ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುವುದಿಲ್ಲ: ಸಂಸದ ಪ್ರತಾಪ್​ ಸಿಂಹ ಸ್ಪಷ್ಟನೆ

ಈ ಬಾರಿ ಸಂಸದ ಪ್ರತಾಪ್ ಸಿಂಹಗೆ ಮೈಸೂರು ಟಿಕೆಟ್ ಮಿಸ್ ಆಗುವ ಸಾಧ್ಯತೆ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಪ್ರತಾಪ್ ಸಿಂಹ ಬದಲಿಗೆ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರಿಗೆ ಟಿಕೆಟ್ ನೀಡಲಾಗುತ್ತೆ ಎನ್ನಲಾಗುತ್ತಿದೆ. ಮೈಸೂರಿನಲ್ಲಿ ಮಾತನಾಡಿರುವ ಪ್ರತಾಪ್ ಸಿಂಹ, ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುವುದಿಲ್ಲ: ಸಂಸದ ಪ್ರತಾಪ್​ ಸಿಂಹ ಸ್ಪಷ್ಟನೆ
ಸಂಸದ ಪ್ರತಾಪ್​ ಸಿಂಹ
Follow us
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Mar 13, 2024 | 3:04 PM

ಮೈಸೂರು, ಮಾರ್ಚ್​​ 13: ಎರಡು ಬಾರಿ ಮೈಸೂರು-ಕೊಡಗು ಸಂಸದನಾಗಿ ಕೆಲಸ ಮಾಡಿದ್ದ ಸಂಸದ ಪ್ರತಾಪ್ ಸಿಂಹ (Pratap Simha) ಗೆ ಈ ಬಾರಿ ಟಿಕೆಟ್ ಕೈತಪ್ಪುವ ಆತಂಕ ಎದುರಾಗಿದೆ. ಪ್ರತಾಪ್ ಸಿಂಹ ಬದಲಿಗೆ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರಿಗೆ ಟಿಕೆಟ್ ನೀಡಲಾಗುತ್ತೆ ಎನ್ನಲಾಗುತ್ತಿದೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾತನಾಡಿರುವ ಬಿಜೆಪಿ ಸಂಸದ ಪ್ರತಾಪ್​ ಸಿಂಹ, ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 1960ರಲ್ಲಿ ನಮ್ಮಪ್ಪ ಜನಸಂಘದಲ್ಲಿ ಇದ್ದರು. ಕರ್ನಾಟಕದಲ್ಲಿ ಎಷ್ಟು ಸಂಸದರ ಪರವಾಗಿ ಹೋರಾಟ ಆಗುತ್ತಿದೆ? ಟಿಕೆಟ್ ಕೊಡಬೇಕು ಅಂತಾ ಜನ ಕೇಳುತ್ತಿದ್ದಾರೆ, ನನಗೆ ಅಷ್ಟೇ ಸಾಕು ಎಂದು ಹೇಳಿದ್ದಾರೆ.

ನನ್ನ ಜೀವ ಇರುವವರೆಗೂ ನಾನು ಮೋದಿ ಭಕ್ತ: ಪ್ರತಾಪ್ ಸಿಂಹ

‘ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಕ್ಕೆ ಟಿಕೆಟ್ ತಪ್ಪುತ್ತಿದೆ’ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಹೆಸರು ಕೆಡಿಸಿಕೊಂಡಿದ್ದಕ್ಕೆ ಇಲ್ಲಿ ಸೋತು, ಬಾದಾಮಿಗೆ ಹೋದ್ರಾ? ನಂತರ ಬಾದಾಮಿಯಲ್ಲಿ ಹೆಸರು ಕೆಡಿಸಿಕೊಂಡಿದ್ದಕ್ಕೆ ಇಲ್ಲಿಗೆ ಬಂದ್ರಾ? ಸಿದ್ದರಾಮಯ್ಯ ಹಿರಿಯ ನಾಯಕ, ಈ ರೀತಿ ಮಾತನಾಡಬಾರದು. ಅವರು ಎಷ್ಟು ಚುನಾವಣೆಯಲ್ಲಿ ಸೋತಿಲ್ಲ ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಮಹಾರಾಜರನ್ನೇ ರಾಜಕೀಯಕ್ಕೆ ತಂದ ಪಕ್ಷದ ಮುಖಂಡರಿಗೆ ನಮೋ! ಯದುವೀರ್​​ ರಾಜಕೀಯ ಪ್ರವೇಶ ಬಗ್ಗೆ ಪ್ರತಾಪ್​ ಸಿಂಹ ಟಾಂಗ್

ನನ್ನ ಜೀವ ಇರುವವರೆಗೂ ನಾನು ಮೋದಿ ಭಕ್ತ. ಯಾರು ಏನೇ ಕೊಡುತ್ತೇನೆ ಎಂದರೂ ನಾನು ಎಲ್ಲೂ ಹೋಗುವುದಿಲ್ಲ. ಸಾಯುವವರೆಗೂ ನಾನು ಬಿಜೆಪಿ ಕಾರ್ಯಕರ್ತ ಎಂದಿದ್ದಾರೆ.

ಕರ್ನಾಟಕಕ್ಕೆ ಯಡಿಯೂರಪ್ಪ ಮೋದಿ ಇದ್ದ ಹಾಗೆ

ಟಿಕೆಟ್ ವಿಚಾರದಲ್ಲಿ ಬಿಎಸ್​​ ಯಡಿಯೂರಪ್ಪರನ್ನು ಎಳೆದು ತರಬೇಡಿ. ಬಿಎಸ್​ವೈ ಪಕ್ಷ ಕಟ್ಟದಿದ್ರೆ ರಾಜ್ಯದಲ್ಲಿ ಬಿಜೆಪಿ ಎಲ್ಲಿ ಇರುತ್ತಿತ್ತು? BSY ಬಿಜೆಪಿಯನ್ನು ಕಟ್ಟದಿದ್ರೆ ನಮ್ಮಂಥವರು ಎಂಪಿ ಆಗ್ತಿದ್ವಾ ಎಂದಿದ್ದಾರೆ. ಕರ್ನಾಟಕಕ್ಕೆ ಯಡಿಯೂರಪ್ಪ ಒಂದು ರೀತಿ ಮೋದಿ ಇದ್ದ ಹಾಗೆ. ಪ್ರಧಾನಿ ಮೋದಿ ನನಗೆ ಸದಾ ಪ್ರೇರಣೆ ಎಂದರು.

ಇದನ್ನೂ ಓದಿ: “ಯುವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ” ಯದುವೀರ್‌ ಚುನಾವಣೆಗೆ ಸ್ಪರ್ಧಿಸದಂತೆ ಪೋಸ್ಟರ್‌ ಅಭಿಯಾನ

ಮೋದಿ ಏನೇ ನಿರ್ಧಾರ ತೆಗೆದುಕೊಂಡರೂ ನಾನು ಸ್ವೀಕರಿಸುತ್ತೇನೆ. ಮೋದಿಗಿಂತ ದೊಡ್ಡದು ಯಾವುದೂ ಇಲ್ಲ. ಅವಕಾಶ ಮಾಡಿಕೊಟ್ಟರೂ ತೃಪ್ತಿ ಇದೆ, ಕೊಡದಿದ್ದರೂ ತೃಪ್ತಿ ಇದೆ ಎಂದು ಹೇಳಿದ್ದಾರೆ.

ಪ್ರತಿಭಟನೆ ಮಾಡದಂತೆ ಪ್ರತಾಪ್​ ಸಿಂಹ ಮನವಿ

ಟಿಕೆಟ್​ ಕೈತಪ್ಪುವ ಸಾಧ್ಯತೆ ಹಿನ್ನೆಲೆ ಬೆಂಬಲಿಗರು ಪ್ರತಿಭಟನೆ ಮಾಡದಂತೆ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಲ್ಲದೇ ನಾನು ಏನೂ ಅಲ್ಲ. ಇಲ್ಲಿರುವ ಎರಡು ಫೋಟೋ ನೋಡಿ ಅರ್ಥ ಮಾಡಿಕೊಳ್ಳಿ. ನನ್ನ ರಾಜಕೀಯ ಅಸ್ತಿತ್ವ ಪ್ರಧಾನಿ ಮೋದಿ ಅವರಿಂದಲೇ. ಈ‌ ಹಿನ್ನೆಲೆಯಲ್ಲಿ ಯಾರು ಪ್ರತಿಭಟನೆ ಮಾಡಬೇಡಿ. ನಾವೆಲ್ಲ ಒಂದೇ ಕುಟುಂಬದವರು ಮೋದಿಗಾಗಿ ಕೆಲಸ ಮಾಡೋಣ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ