AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MP Renukacharya: ಶಾಸಕ ರೇಣುಕಾಚಾರ್ಯರಿಂದ ಮತ್ತೊಂದು ಸತ್ಕಾರ್ಯ; ಕೊವಿಡ್ ಕೇರ್ ಸೆಂಟರ್​ನಲ್ಲಿ ಮೂರು ದಿನಗಳ ವಾಸ್ತವ್ಯ

ಎಂಪಿ ರೇಣುಕಾಚಾರ್ಯ ವಾಸ್ತವ್ಯ ಹೂಡಿದ್ದಾರೆ. ಕೊವಿಡ್ ಕೇರ್ ಸೆಂಟರ್ನಲ್ಲಿ ಪ್ರತೇಕ ಕೊಠಡಿಯಲ್ಲಿ ವಾಸ್ತವ್ಯ ಮಾಡಿದ್ದು ಸೋಂಕಿತರಿಗಾಗಿಯೇ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

MP Renukacharya: ಶಾಸಕ ರೇಣುಕಾಚಾರ್ಯರಿಂದ ಮತ್ತೊಂದು ಸತ್ಕಾರ್ಯ; ಕೊವಿಡ್ ಕೇರ್ ಸೆಂಟರ್​ನಲ್ಲಿ ಮೂರು ದಿನಗಳ ವಾಸ್ತವ್ಯ
ಶಾಸಕ ರೇಣುಕಾಚಾರ್ಯ
TV9 Web
| Edited By: |

Updated on:Jun 04, 2021 | 9:33 AM

Share

ದಾವಣಗೆರೆ: ಮಹಾಮಾರಿ ಕೊರೊನಾ ಭೀಕರತೆಯ ನಡುವೆ ಜೀವನ ಸಾಗಿಸುವುದು ಕಷ್ಟವಾಗಿದೆ. ಸೋಂಕಿತರು ಧೈರ್ಯ ಕಳೆದುಕೊಂಡು ಜೀವನವೇ ಮುಗಿತಾ ಎಂಬಂತೆ ಚಿಂತೆಗೀಡಾಗುತ್ತಿದ್ದಾರೆ. ಇದರ ನಡುವೆ ಶಾಸಕ ಎಂಪಿ ರೇಣುಕಾಚಾರ್ಯ ಜನಪ್ರತಿನಿಧಿಯಾಗಿ ಜನ ಸೇವೆಯಲ್ಲಿ ತೊಡಗಿದ್ದಾರೆ.  ಒಂದಲ್ಲ ಒಂದು ಸೇವಾ ಕಾರ್ಯದಲ್ಲಿ ಭಾಗಿಯಾಗಿ ಸೋಂಕಿತರ ಬಗ್ಗೆ ಕಾಳಜಿ ವಹಿಸುತ್ತಾ, ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.  ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯಲ್ಲಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಎಂಪಿ ರೇಣುಕಾಚಾರ್ಯ ವಾಸ್ತವ್ಯ ಹೂಡಿದ್ದಾರೆ. ಕೊವಿಡ್ ಕೇರ್ ಸೆಂಟರ್ನಲ್ಲಿ ಪ್ರತೇಕ ಕೊಠಡಿಯಲ್ಲಿ ವಾಸ್ತವ್ಯ ಮಾಡಿದ್ದು ಸೋಂಕಿತರಿಗಾಗಿಯೇ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕೊವಿಡ್ ಸೆಂಟರ್ನಲ್ಲಿ ವಾಸ್ತವ್ಯ ಹೂಡುವ ಮೂಲಕ ಸೋಂಕಿತರಲ್ಲಿ ಆತ್ಮ ಸ್ಥೈರ್ಯ ತುಂಬುತ್ತಿದ್ದಾರೆ. ಇನ್ನು ಇಂದಿನಿಂದ ಮೂರು ದಿನಗಳ‌ ಕಾಲ ವಾಸ್ತವ್ಯ ಮಾಡಲಿದ್ದು ಸೋಂಕಿತರ ಕಷ್ಟ-ಸುಖಗಳಲ್ಲಿ ಭಾಗಿಯಾಗಲಿದ್ದಾರೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಕೊರೊನಾ ಸೋಂಕಿತರಿಗೆ ಯೋಗಾಸನದ ವಿವಿಧ ಭಂಗಿಗಳನ್ನು ಹೇಳಿಕೊಟ್ಟಿದ್ದಾರೆ. ಪ್ರಾಣಾಯಾಮ, ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಸೋಂಕಿತರಿಗೂ ಮಾಡಿಸಿದ್ದಾರೆ. ಯೋಗ ಮಾಡುವವರಿಗೆ ರೋಗವಿಲ್ಲ ಎಂಬ ಸಂದೇಶ ಸಾರಿದ್ದಾರೆ. ಹಾಗೂ ಪ್ರತಿಯೊಬ್ಬರೂ ಯೋಗಾಸನ ಮೈ ಗೂಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಇನ್ನು ರೇಣುಕಾಚಾರ್ಯ ಕೊವಿಡ್ ಕೇರ್ ಸೆಂಟರ್ನಲ್ಲಿ ಚಪಾತಿ ತಯಾರಿಸಿದ್ದಾರೆ. ಅರಬಗಟ್ಟೆಯ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಪಾತಿ ಲಟ್ಟಿಸಿ, ಚಪಾತಿ ಸುಟ್ಟಿದ್ದಾರೆ. ಹಾಗೂ ಸೋಂಕಿತರಿಗೆ ನೀಡುವ ಆಹಾರದ ಗುಣಮಟ್ಟ ಪರಿಶೀಲಿಸಿ, ಗುಣಮಟ್ಟದ ಆಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ಶಾಸಕರ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕೊವಿಡ್ ತಡೆಯಲು ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಿದ್ದೇವೆ, ಸಿಎಂ ಯಡಿಯೂರಪ್ಪರ ಜತೆ ನಾವಿದ್ದೇವೆ: ಶಾಸಕ ರೇಣುಕಾಚಾರ್ಯ

Published On - 9:01 am, Fri, 4 June 21

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ