ಕೊರೊನಾದಿಂದ ಅನಾಥಳಾದ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ

MP Renukacharya: ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆದು, ತಂದೆ-ತಾಯಿಯ ಸ್ಥಾನದಲ್ಲಿ ನಿಂತು ಮುಂದಿನ ವಿದ್ಯಾಭ್ಯಾಸ ಕೊಡಿಸುವುದಾಗಿ ಶಾಸಕ ರೇಣುಕಾಚಾರ್ಯ ಹೇಳಿದರು. ರೇಣುಕಾಚಾರ್ಯ ದಂಪತಿ ಬಾಲಕಿಯನ್ನು ಬಾಚಿ ತಬ್ಬಿಕೊಂಡು ಸಾಂತ್ವನ ಹೇಳಿದರು.

ಕೊರೊನಾದಿಂದ ಅನಾಥಳಾದ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ
ಕೊರೊನಾದಿಂದ ಅನಾಥಳಾದ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ಶಾಸಕ ಎಂಪಿ ರೇಣುಕಾಚಾರ್ಯ
Edited By: ಸಾಧು ಶ್ರೀನಾಥ್​

Updated on: Jul 01, 2021 | 4:25 PM

ದಾವಣಗೆರೆ: ಕೊರೊನಾ ಮಹಾಮಾರಿ ಕಾಲದಲ್ಲಿ ತಮ್ಮ ಕ್ಷೇತ್ರದಲ್ಲಿ ಜನಸೇವೆಯಲ್ಲಿ ಸಕ್ರಿಯವಾಗಿರುವ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಈಗ ಇನ್ನೂ ಒಂದು ಹೆಜ್ಜೆ ಮುಂದಿಟ್ಟು, ಕೊರೊನಾ ಕಾಲದಲ್ಲಿ ಅನಾಥಳಾದ ಬಾಲಕಿಯನ್ನು ದತ್ತು ತೆಗೆದುಕೊಳ್ಳುವ ಮಾತನ್ನಾಡಿದ್ದಾರೆ. ಪತ್ನಿ ಸುಮಿತ್ರಾ ಅವರ ಜತೆ ಬಾಲಕಿಯ ನಿವಾಸಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆಯುವುದಾಗಿ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದೊಡ್ಡೇರಹಳ್ಳಿ ಗ್ರಾಮ ಬಾಲಕಿ ಕೊರೊನಾ ಸೋಂಕಿನಿಂದಾಗಿ ತಂದೆಯನ್ನು ಕಳೆದುಕೊಂಡಿದ್ದಾಳೆ. ಕೆಲ ವರ್ಷಗಳ ಹಿಂದೆ ತಾಯಿಯನ್ನು ಕಳೆದುಕೊಂಡು, ಎರಡು ತಿಂಗಳ ಹಿಂದೆ ಕೋವಿಡ್ ನಿಂದ ತಂದೆಯನ್ನೂ ಬಾಲಕಿ ಕಳೆದುಕೊಂಡಿದ್ದಾಳೆ. ಶಾಸಕ ರೇಣುಕಾಚಾರ್ಯ ಇಂದು ಆ ಬಾಲಕಿಗೆ ಸಾಂತ್ವನ ಹೇಳಿ, ಆರ್ಥಿಕ ಸಹಾಯ ಮಾಡಿದ್ದಾರೆ.

ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆದು, ತಂದೆ-ತಾಯಿಯ ಸ್ಥಾನದಲ್ಲಿ ನಿಂತು ಮುಂದಿನ ವಿದ್ಯಾಭ್ಯಾಸ ಕೊಡಿಸುವುದಾಗಿ ಶಾಸಕ ರೇಣುಕಾಚಾರ್ಯ ಹೇಳಿದರು. ರೇಣುಕಾಚಾರ್ಯ ದಂಪತಿ ಬಾಲಕಿಯನ್ನು ಬಾಚಿ ತಬ್ಬಿಕೊಂಡು ಸಾಂತ್ವನ ಹೇಳಿದರು.

ಶಾಸಕ ರೇಣುಕಾಚಾರ್ಯ ಇಂದು ಆ ಬಾಲಕಿಗೆ ಸಾಂತ್ವನ ಹೇಳಿ, ಆರ್ಥಿಕ ಸಹಾಯ ಮಾಡಿದ್ದಾರೆ

(MP Renukacharya wants to adopt a girl orphaned during corona times in honnali taluk)

BJP MLA Renukacharya Makes Dosas : ಕೊವಿಡ್ ಸೋಂಕಿತರಿಗಾಗಿ ತಾವೇ ದೋಸೆ ಮಾಡಿ ಕೊಟ್ಟ ರೇಣುಕಾಚಾರ್ಯ ಮತ್ತು ಪತ್ನಿ

Published On - 4:14 pm, Thu, 1 July 21

Web contact

TV9 Kannada

Read More
Follow Us