ಆರೋಗ್ಯದಲ್ಲಿ ಏರುಪೇರು; ಯೋಗಾಸನದ ಮೊರೆಹೋದ ಶಾಸಕ ರೇಣುಕಾಚಾರ್ಯ
ಅನಾರೋಗ್ಯಕ್ಕೆ ತುತ್ತಾದರೂ ರೇಣುಕಾಚಾರ್ಯ ಯೋಗಾಸನ ಮಾಡಿದ್ದಾರೆ. ಸದ್ಯ, ಫೋಟೋ ವೈರಲ್ ಆಗಿದೆ.
Updated on: Apr 19, 2021 | 3:13 PM

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಇಂದು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗುವುದಕ್ಕೆ ನಿರ್ಧಾರ ಮಾಡಿದ್ದಾರೆ..

ಅನಾರೋಗ್ಯಕ್ಕೆ ತುತ್ತಾದರೂ ರೇಣುಕಾಚಾರ್ಯ ಯೋಗಾಸನ ಮಾಡಿದ್ದಾರೆ. ಸದ್ಯ, ಫೋಟೋ ವೈರಲ್ ಆಗಿದೆ.

ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ನಿನ್ನೆಯಿಂದ ಹೊನ್ನಾಳಿಯ ತಮ್ಮ ಸ್ವಗೃಹದಲ್ಲಿ ಶಾಸಕ ರೇಣುಕಾಚಾರ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ರೇಣುಕಾಚಾರ್ಯ ನಿವಾಸ ಇದೆ.

ಏಪ್ರಿಲ್ 17ರಂದು ಮಸ್ಕಿ ವಿಧಾನಸಭೆ ಉಪಚುನಾವಣೆ ನಡೆದಿದೆ. ರೇಣುಕಾಚಾರ್ಯ ಕೂಡ ಇಲ್ಲಿಗೆ ತೆರಳಿ ಬಿಜೆಪಿ ಪರ ಪ್ರಚಾರ ನಡೆಸಿದ್ದರು. ಇದೇ

ಇದೇ ವೇಳೆ ಅವರು ಮಿರ್ಚಿ ಕರಿದು ಎಲ್ಲರ ಗಮನ ಸೆಳೆದಿದ್ದರು.

mp renukacharya done yoga after he suffer from fever

ಯೋಗಾಸನದ ನಾನಾ ಭಂಗಿಗಳನ್ನು ಮಾಡಿ ಅವರು ಗಮನ ಸೆಳೆದಿದ್ದಾರೆ.

ಸದ್ಯ ರೇಣುಕಾಚಾರ್ಯ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜೇಶ್ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



