ಸಂಸದ ಜಾಧವ್ಗೆ ಮತ್ತೆ ಅನಾರೋಗ್ಯ, ಜಯದೇವ ಆಸ್ಪತ್ರೆಗೆ ದಾಖಲು
ಇತ್ತೀಚೆಗಷ್ಟೇ ಬಿಜೆಪಿ ಸೇರಿ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಡಾ.ಉಮೇಶ್ ಜಾಧವ್ ಎದೆನೋವಿನ ಬಗ್ಗೆ ದೂರಿದ ನಂತರ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಬಗ್ಗೆ ಖುದ್ದು ಜಾಧವ್ ಟ್ವೀಟ್ ಮೂಲಕ ಮಾಹಿತಿ ಒದಗಿಸಿದ್ದಾರೆ. ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲವೆಂದು ಸಂಸದರು ಮನವಿ ಮಾಡಿದ್ದಾರೆ. ಸಂಸತ್ಗೆ ಆಯ್ಕೆಯಾಗುವ ಮೊದಲು ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದ ಜಾಧವ್ ವಿಧಾನಸಭೆಯಲ್ಲಿ ಚಿಂಚೋಳಿ ಮತಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಅವರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದನ್ನು ಜ್ಞಾಪಿಸಿಕೊಳ್ಳಬಹುದಾಗಿದೆ.

ಇತ್ತೀಚೆಗಷ್ಟೇ ಬಿಜೆಪಿ ಸೇರಿ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಡಾ.ಉಮೇಶ್ ಜಾಧವ್ ಎದೆನೋವಿನ ಬಗ್ಗೆ ದೂರಿದ ನಂತರ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೇರಿಸಲಾಗಿದೆ.
ಈ ಬಗ್ಗೆ ಖುದ್ದು ಜಾಧವ್ ಟ್ವೀಟ್ ಮೂಲಕ ಮಾಹಿತಿ ಒದಗಿಸಿದ್ದಾರೆ. ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲವೆಂದು ಸಂಸದರು ಮನವಿ ಮಾಡಿದ್ದಾರೆ.
ಸಂಸತ್ಗೆ ಆಯ್ಕೆಯಾಗುವ ಮೊದಲು ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದ ಜಾಧವ್ ವಿಧಾನಸಭೆಯಲ್ಲಿ ಚಿಂಚೋಳಿ ಮತಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಅವರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದನ್ನು ಜ್ಞಾಪಿಸಿಕೊಳ್ಳಬಹುದಾಗಿದೆ.