೆ ಕಾಟಕವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಗುಬ್ಬಿ ತಾಲೂಕಿನ ಕಾರೇಕುರ್ಚಿ ಗ್ರಾಮದಲ್ಲಿ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಸೊಸೆ ವಿರುದ್ಧ ಚೇಳೂರು ಪೊಲೀಸರು ಆತ್ಮಹತ್ಯೆಗೆ ಪ್ರೇರಣೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

Tumakuru: ಸೊಸೆ ಕಾಟಕ್ಕೆ ಅತ್ತೆ ಆತ್ಮಹತ್ಯೆ? ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
ಮೃತ ಮಹಿಳೆ
Edited By:

Updated on: Jan 08, 2026 | 11:47 AM

ತುಮಕೂರು, ಜನವರಿ 08: ಅತ್ತೆ ಕಾಟಕ್ಕೆ ಸೊಸೆ ಮನೆಬಿಟ್ಟು ಹೋಗೋದು, ಗಂಡನಿಂದಲೇ ದೂರವಾಗೋ ಘಟನೆಗಳು ಮಾಮೂಲಾಗಿ ನಡೆಯುತ್ತಲೇ ಇರುತ್ತವೆ. ಆದ್ರೆ ಕಲ್ಪತರು ನಾಡು ತುಮಕೂರಲ್ಲಿ ಈ ಕೇಸ್​ ಉಲ್ಟಾ ಆಗಿದೆ. ಸೊಸೆ ಕಾಟಕ್ಕೆ ಬೇಸೆತ್ತು ಅತ್ತೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗುಬ್ಬಿ ತಾಲೂಕಿನ ಕಾರೇಕುರ್ಚಿ ಗ್ರಾಮದಲ್ಲಿ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಭ್ರಮರಾಂಬಿಕೆ (60) ಶವ ಪತ್ತೆಯಾಗಿದೆ.

ಘಟನೆ ಏನು?

ಸೊಸೆ ಕಾವ್ಯಶ್ರೀ ಪ್ರತ್ಯೇಕವಾಗಿ ಉಳಿಯಲು ಬಯಸಿದ್ದಳು. ಇದೇ ಕಾರಣಕ್ಕೆ ಅಡುಗೆ ಸೇರಿ ಎಲ್ಲವನ್ನೂ ಪ್ರತ್ಯೇಕವಾಗಿ ಮಾಡಿಕೊಳ್ಳುತ್ತಿದ್ದಳು. ಅಲ್ಲದೆ ಈ ನಡುವೆ ಗಂಡನನ್ನು ಬೆಂಗಳೂರಿಗೆ ಕರೆದೊಯ್ಯುವ ಬಗ್ಗೆಯೂ ಮಾತನಾಡುತ್ತಿದ್ದಳು. ಹೀಗಾಗಿ ಎಲ್ಲಿ ಮಗನನ್ನ ಸೊಸೆ ತನ್ನಿಂದ ದೂರ ಮಾಡ್ತಾಳೋ ಎನ್ನುವ ಭಯಕ್ಕೆ ಅತ್ತೆ ಭ್ರಮರಾಂಬಿಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ನಿನ್ನೆ ಬೆಳಗ್ಗೆ ಅನುಮಾನಾಸ್ಪದ ಸ್ಥಿತಿಯಲ್ಲಿ ಭ್ರಮರಾಂಬಿಕೆ ಶವ ಫಾರ್ಮ್​ಹೌಸ್​​ನಿಂದ 200 ಮೀಟರ್ ದೂರವಿರುವ ಪಂಪ್​ಹೌಸ್​​ನಲ್ಲಿ ಪತ್ತೆಯಾಗಿದೆ. ತಾಯಿ ನೇಣುಬಿಗಿದ ಸ್ಥಿಯಲ್ಲಿರೋದನ್ನು ಕಂಡ ಮಗ ಮನುಕುಮಾರ್ ಶವ ಕೆಳಗಿಳಿಸಿದ್ದ. ಬಳಿಕ ಚೇಳೂರು ಪೊಲೀಸರಿಗೆ ಮಾಹಿತಿ ನೀಡಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ; ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ!

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಘಟನೆ ಬಗ್ಗೆ ಆರಂಭದಲ್ಲಿ ಅನುಮಾನ ಟಪಟ್ಟಿದ್ದರು. ಮೃತ ಮಹಿಳೆಯ ಒಂದು ಕಣ್ಣಿನ ಗುಡ್ಡೆ ನಾಪತ್ತೆಯಾಗಿದ್ದ ಕಾರಣ, ಇದು ಕೊಲೆಯಾಗಿರಬಹುದೆಂಬ ಲೆಕ್ಕಾಚಾರ ಹಾಕಿದ್ದರು. ಆದರೆ ಈ ಬಗ್ಗೆ ಪರಿಶೀಲನೆ ನಡೆಸಿದಾಗ ಮಧ್ಯರಾತ್ರಿ 1.45ರ ಸುಮಾರಿಗೆ ಫಾರ್ಮ್​​ಹೌಸ್​​ನಿಂದ 200 ಮೀಟರ್ ದೂರದ ಪಂಪ್ ಹೌಸ್​ ಭ್ರಮರಾಂಬಿಕೆ ತಾವೇ ನಡೆದುಕೊಂಡುಬಂದು ಆತ್ಮಹತ್ಯೆಗೆ ಶರಣಾಗಿರೋದು ದೃಢಪಟ್ಟಿದೆ. ನೇಣು ಬಿಗಿದ ಸ್ಥಿತಿಯಲ್ಲಿದ್ದ ಶವ ಕೆಳಗಿಳಿಸುವಾಗ ಕಣ್ಣಿಗೆ ಗಾಯವಾದ ಸಂಗತಿ ಗೊತ್ತಾಗಿದೆ. ಆತ್ಮಹತ್ಯೆಗೆ ಪ್ರೇರಣೆ ನೀಡಿರುವ ಆರೋಪದಡಿ ಸೊಸೆ ಕಾವ್ಯಶ್ರೀ ವಿರುದ್ಧ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.