ಸೋಂಕು ಧೃಡವಾದ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ಸೇರುವೆ ಎಂದಿದ್ದ ಶಾಸಕ ರೇಣುಕಾಚಾರ್ಯ ರಾತ್ರೋರಾತ್ರಿ ಬೆಂಗಳೂರಿಗೆ ಶಿಫ್ಟ್

|

Updated on: Apr 20, 2021 | 9:17 AM

ಒಂದು ದಿನ ಹೋಂ ಕ್ವಾರಂಟೈನ್‌ನಲ್ಲಿದ್ದ ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ರು. ಈಗ ಮತ್ತೆ ಆರೋಗ್ಯದಲ್ಲಿ ಏರುಪೇರಾದರಿಂದ ದಾವಣಗೆರೆ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿಗೆ ತೆರಳಿದ್ದಾರೆ.

ಸೋಂಕು ಧೃಡವಾದ ಹಿನ್ನೆಲೆ ಜಿಲ್ಲಾಸ್ಪತ್ರೆಗೆ  ಸೇರುವೆ ಎಂದಿದ್ದ ಶಾಸಕ ರೇಣುಕಾಚಾರ್ಯ ರಾತ್ರೋರಾತ್ರಿ ಬೆಂಗಳೂರಿಗೆ ಶಿಫ್ಟ್
ಶಾಸಕ ರೇಣುಕಾಚಾರ್ಯ
Follow us on

ದಾವಣಗೆರೆ: ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಶಾಸಕ ರೇಣುಕಾಚಾರ್ಯ ರಾತ್ರೋರಾತ್ರಿ ದಾವಣಗೆರೆ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಒಂದು ದಿನ ಹೋಂ ಕ್ವಾರಂಟೈನ್‌ನಲ್ಲಿದ್ದ ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ರು. ಈಗ ಮತ್ತೆ ಆರೋಗ್ಯದಲ್ಲಿ ಏರುಪೇರಾದರಿಂದ ದಾವಣಗೆರೆ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿಗೆ ತೆರಳಿದ್ದಾರೆ.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಮೈ ಕೈ ನೋವು, ಸ್ವಲ್ಪ ಸುಸ್ತು ಇದ್ದ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗೆ ಭರ್ತಿ ಆಗಲು ವೈದ್ಯರು ಸಲಹೆ ಸೂಚನೆ ನೀಡಿದ್ದರು. ಬಳಿಕ ಏಪ್ರಿಲ್ 18 ರಂದು ರೇಣುಕಾಚಾರ್ಯರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿತ್ತು. ಹೀಗಾಗಿ ಒಂದು ದಿನ ಹೊನ್ನಾಳಿಯ ಮನೆಯಲ್ಲೇ ಹೋಂ ಕ್ವಾರಂಟೈನ್‌ ಆಗಿದ್ದರು.

ಬಳಿಕ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಈಗ ಮತ್ತೆ ರಾತ್ರೋರಾತ್ರಿ ದಾವಣಗೆರೆ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ.

ಇದನ್ನೂ ಓದಿ: ಶಾಸಕ ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರು; ಸರ್ಕಾರಿ ಆಸ್ಪತ್ರೆಗೆ ದಾಖಲಾಗಲು ನಿರ್ಧಾರ