ಕುಲಶೇಖರ ಬಳಿ ರೈಲು ಹಳಿ ಮೇಲೆ ಮಣ್ಣು ಕುಸಿತ; ರೈಲು ಸಂಚಾರ ರದ್ದು
ಮಂಗಳೂರು ಜಂಕ್ಷನ್ ಮತ್ತು ತೋಕೂರು ನಡುವಿನ ಕುಲಶೇಖರ ಬಳಿ ಸುರಂಗ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಘಟನೆ ಹಿನ್ನೆಲೆಯಲ್ಲಿ ಕೊಂಕಣ ಮಾರ್ಗದ ಎಲ್ಲ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.
ಮಂಗಳೂರು: ಭಾರಿ ಮಳೆ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದ ಕುಲಶೇಖರ ಟನಲ್ ಬಳಿ ರೈಲು ಹಳಿ ಮೇಲೆ ಮಣ್ಣು ಕುಸಿದು ರೈಲು ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಕಾಂಕ್ರೀಟ್ನಿಂದ ನಿರ್ಮಿಸಲಾದ ತಡೆಗೋಡೆ ಸಹಿತ ಭಾರಿ ಪ್ರಮಾಣದ ಮಣ್ಣು ಕುಸಿದು ರೈಲು ಮಾರ್ಗ ಬಂದ್ ಆಗಿದೆ.
ಮಂಗಳೂರು ಜಂಕ್ಷನ್ ಮತ್ತು ತೋಕೂರು ನಡುವಿನ ಕುಲಶೇಖರ ಬಳಿ ಸುರಂಗ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಘಟನೆ ಹಿನ್ನೆಲೆಯಲ್ಲಿ ಕೊಂಕಣ ಮಾರ್ಗದ ಎಲ್ಲ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ರೈಲ್ವೇ ಇಲಾಖೆಯಿಂದ ಮಣ್ಣು ತೆರವು ಕಾರ್ಯ ಆರಂಭವಾಗಿದೆ. ಈ ಹಿಂದೆಯೂ ಎರಡು ಬಾರಿ ಇಲ್ಲಿ ಇದೇ ರೀತಿ ಗುಡ್ಡ ಕುಸಿತವಾಗಿತ್ತು. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರೈಲು ಸಂಚಾರ ರದ್ದು ಇನ್ನು ಘಟನೆ ಹಿನ್ನೆಲೆಯಲ್ಲಿ ಮಂಗಳೂರು ಮೂಲಕ ಕೊಂಕಣ ರೈಲು ಸಂಪರ್ಕಿಸುವ ಈ ಹಳಿಯಲ್ಲಿ ಸಂಚರಿಸುವ ಎಲ್ಲಾ ರೈಲುಗಳನ್ನು ರದ್ದು ಮಾಡಲಾಗಿದೆ. ಮುಂಬೈಯಿಂದ ಕೊಂಕಣ ರೈಲು ಮೂಲಕ ಮಂಗಳೂರಿಗೆ ಆಗಮಿಸುವ ರೈಲುಗಳನ್ನು ತೋಕೂರಿನಲ್ಲಿ ಮರಲೀ ಅದೇ ಮಾರ್ಗದಲ್ಲಿ ಹಿಂದಕ್ಕೆ ಕಳಿಸುವ ವ್ಯವಸ್ಥೆ ಆಗುತ್ತಿದೆ.
ಇದನ್ನೂ ಓದಿ: Mumbai Rains: ಮುಂಬೈನಲ್ಲಿ ಭಾರೀ ಮಳೆಯಿಂದ ಕೆರೆಯಾದ ರಸ್ತೆಗಳು; ಬಸ್, ರೈಲು ಸಂಚಾರ ಅಸ್ಯವ್ಯಸ್ತ