ಸಂಸದ ಜಿಎಂ ಸಿದ್ದೇಶ್ವರ್ ಪತ್ನಿ ಅಡುಗೆ ಮಾಡುವುದಕ್ಕೆ ಲಾಯಕ್ಕು: ಶಾಮನೂರು ಶಿವಶಂಕರಪ್ಪ

| Updated By: ಗಂಗಾಧರ​ ಬ. ಸಾಬೋಜಿ

Updated on: Mar 29, 2024 | 9:18 PM

ದಾವಣಗೆರೆಯಿಂದ ಗೆದ್ದು ಮೋದಿಗೆ ಕಮಲ ಅರ್ಪಿಸುತ್ತೇನೆ ಅಂತಾರೆ. ಮೊದಲು ಜಿಲ್ಲೆಯ ಸಮಸ್ಯೆ ಬಗ್ಗೆ ತಿಳಿಯಲಿ. ‘ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ಲಾಯಕ್ಕು’ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಪತ್ನಿ ಗಾಯತ್ರಿ ವಿರುದ್ಧ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಾಗ್ದಾಳಿ ಮಾಡಿದ್ದಾರೆ.

ಸಂಸದ ಜಿಎಂ ಸಿದ್ದೇಶ್ವರ್ ಪತ್ನಿ ಅಡುಗೆ ಮಾಡುವುದಕ್ಕೆ ಲಾಯಕ್ಕು: ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ, ಜಿ.ಎಂ.ಸಿದ್ದೇಶ್ವರ್ ಪತ್ನಿ
Follow us on

ದಾವಣಗೆರೆ, ಮಾರ್ಚ್​​ 29: ದಾವಣಗೆರೆಯಿಂದ ಗೆದ್ದು ಮೋದಿಗೆ ಕಮಲ ಅರ್ಪಿಸುತ್ತೇನೆ ಅಂತಾರೆ. ಮೊದಲು ಜಿಲ್ಲೆಯ ಸಮಸ್ಯೆ ಬಗ್ಗೆ ತಿಳಿಯಲಿ. ‘ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ಲಾಯಕ್ಕು’ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಪತ್ನಿ ಗಾಯತ್ರಿ ವಿರುದ್ಧ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ವಾಗ್ದಾಳಿ ಮಾಡಿದ್ದಾರೆ. ನಗರದ ಬಂಟರ ಭವನದಲ್ಲಿ ನಡೆದ ಕಾಂಗ್ರೆಸ್ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂಸದ ಜಿ.ಎಂ.ಸಿದ್ದೇಶ್ವರ್ ಪತ್ನಿ ಅಡುಗೆ ಮಾಡುವುದಕ್ಕೆ ಲಾಯಕ್ಕು ಎಂದು ಹೇಳಿದ್ದಾರೆ.

ಶಾಮನೂರು ಹೇಳಿಕೆಗೆ ಗಾಯತ್ರಿ ಸಿದ್ದೇಶ್ವರ್ ಟಾಂಗ್ 

ಶಾಮನೂರು ಶಿವಶಂಕರಪ್ಪ ಅವರ ಈ ಹೇಳಿಕೆಗೆ ಇದೀಗ ಆಕ್ರೋಶಕ್ಕೆ ಕಾರಣವಾಗಿದ್ದು, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಟಾಂಗ್ ನೀಡಿದ್ದಾರೆ. ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಮುನ್ನುಗ್ಗುತ್ತಿದ್ದಾರೆ. ಆಕಾಶದಲ್ಲಿ ಹಾರುವ ಹಂತಕ್ಕೂ ಹೋಗಿದ್ದಾರೆ. ಎಲ್ಲಾ ಕ್ಷೇತ್ರದಲ್ಲಿ ಮುನ್ನುಗ್ಗುತ್ತಿರುವ ವಿಚಾರ ಅಜ್ಜಗೆ ಗೊತ್ತಿಲ್ಲ ಅಂತಾ ಕಾಣಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ದಾವಣಗೆರೆ ಬಿಜೆಪಿಯಲ್ಲಿನ ಭಿನ್ನಮತ ಶಮನ ಯತ್ನ ವಿಫಲ, ಕೋಪದಿಂದಲೇ ಹೋದ ಶಿಷ್ಯ ರೇಣುಕಾಚಾರ್ಯ

ಶಾಮನೂರು ಮಹಿಳೆಯರಿಗೆ ಅಗೌರವ ತೋರಿದ್ದಾರೆ. ಅಡುಗೆ ಮಾಡಿ ಕೈ ತುತ್ತು ಕೊಡುವ ಪ್ರೀತಿ ಅವರಿಗೆ ಗೊತ್ತಿಲ್ಲ. ನಾವೆಲ್ಲ ಮಹಿಳೆಯರು ಅಡುಗೆ ಮಾಡೋಕೆ ಮಾತ್ರ ಸೀಮಿತನಾ. ಮಹಿಳೆ ಅಡುಗೆನೂ ಮಾಡುತ್ತಾಳೆ, ಆಕಾಶದಲ್ಲೂ ಹಾರಾಡುತ್ತಾಳೆ. ಮೋದಿಜಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತಿದ್ದಾರೆ. ಆದರೆ ಇಂತಹವರು ಮಹಿಳೆಯರಿಗೆ ಅಪಮಾನ ಮಾಡುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇನ್ನು ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಶಮನವಾಗಿಲ್ಲ. ಹೀಗಾಗಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವ ಒಬ್ಬಂಟಿಯಾಗಿದ್ದಾರೆ. ವಾರ್ಡ್ ಮಟ್ಟದ ಕಾರ್ಯಕರ್ತರನ್ನ ಕರೆದುಕೊಂಡು ಪುತ್ರ ಜಿಎಸ್ ಅನಿತ್ ಕುಮಾರ ಜೊತೆ ಮತಯಾಚನೆಗೆ ಮುಂದಾಗಿದ್ದರು.

ಇದನ್ನೂ ಓದಿ: ಅವರಿಬ್ಬರೂ ಮಹಿಳೆಯರು-ಬೀಗರು, ಈ ಹಿಂದೆ ಅವರ ಗಂಡಂದಿರೂ ಪರಸ್ಪರ ಎದುರಾಳಿ ಆಗಿದ್ದವರು… ಏನಿದು ದಾವಣಗೆರೆಯ ಕದನ ಕುತೂಹಲ!

ಪರಿಸ್ಥಿತಿ ಗಂಭೀರತೆ ಅರಿತು ಬಿಜೆಪಿ ಅಭ್ಯರ್ಥಿ ಪತಿ ಸಂಸದ ಜಿಎಂ ಸಿದ್ದೇಶ್ವರ ಮಾಜಿ ಸಚಿವ ಎಸ್ ಎ ರವೀಂದ್ರನಾಥ ಮನೆಗೆ ಭೇಟಿ ನೀಡಿದ್ದಾರೆ. ಕೆಲ ಹೊತ್ತು‌ಮಾತು ಕತೆ ಮಾಡಿದ್ದು, ಚುನಾವಣಾ ಸಿದ್ದತಾ ಸಭೆಗೆ ಬರುವಂತೆ ಆಹ್ವಾನಿಸಲಾಗಿದೆ. ನಿನ್ನೆ ದಾವಣಗೆರೆ ಭೇಟಿ ನೀಡಿದ್ದ ಮಾಜಿ‌ ಸಿಎಂ‌ ಬಿಎಸ್ ಯಡಿಯೂರಪ್ಪ ಭಿನ್ನಮತ ಶಮನ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.