MRPL Recruitment 2026: MRPL ನಲ್ಲಿ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ; ಸಂಪೂರ್ಣ ವಿವರ ಮತ್ತು ಲಿಂಕ್ ಇಲ್ಲಿದೆ!
MRPL ನಲ್ಲಿ 26 ಸಹಾಯಕ ಎಂಜಿನಿಯರ್ (E2) ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕೆಮಿಕಲ್ ವಿಭಾಗಗಳಲ್ಲಿ ನೇಮಕಾತಿ ನಡೆಯಲಿದ್ದು, ಆಯ್ಕೆ ಪ್ರಕ್ರಿಯೆಯು GATE-2026 ಅಂಕಗಳ ಆಧಾರದ ಮೇಲೆ ಇರುತ್ತದೆ. ಆಸಕ್ತ ಎಂಜಿನಿಯರಿಂಗ್ ಪದವೀಧರರು ಸೆಪ್ಟೆಂಬರ್ 19 ರೊಳಗೆ www.mrpl.co.in/careers ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಇದು ಕೇಂದ್ರ ಸರ್ಕಾರದ ಉದ್ಯೋಗಾವಕಾಶ.

ಭಾರತ ಸರ್ಕಾರದ ಒಎನ್‌ಜಿಸಿ (ONGC) ಕಂಪನಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರಿನ ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆಯು ಮ್ಯಾನೇಜ್‌ಮೆಂಟ್ ಕೇಡರ್‌ನ E2 ದರ್ಜೆಯಲ್ಲಿ ವಿವಿಧ ವಿಭಾಗಗಳ ಸಹಾಯಕ ಎಂಜಿನಿಯರ್ (Assistant Engineer) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಆಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಒಎನ್‌ಜಿಸಿ ಲಿಮಿಟೆಡ್‌ನ ಅಂಗಸಂಸ್ಥೆಯಾಗಿರುವ ಈ ಕೇಂದ್ರ ಸಾರ್ವಜನಿಕ ವಲಯದ ಉದ್ಯಮದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಎಂಜಿನಿಯರಿಂಗ್ ಪದವೀಧರರಿಗೆ ಇದು ಉತ್ತಮ ಅವಕಾಶವಾಗಿದೆ.
ಹುದ್ದೆಗಳ ವಿವರಗಳು:
ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗ ‘ಎ’ ಮತ್ತು ಭಾಗ ‘ಬಿ’ ಅಡಿಯಲ್ಲಿ ಒಟ್ಟು 26 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಭಾಗ ‘ಎ’ ಅಡಿಯಲ್ಲಿ SC/ST/OBC (NCL) ಅಭ್ಯರ್ಥಿಗಳಿಗಾಗಿ ವಿಶೇಷ ನೇಮಕಾತಿ ಡ್ರೈವ್ ಹಮ್ಮಿಕೊಳ್ಳಲಾಗಿದ್ದು, ಮೆಕ್ಯಾನಿಕಲ್ ವಿಭಾಗದಲ್ಲಿ 8 ಹುದ್ದೆಗಳು ಹಾಗೂ ಎಲೆಕ್ಟ್ರಿಕಲ್ ವಿಭಾಗದಲ್ಲಿ 3 ಹುದ್ದೆಗಳಿವೆ. ಹಾಗೆಯೇ ಭಾಗ ‘ಬಿ’ ಅಡಿಯಲ್ಲಿ ರಾಸಾಯನಿಕ (Chemical) ವಿಭಾಗದಲ್ಲಿ 15 ಸಹಾಯಕ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಆಯ್ಕೆ ವಿಧಾನ ಮತ್ತು ಅರ್ಹತೆ:
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಎಂಜಿನಿಯರಿಂಗ್‌ನಲ್ಲಿ ಪದವಿ ಸಾಮರ್ಥ್ಯ ಪರೀಕ್ಷೆ (GATE)-2026 ಅಂಕಗಳ ಆಧಾರದ ಮೇಲೆ ನಡೆಸಲಾಗುತ್ತದೆ. GATE-2026 ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆಯೇ ಮುಂದಿನ ಆಯ್ಕೆ ಪ್ರಕ್ರಿಯೆಗಾಗಿ ಅಭ್ಯರ್ಥಿಗಳ ಆರಂಭಿಕ ಕಿರುಪಟ್ಟಿಯನ್ನು (Shortlist) ಸಿದ್ಧಪಡಿಸಲಾಗುತ್ತದೆ.
ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ
ಪ್ರಮುಖ ದಿನಾಂಕಗಳು:
MRPL ನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಗಸ್ಟ್ 21 ರಿಂದ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಸೂಕ್ತ.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಹೆಚ್ಚಿನ ವಿವರಗಳು, ಅಧಿಕೃತ ಸೂಚನೆಗಳು ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮಂಗಳೂರು ರಿಫೈನರಿ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ಗೆ www.mrpl.co.in/careers. ಭೇಟಿ ನೀಡಿ ಮಾಹಿತಿ ಪಡೆಯಿರಿ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




