ಬೇಬಿಬೆಟ್ಟದಲ್ಲಿ ಸಂಸದೆ ಸುಮಲತಾ ಪರಿಶೀಲನೆ: ಗಣಿಗಾರಿಕೆ ಪರ, ವಿರೋಧ ಘೋಷಣೆ ಕೂಗಿದ ಜನರು

ಬೇಕೇ ಬೇಕು ನ್ಯಾಯ ಬೇಕು ಎನ್ನುತ್ತಾ ಸಂಸದೆ ಸುಮಲತಾ ಭೇಟಿ ವೇಳೆ ಗಣಿಕಾರ್ಮಿಕರು ಆಗ್ರಹ ವ್ಯಕ್ತಪಡಿಸಿದ್ದಾರೆ. ಸಂಸದೆ ಸುಮಲತಾ ಕಾರಿನ ಮೇಲೆ ಜನರು ಮುಗಿಬಿದ್ದಿದ್ದಾರೆ.

ಬೇಬಿಬೆಟ್ಟದಲ್ಲಿ ಸಂಸದೆ ಸುಮಲತಾ ಪರಿಶೀಲನೆ: ಗಣಿಗಾರಿಕೆ ಪರ, ವಿರೋಧ ಘೋಷಣೆ ಕೂಗಿದ ಜನರು
ಸುಮಲತಾ ಅಂಬರೀಷ್​ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on: Jul 14, 2021 | 6:50 PM

ಮಂಡ್ಯ: ಬೇಬಿಬೆಟ್ಟ ಗಣಿಗಾರಿಕೆ ಪ್ರದೇಶದಲ್ಲಿ ಸಂಸದೆ ಸುಮಲತಾ ಪರಿಶೀಲನೆ ನಡೆಸಿದ್ದಾರೆ. ಸುಮಲತಾ ಭೇಟಿ ವೇಳೆ ಗಣಿಗಾರಿಕೆ ಪರ, ವಿರೋಧ ಕೂಗು ಕೇಳಿಬಂದಿದೆ. ಗಣಿಗಾರಿಕೆಯಿಂದ ಸಮಸ್ಯೆ ಆಗ್ತಿದೆ ದಯವಿಟ್ಟು ನಿಲ್ಲಿಸಿ ಎಂದು ಗಣಿಗಾರಿಕೆ ನಿಲ್ಲಿಸಲು ಬೇಬಿ ಗ್ರಾಮಸ್ಥರ ಮನವಿ ಒಂದೆಡೆಯಾದರೆ, ಅದೇ ಸ್ಥಳದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವಂತೆ ಒತ್ತಾಯವೂ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ಬೇಬಿ ಸರ್ಕಲ್ ಗಣಿಗಾರಿಕೆ ಬಗ್ಗೆ ಪರ, ವಿರೋಧ ಘೋಷಣೆ ಕೇಳಿದೆ.

ಬೇಕೇ ಬೇಕು ನ್ಯಾಯ ಬೇಕು ಎನ್ನುತ್ತಾ ಸಂಸದೆ ಸುಮಲತಾ ಭೇಟಿ ವೇಳೆ ಗಣಿಕಾರ್ಮಿಕರು ಆಗ್ರಹ ವ್ಯಕ್ತಪಡಿಸಿದ್ದಾರೆ. ಸಂಸದೆ ಸುಮಲತಾ ಕಾರಿನ ಮೇಲೆ ಜನರು ಮುಗಿಬಿದ್ದಿದ್ದಾರೆ.

ಲಂಚ ಪಡೆದು ಅಧಿಕಾರಿಗಳಿಂದ ನಿಮಗೆ ಸುಳ್ಳು ಮಾಹಿತಿ ನೀಡುತ್ತಾರೆ. ನೀವು ಬರುವ ದಿನ ಮಾತ್ರ ಎಲ್ಲಾ ಮುಚ್ಚಿಸಿ ಸುಳ್ಳು ಹೇಳ್ತಾರೆ ಎಂದು ರೈತ ಸಂಘದ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಸಂಸದೆ ಸುಮಲತಾ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೈತ ಸಂಘದ ಕಾರ್ಯಕರ್ತರ ಈ ಮಾತಿಗೆ ಸ್ಥಳೀಯ ಗಣಿಕಾರ್ಮಿಕರ ವಿರೋಧ ವ್ಯಕ್ತವಾಗಿದೆ.

ಗಣಿಕಾರ್ಮಿಕರು ಸಣ್ಣ ಪ್ರಮಾಣದ ಗಣಿಗಾರಿಕೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಸಣ್ಣ ಪ್ರಮಾಣದ ಗಣಿಗಾರಿಕೆಗೆ ಸ್ಥಳೀಯರು ಪಟ್ಟು ಹಿಡಿದಿದ್ದಾರೆ. ಸ್ಥಳದಲ್ಲಿ ಗಣಿಗಾರಿಕೆ ವಿರುದ್ಧ ಪರ-ವಿರೋಧ ಕೂಗು ಜೋರಾಗಿ ಕೇಳಿಬಂದಿದೆ.

ಬೇಬಿಬೆಟ್ಟಕ್ಕೆ ಸಂಸದೆ ಸುಮಲತಾ ಭೇಟಿ ನೀಡುವ ಹಿನ್ನೆಲೆಯಲ್ಲಿ ಬೇಬಿ ಗ್ರಾಮ ಬಳಿ ರೈತಸಂಘ ಕಾರ್ಯಕರ್ತರ ಜಮಾವಣೆ ಆಗಿತ್ತು. ಅಕ್ರಮ ಗಣಿಪ್ರದೇಶಗಳಿಗೆ ತೆರಳಿ ಪರಿಶೀಲಿಸಲಿರುವ ಸಂಸದೆ ಸುಮಲತಾಗೆ ಬೆಂಬಲ ನೀಡಲು ರಾಜ್ಯ ರೈತ ಸಂಘದ ನೂರಾರು ಕಾರ್ಯಕರ್ತರ ಜಮಾವಣೆ ಆಗಿತ್ತು. ಗಣಿಗಾರಿಕೆಗೆ ಅನುಮತಿ ನೀಡಿ ಎಂದು ಇನ್ನು ಕೆಲವರು ಬಂದಿದ್ದರು.

ಬೇಕೆ ಬೇಕು ಗಣಿಗಾರಿಕೆ ಬೇಕು ಎಂದು ಘೋಷಣೆ ಕೂಗಿ, ನಾವು ಕಲ್ಲು ಗಣಿಗಾರಿಕೆ ಮಾಡಿ ಕೆಆರ್​ಎಸ್ ಕಟ್ಟಿದ್ದೀವಿ. ನಮಗೆ ಗಣಿಗಾರಿಕೆ ಮಾಡಲು ಅವಕಾಶ ನೀಡಿ ಎಂದು ಕಾವೇರಿಪುರ ಗ್ರಾಮದಲ್ಲಿ ಸುಮಲತಾಗೆ ಮನವಿ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ಸಕ್ರಮ ಗಣಿಗಾರಿಕೆಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದರು. ಸಾವಿರಾರು ಜನ ಗಣಿಗಾರಿಕೆಯನ್ನು ನಂಬಿಕೊಂಡು ಇದ್ದೇವೆ. ಪೂರ್ವಜರ ಕಾಲದಿಂದಲೂ ಇದೇ ಕಸುಬು ಮಾಡುತ್ತಿದ್ದೇವೆ. ಕೈಕುಳಿ ಗಣಿಗಾರಿಕೆಗೆ ಅವಕಾಶ ನೀಡಲು ಗ್ರಾಮಸ್ಥರು ಮನವಿ ಮಾಡಿದ್ದರು.

ಸರ್ಕಾರಕ್ಕೆ ಎಲ್ಲಾ ರೀತಿಯ ರಾಜಧನ ಪಾವತಿ ಮಾಡಿದ್ದೀವಿ. ಟ್ರಯಲ್ ಬ್ಲಾಸ್ಟ್ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಿ. ಟ್ರಯಲ್ ಬ್ಲಾಸ್ಟ್‌ನಲ್ಲಿ ಡ್ಯಾಂಗೆ ತೊಂದರೆಯಿದೆ ಅನ್ನೋದಾದ್ರೆ, ನಾವು ಯಾವುದೇ ಷರತ್ತಿಲ್ಲದೆ ಗಣಿಗಾರಿಕೆಯನ್ನು ನಿಲ್ಲಿಸ್ತೇವೆ ಎಂದು ಸುಮಲತಾಗೆ ಗಣಿ ಮಾಲೀಕ ರವಿಭೋಜೇಗೌಡ ಮನವರಿಕೆ ಮಾಡಿದ್ದಾರೆ. ಸುಮಲತಾ ಬಳಿ ಗಣಿ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಕೆಆರ್​ಎಸ್ ಡ್ಯಾಂ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಬೇಕು; ಡ್ಯಾಂ ರಕ್ಷಣೆಗೆ ಟಾಸ್ಕ್ ಫೋರ್ಸ್ ರಚನೆಗೆ ಸೂಚಿಸಿದ್ದೇನೆ: ಸುಮಲತಾ ಅಂಬರೀಶ್

Sumalatha Ambareesh: ನಾಳೆ ಕೆಆರ್​ಎಸ್​ ಡ್ಯಾಂನಲ್ಲಿಯೇ ಅಧಿಕಾರಿಗಳ ಜತೆ ಸಭೆ ನಡೆಸುವೆ: ಸಂಸದೆ ಸುಮಲತಾ ಅಂಬರೀಶ್

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್