AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಎಸ್‌ಐಎಲ್‌ ಚಿಟ್‌ ಫಂಡ್: ಹಣ ಉಳಿತಾಯಕ್ಕೆ ಕರ್ನಾಟಕ ಸರ್ಕಾರದಿಂದ ಹೊಸ ಪ್ಲ್ಯಾನ್

ಗ್ಯಾರಂಟಿ ಸ್ಕಿಮ್‌ಗಳ ಅನಾವರಣೆ ಬಳಿಕ ಕರ್ನಾಟಕ ಸರ್ಕಾರವು ಉಳಿತಾಯ ಯೋಜನೆಗೆ ಹೊಸ ಪ್ಲ್ಯಾನ್ ಮಾಡಿಕೊಂಡಿದೆ. ಎಂಎಸ್‌ಐಎಲ್‌ ಚಿಟ್‌ ಫಂಡ್ ಮೂಲಕ ಜನರು ಹಣ ಉಳಿಸಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಸಚಿವ ಎಂಬಿ ಪಾಟೀಲ್ ಟ್ವೀಟ್ ಮಾಡಿದ್ದಾರೆ. ಆದರೆ, ಸದ್ಯ ಆ ರೀತಿ ಯಾವುದೇ ಯೋಜನೆಗಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಂಎಸ್‌ಐಎಲ್‌ ಚಿಟ್‌ ಫಂಡ್: ಹಣ ಉಳಿತಾಯಕ್ಕೆ ಕರ್ನಾಟಕ ಸರ್ಕಾರದಿಂದ ಹೊಸ ಪ್ಲ್ಯಾನ್
ಎಂಎಸ್‌ಐಎಲ್‌ ಚಿಟ್‌ ಫಂಡ್: ಹಣ ಉಳಿತಾಯಕ್ಕೆ ಕರ್ನಾಟಕ ಸರ್ಕಾರದಿಂದ ಹೊಸ ಯೋಜನೆ (ಸಾಂದರ್ಭಿಕ ಚಿತ್ರ)
Shivaraj
| Updated By: Rakesh Nayak Manchi|

Updated on: Nov 06, 2023 | 3:06 PM

Share

ಬೆಂಗಳೂರು, ನ.6: ಗ್ಯಾರಂಟಿ ಯೋಜನೆಗಳ ಜಾರಿ ಬಳಿಕ ಕರ್ನಾಟಕ ಸರ್ಕಾರವು ಜನರ ಹಣ ಉಳಿತಾಯಕ್ಕೆ ಎಂಎಸ್‌ಐಎಲ್‌ ಚಿಟ್‌ ಫಂಡ್ (MSIL Chit Fund) ಯೋಜನೆ ಜಾರಿ ಮಾಡಲು ಮುಂದಾಗಿದೆ. ಆ ಮೂಲಕ ಬೇರೆ ಕಡೆ ಹಣ ಹಾಕಿ ಮೊಸ ಹೋಗುವುದನ್ನು ತಡೆಯಲು ಹೊಸ ಪ್ಲ್ಯಾನ್ ಮಾಡಿಕೊಂಡಿದೆ.

ಜನರು ಹಣ ಉಳಿತಾಯ ಮಾಡುವ ಯೋಜನೆ ಇದಾಗಿದ್ದು, ಸರ್ಕಾರ ಈಗಾಗಲೇ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದೆ. ಎಸ್‌ಐಎಲ್‌ನಲ್ಲಿ 10 ಸಾವಿರದ ವರೆಗೆ ಚಿಟ್‌ಫಂಡ್ ವ್ಯವಹಾರ ನಡೆಸಬಹುದು.

ವ್ಯವಹಾರದಲ್ಲಿ ಈಗಾಗಲೇ ನೆರೆಯ ರಾಜ್ಯ ಕೇರಳ ಯಶ್ವಸಿಯಾಗಿದ್ದು, ಸುಮಾರು 27 ಸಾವಿರ ಕೋಟಿಯಷ್ಟು ವ್ಯವಹಾರವಿದೆ. ಕರ್ನಾಟಕದಲ್ಲಿ 22 ಸಾವಿರ ಗ್ರಾಹಕರು 305 ಕೋಟಿ ಮಾತ್ರ ಇದೆ. ಹೀಗಾಗಿ ಇದನ್ನ ಉತ್ತೇಜಿಸಲು ಸರ್ಕಾರ ಹೊಸ ಪ್ಲ್ಯಾನ್ ರೂಪಿಸಿದೆ. ಇದು ಶಿಕ್ಷಣ, ಆರೋಗ್ಯಕ್ಕೆ ಅನುಕೂಲವಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಎಷ್ಟು ದಿನ ರಾಜ್ಯಭಾರ ನಡೆಸ್ತಾರೋ? ಸಂಚಲನ ಮೂಡಿಸಿದ ಪ್ರಧಾನಿ ಮೋದಿ ಹೇಳಿಕೆ

ಚಿಟ್ ಫಂಡ್​ಗೆ ಗ್ಯಾರೆಂಟಿ ಹಣ ಬಳಕೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸದ್ಯ ಆ ರೀತಿ ಯಾವುದೇ ಯೋಜನೆಗಳಿಲ್ಲ. ಟಿಬಿಟಿ ಮೂಲಕ ನಾವು ದುಡ್ಡು ಕಳಿಸುತ್ತೇವೆ. ಈ ಯೋಜನೆ ಹಾಗೇ ಮುಂದುವರಿಯುತ್ತದೆ. ಆ ಹಣವನ್ನ ಫಲಾನುಭವಿಗಳು ಅದ್ಬಳಕೆ ಮಾಡಿಕೊಳ್ಳಬೇಕು. ಅದು ಅವರಿಗೆ ಬಿಟ್ಟ ವಿಚಾರ. ಚಿಟ್ ಫಂಡ್​ಗೆ ಗ್ಯಾರೆಂಟಿ ಹಣ ಬಳಕೆಗೆ ಯಾವ ತೀರ್ಮಾನವನ್ನೂ ಮಾಡಿಲ್ಲ ಎಂದರು.

ಉನ್ನತ ವಲಯಕ್ಕೆ ಚಿಟ್ ಫಂಡ್

ಈ ಬಗ್ಗೆ ಟ್ವೀಟ್ ಮಾಡಿದ ಸಚಿವ ಎಂಬಿ ಪಾಟೀಲ್, ಎಂಎಸ್​ಐಎಲ್​ ಚಿಟ್ಸ್ ಅನ್ನು ಭಾರತದ ಪ್ರಮುಖ ಚಿಟ್ ಫಂಡ್ ಮಾಡುವ ಮೂಲಕ ಚಿಟ್ ಫಂಡ್ ವಲಯವನ್ನು ಉನ್ನತ ಸ್ಥಾನಕ್ಕೆ ಒಯ್ಯಲು ಕರ್ನಾಟಕವು ಮಹತ್ತರ ಪ್ರಯಾಣ ಆರಂಭಿಸುತ್ತಿದೆ ಎಂದಿದ್ದಾರೆ.

MSIL ವಿಶ್ವಾಸಾರ್ಹ ಬ್ರ್ಯಾಂಡ್, ಸುಭದ್ರ, ಸುರಕ್ಷಿತ ಮತ್ತು ಪ್ರಗತಿ ವರ್ಧಕ, AI ಪ್ಲಾಟ್ ಫಾರ್ಮ್​​ನಲ್ಲಿ ಇರಲಿದೆ, ಕೆಲವೇ ವರ್ಷಗಳಲ್ಲಿ ರೂ. 300 ಕೋಟಿಯಿಂದ 10,000 ಕೋಟಿ ವಹಿವಾಟು ತಲುಪುವ ಗುರಿ ಹೊಂದಲಾಗಿದೆ ಎಂದು ಎಂಬಿ ಪಾಟೀಲ್ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ