International Yoga Day 2021: ಕೊರೊನಾ ಸೋಂಕಿತರೊಂದಿಗೆ ಕೊವಿಡ್​ ಕೇಂದ್ರದಲ್ಲೇ ಯೋಗ ದಿನಾಚರಣೆ ಆಚರಿಸಿದ ರೇಣುಕಾಚಾರ್ಯ

World Yoga Day 2021: ಪ್ರತಿಯೊಬ್ಬರೂ ಯೋಗಾಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು. ಯೋಗದಿಂದ ಆರೋಗ್ಯ ಕಾಪಾಡಿಕೊಳ್ಳುವುದು ಸಾಧ್ಯವಿದೆ. ಸೋಂಕಿನಿಂದ ಗುಣಮುಖರಾದ ಬಳಿಕ ಮನೆಯಲ್ಲೂ ನಿರಂತರ ಯೋಗಾಭ್ಯಾಸ ಮಾಡಿ. ಇದರಿಂದಾಗಿ ನಿಮ್ಮ ಆರೋಗ್ಯದ ಗುಣಮಟ್ಟ ಉತ್ತಮವಾಗಿರಲು ಅನುಕೂಲವಾಗುತ್ತದೆ ಎಂದು ಸೋಂಕಿತರಿಗೆ ರೇಣುಕಾಚಾರ್ಯ ಸಲಹೆ ನೀಡಿದ್ದಾರೆ.

International Yoga Day 2021: ಕೊರೊನಾ ಸೋಂಕಿತರೊಂದಿಗೆ ಕೊವಿಡ್​ ಕೇಂದ್ರದಲ್ಲೇ ಯೋಗ ದಿನಾಚರಣೆ ಆಚರಿಸಿದ ರೇಣುಕಾಚಾರ್ಯ
ಸೋಂಕಿತರೊಂದಿಗೆ ಯೋಗಾಭ್ಯಾಸ ಮಾಡಿದ ಎಂ.ಪಿ.ರೇಣುಕಾಚಾರ್ಯ
Follow us
TV9 Web
| Updated By: Skanda

Updated on: Jun 21, 2021 | 9:43 AM

ದಾವಣಗೆರೆ: ಕೊರೊನಾ ಸಂದರ್ಭದಲ್ಲಿ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಾ, ನಿರಂತರವಾಗಿ ಕ್ಷೇತ್ರದ ಜನರ ಸಹಾಯದಲ್ಲಿದ್ದು ಮೆಚ್ಚುಗೆ ಗಳಿಸಿಕೊಂಡಿರುವ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ, ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸೋಂಕಿತರೊಟ್ಟಿಗೆ ಆಚರಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯಲ್ಲಿರುವ ಕೊವಿಡ್ ಕೇಂದ್ರಕ್ಕೆ ಆಗಮಿಸಿ ಕೊರೊನಾ ಸೋಂಕಿತರ ಜತೆ ಯೋಗಾಭ್ಯಾಸ ಮಾಡಿದ ರೇಣುಕಾಚಾರ್ಯ, ಅಲ್ಲಿದ್ದವರೆಲ್ಲರಿಗೂ ಯೋಗದ ಮಹತ್ವ ತಿಳಿಸಿದ್ದಾರೆ.

ಪ್ರತಿಯೊಬ್ಬರೂ ಯೋಗಾಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು. ಯೋಗದಿಂದ ಆರೋಗ್ಯ ಕಾಪಾಡಿಕೊಳ್ಳುವುದು ಸಾಧ್ಯವಿದೆ. ಸೋಂಕಿನಿಂದ ಗುಣಮುಖರಾದ ಬಳಿಕ ಮನೆಯಲ್ಲೂ ನಿರಂತರ ಯೋಗಾಭ್ಯಾಸ ಮಾಡಿ. ಇದರಿಂದಾಗಿ ನಿಮ್ಮ ಆರೋಗ್ಯದ ಗುಣಮಟ್ಟ ಉತ್ತಮವಾಗಿರಲು ಅನುಕೂಲವಾಗುತ್ತದೆ ಎಂದು ಸೋಂಕಿತರಿಗೆ ರೇಣುಕಾಚಾರ್ಯ ಸಲಹೆ ನೀಡಿದ್ದಾರೆ. ಕೊವಿಡ್​ ಕೇಂದ್ರದಲ್ಲಿ ಸೋಂಕಿತರೊಟ್ಟಿಗೆ ವಿವಿಧ ಭಂಗಿಯಲ್ಲಿ ಯೋಗಾಸನ ಮಾಡಿದ ಶಾಸಕರು ಯೋಗ ಬಲ್ಲವನಿಗೆ ರೋಗವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

RENUKACHARYA YOGA DAY

ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಎಂ.ಪಿ.ರೇಣುಕಾಚಾರ್ಯ

ಯೋಗ ದಿನಾಚರಣೆಯ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಹಾರ್ದಿಕ ಶುಭಾಶಯಗಳು. ಜೀವನದ ಸಮನ್ವಯತೆಯನ್ನೂ ನಮ್ಮ ಹಿರಿಯರು ಯೋಗವೆಂದೇ ಕರೆದರು. ಸಾಂಕ್ರಾಮಿಕದ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಯೋಗಾಭ್ಯಾಸದ ಪಾತ್ರ ಮಹತ್ವದ್ದಾಗಿದೆ. ಆರೋಗ್ಯ ಪೂರ್ಣ ಶರೀರ, ಮನಸ್ಸುಗಳ ಜೊತೆಗೆ ಸಾರ್ಥಕ ಜೀವನ ರೂಪಿಸಿಕೊಳ್ಳಲು ನೆರವಾಗುವ ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ ಎಂದು ಟ್ವೀಟ್ ಮೂಲಕ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಯೋಗ ದಿನಾಚರಣೆಯ ಶುಭಾಶಯ ಕೋರಿದ್ದಾರೆ.

ಇಂದು 7ನೇ ಅಂತಾರಾಷ್ಟ್ರೀಯ ಯೋಗ ದಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಯುಷ್ ಇಲಾಖೆಯಿಂದ ‘ಸ್ವಾಸ್ಥ್ಯಕ್ಕಾಗಿ ಯೋಗ’ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಬಾರಿ ಮನೆಯಲ್ಲಿಯೇ ಇದ್ದು ಯೋಗ ಮಾಡುವಂತೆ ಕರೆ ನೀಡಲಾಗಿದೆ. ಯೋಗ ದಿನಾಚರಣೆ ಕುರಿತು ಮಾತನಾಡಿದ ಯಡಿಯೂರಪ್ಪ, ವಿಶ್ವಕ್ಕೆ ಭಾರತ ಕೊಟ್ಟ ಅತ್ಯಂತ ಮಹತ್ವದ ಕೊಡುಗೆ ಯೋಗವೂ ಒಂದು, ವಿಶ್ವದ 225ಕ್ಕೂ ಹೆಚ್ಚು ದೇಶಗಳಲ್ಲಿ ಇಂದು ಯೋಗ ಆಚರಣೆ ಮಾಡಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಮನೆಯಲ್ಲೇ ಯೋಗ ಮಾಡಿ. ಕೊರೊನಾ ಸಂಕಷ್ಟದ ವೇಳೆ ಜನರ ಆರೋಗ್ಯ ಕಾಪಾಡುವಲ್ಲಿ ಯೋಗ ಪಾತ್ರ ಮಹತ್ವದ್ದು. ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಬಲಗೊಳ್ಳುತ್ತೆ. ಸಮಾಜ ನಿರ್ಮಾಣದಲ್ಲಿ ಯೋಗ ಸಹಕಾರಿಯಾಗಲಿದೆ. ಏಕಾಗ್ರತೆಗೆ ಯೋಗ ಸಹಕಾರಿಯಾಗಲಿದೆ. ಯೋಗ ಔಷಧ ರಹಿತ ಚಿಕಿತ್ಸಾ ಪದ್ಧತಿಯಾಗಿದೆ. ಯಾವುದೇ ಅಡ್ಡಪರಿಣಾವಿಲ್ಲದ ಚಿಕಿತ್ಸಾ ಪದ್ಧತಿಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: International Yoga Day 2021: ಕೊರೊನಾ ವಿರುದ್ಧದ ಹೋರಾಟಕ್ಕೆ ಯೋಗದಿಂದ ಬಲ ಸಿಕ್ಕಿದೆ: ಪ್ರಧಾನಿ ನರೇಂದ್ರ ಮೋದಿ