AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬಕಾರಿಯಲ್ಲಿ ಮಾಡೋಕೆ ಏನಿದೆ?: ಚಿಯರ್ಸ್​ ಹೇಳದೆ.. ಅಸಮಾಧಾನದ ಬುಗ್ಗೆ ಚಿಮ್ಮಿಸಿದ MTB ನಾಗರಾಜ್​

ಈ ಮೊದಲು ಕಾಂಗ್ರೆಸ್​ನಲ್ಲಿದ್ದು ನಂತರ ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್​​ ಈಗ ವಸತಿ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲಿ ಮಾಡೋಕೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಅಬಕಾರಿಯಲ್ಲಿ ಮಾಡೋಕೆ ಏನಿದೆ?: ಚಿಯರ್ಸ್​ ಹೇಳದೆ.. ಅಸಮಾಧಾನದ ಬುಗ್ಗೆ ಚಿಮ್ಮಿಸಿದ MTB ನಾಗರಾಜ್​
ಎಂಟಿಬಿ ನಾಗರಾಜ್​
ರಾಜೇಶ್ ದುಗ್ಗುಮನೆ
|

Updated on: Jan 21, 2021 | 2:23 PM

Share

ಬೆಂಗಳೂರು: ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸಂಪುಟ ವಿಸ್ತರಣೆ ಕಸರತ್ತು ಪೂರ್ಣಗೊಳಿಸಿದ್ದಾರೆ. ಈ ವೇಳೆ ಸಹಿಜವಾಗಿಯೇ ಸಚಿವ ಸ್ಥಾನ ಸಿಗದ ಕೆಲವರು ಯಡಿಯೂರಪ್ಪ ವಿರುದ್ಧ ರೆಬೆಲ್​ ಆಗಿದ್ದಾರೆ. ಆದರೆ, ಸಚಿವ ಸ್ಥಾನ ಪಡೆದವರು ಕೂಡ ಈಗ ತಮಗೆ ಬೇಕಾದ ಖಾತೆ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಈ ಮೊದಲು ಕಾಂಗ್ರೆಸ್​ನಲ್ಲಿದ್ದು ನಂತರ ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್​​ ಈಗ ವಸತಿ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವೇಳೆ ಎಂಟಿಬಿಯನ್ನು ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಇಂದು ಮುಂಜಾನೆ ಎಂಟಿಬಿಗೆ ಅಬಕಾರಿ ಸಚಿವ ಸ್ಥಾನ ನೀಡಿದ್ದರು ಬಿಎಸ್​ವೈ. ವಸತಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಎಂಟಿಬಿಗೆ ಇದು ತೀವ್ರ ಹಿನ್ನಡೆ ಉಂಟು ಮಾಡಿದೆ.

ಈ ಬಗ್ಗೆ ಮಾತನಾಡಿರುವ ಎಂಟಿಬಿ, ಅಬಕಾರಿ ಇಲಾಖೆಯಲ್ಲಿ ಮಾಡೋಕೆ ಏನಿದೆ? ಕಂಪನಿಗಳಿಂದ ಮದ್ಯ ಖರೀದಿಸಲಾಗುತ್ತದೆ. ಹೋಲ್​ಸೇಲ್ ದರದಲ್ಲಿ ಡೀಲರ್ಸ್​ಗೆ ಮದ್ಯ ಕೊಡಲಾಗುತ್ತದೆ. ಡೀಲರ್ಸ್​ಗಳು ಇದನ್ನು ಅಂಗಡಿಗೆ ಮಾರಾಟ ಮಾಡುತ್ತಾರೆ. ಮಾರಾಟ ಮಾಡಿ ಬಂದ ಹಣವನ್ನು ಸರ್ಕಾರಕ್ಕೆ ತಲುಪಿಸುತ್ತಾರೆ. ಇಲ್ಲಿ ನಾನು ಮಾಡುವ ಕೆಲಸ ಏನೂ ಇಲ್ಲ ಎಂದು ಅಸಮಾಧಾನದ ಬುಗ್ಗೆ ಚಿಮ್ಮಿಸಿದ್ದಾರೆ.

ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಗ್ರೀನ್​​ಸಿಗ್ನಲ್.. ಯಾರಿಗೆ ಯಾವ ಖಾತೆ? ವಿವರ ಇಲ್ಲಿದೆ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ