ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ
ಈ ಕರುಣಾಜನಕ ಘಟನೆಗೆ ಕೌಟುಂಬಿಕ ಕಲಹವೇ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಾಲ್ಕು ಜನರ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ವಿಜಯಪುರ: ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ತಾಂಡಾ 1 ರ ತೋಟವೊಂದರಲ್ಲಿ ನಡೆದಿದೆ. ಅನಿತಾ ಪಿಂಟು ಜಾಧವ್ (27) ಮೂರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪ್ರವೀಣ (6) ಸುದೀಪ (4) ಮತ್ತು ಮಮದಿಕಾ (2) ಎಂಬ ಮೂರು ಮಕ್ಕಳನ್ನು ಕೃಷಿ ಹೊಂಡದಲ್ಲಿ ಎಸೆದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನಿತಾ.
ಈ ಕರುಣಾಜನಕ ಘಟನೆಗೆ ಕೌಟುಂಬಿಕ ಕಲಹವೇ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಾಲ್ಕು ಜನರ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೊಬೈಲ್ನಲ್ಲಿ ಮಾತಾಡಬೇಡಿ ಎಂದಿದ್ದಕ್ಕೆ ಪೆಟ್ರೋಲ್ ಬಂಕ್ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ
ಬೆಂಗಳೂರು: ಮೊಬೈಲ್ನಲ್ಲಿ ಮಾತಾಡಬೇಡಿ ಎಂದಿದ್ದಕ್ಕೆ ಪೆಟ್ರೋಲ್ ಬಂಕ್ ಮಹಿಳಾ ಸಿಬ್ಬಂದಿ ಮಂಜುಳಾ ಎಂಬುವವರ ಮೇಲೆ ದಾಸರಹಳ್ಳಿಯ ಗಿರೀಶ್ ಎಂಬಾತ ಹಲ್ಲೆ ಮಾಡಿದ್ದಾನೆ. ಬೆಂಗಳೂರಿನ ಹೆಸರಘಟ್ಟ ರಸ್ತೆಯ ಪೆಟ್ರೋಲ್ ಬಂಕ್ನಲ್ಲಿ ಈ ಘಟನೆ ನಡೆದಿದೆ. ಹಲ್ಲೆ ವೇಳೆ ಪೇಟಿಎಂ ಮಷಿನ್ ಸಂಪೂರ್ಣ ಜಖಂಗೊಂಡಿದೆ. ಇತರೆ ಸಿಬ್ಬಂದಿ ಮತ್ತು ಸ್ಥಳೀಯರ ನೆರವಿನಿಂದ ಆರೋಪಿಯನ್ನು ಹಿಡಿದು, ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ: ಹೊಸಪೇಟೆಯಲ್ಲಿ ಗುತ್ತಿಗೆದಾರನ ಮನೆ ಮೇಲೆ ಐಟಿ ದಾಳಿ, ಎಸಿಬಿ ಬಲೆಗೆ ಆರ್ಟಿಒ ಟೈಪಿಸ್ಟ್, ವಾಹನ ಕಳ್ಳರ ಬಂಧನ
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:11 pm, Wed, 15 June 22