ಸಂಸದ ಜಾಧವ್​ಗೆ ಮತ್ತೆ ಅನಾರೋಗ್ಯ, ಜಯದೇವ ಆಸ್ಪತ್ರೆಗೆ ದಾಖಲು

ಇತ್ತೀಚೆಗಷ್ಟೇ ಬಿಜೆಪಿ ಸೇರಿ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಡಾ.ಉಮೇಶ್ ಜಾಧವ್ ಎದೆನೋವಿನ ಬಗ್ಗೆ ದೂರಿದ ನಂತರ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಬಗ್ಗೆ ಖುದ್ದು ಜಾಧವ್ ಟ್ವೀಟ್ ಮೂಲಕ ಮಾಹಿತಿ ಒದಗಿಸಿದ್ದಾರೆ. ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲವೆಂದು ಸಂಸದರು ಮನವಿ ಮಾಡಿದ್ದಾರೆ. ಸಂಸತ್​ಗೆ ಆಯ್ಕೆಯಾಗುವ ಮೊದಲು ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದ ಜಾಧವ್ ವಿಧಾನಸಭೆಯಲ್ಲಿ ಚಿಂಚೋಳಿ ಮತಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಅವರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದನ್ನು ಜ್ಞಾಪಿಸಿಕೊಳ್ಳಬಹುದಾಗಿದೆ.

ಸಂಸದ ಜಾಧವ್​ಗೆ ಮತ್ತೆ ಅನಾರೋಗ್ಯ, ಜಯದೇವ ಆಸ್ಪತ್ರೆಗೆ ದಾಖಲು
ಅರುಣ್​ ಕುಮಾರ್​ ಬೆಳ್ಳಿ

Updated on: Sep 28, 2020 | 6:05 PM

ಇತ್ತೀಚೆಗಷ್ಟೇ ಬಿಜೆಪಿ ಸೇರಿ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಡಾ.ಉಮೇಶ್ ಜಾಧವ್ ಎದೆನೋವಿನ ಬಗ್ಗೆ ದೂರಿದ ನಂತರ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೇರಿಸಲಾಗಿದೆ.

ಈ ಬಗ್ಗೆ ಖುದ್ದು ಜಾಧವ್ ಟ್ವೀಟ್ ಮೂಲಕ ಮಾಹಿತಿ ಒದಗಿಸಿದ್ದಾರೆ. ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲವೆಂದು ಸಂಸದರು ಮನವಿ ಮಾಡಿದ್ದಾರೆ.

ಸಂಸತ್​ಗೆ ಆಯ್ಕೆಯಾಗುವ ಮೊದಲು ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದ ಜಾಧವ್ ವಿಧಾನಸಭೆಯಲ್ಲಿ ಚಿಂಚೋಳಿ ಮತಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಅವರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದನ್ನು ಜ್ಞಾಪಿಸಿಕೊಳ್ಳಬಹುದಾಗಿದೆ.

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us