ನಾಮಪತ್ರ ಸಲ್ಲಿಕೆಗೂ ಮುನ್ನ ಎಂಟಿಬಿ ನಾಗರಾಜ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉಪಚುನಾವಣೆಗೆ ನಿಂತಿರುವ ಎಂಟಿಬಿ ನಾಗರಾಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಗರಾಜ್ ಕಣ್ಣು ನೋವಿನಿಂದ ಬಳಲುತ್ತಿದ್ದಾರೆ. ಹೊಸಕೋಟೆ ಪಟ್ಟಣ ಜಿಇಎಫ್ ಕಣ್ಣಿನ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾಗರಾಜ್ ಇಂದು ನಾಮಪತ್ರ ಸಲ್ಲಿಸಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಮಪತ್ರ ಸಲ್ಲಿಕೆ ವೇಳೆ ಹಾಜರಿರಲಿದ್ದಾರೆ.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉಪಚುನಾವಣೆಗೆ ನಿಂತಿರುವ ಎಂಟಿಬಿ ನಾಗರಾಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಗರಾಜ್ ಕಣ್ಣು ನೋವಿನಿಂದ ಬಳಲುತ್ತಿದ್ದಾರೆ.
ಹೊಸಕೋಟೆ ಪಟ್ಟಣ ಜಿಇಎಫ್ ಕಣ್ಣಿನ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾಗರಾಜ್ ಇಂದು ನಾಮಪತ್ರ ಸಲ್ಲಿಸಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಮಪತ್ರ ಸಲ್ಲಿಕೆ ವೇಳೆ ಹಾಜರಿರಲಿದ್ದಾರೆ.
Published On - 11:12 am, Mon, 18 November 19