ಮುಡಾ ಕೇಸ್​: ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿಬಂತು ಮತ್ತೊಂದು ಗಂಭೀರ ಆರೋಪ

ಸಿಎಂ ಸಿದ್ದರಾಮಯ್ಯ ಮುಡಾ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರು ಆರೋಪಗಳ ಮೇಲೆ ಆರೋಪಗಳು ಮಾಡುತ್ತಿದ್ದಾರೆ. ಇವೆಲ್ಲದರ ಮಧ್ಯೆ ಇದೀಗ ಸಿದ್ದರಾಮಯ್ಯ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಸಿಎಂ ಸಿದ್ದರಾಮಯ್ಯ ಬಳಿ ಮುಡಾದ ಮೂಲ ದಾಖಲೆಗಳಿವೆ ಎಂದು ಆರ್​ಟಿಐ ಕಾರ್ಯಕರ್ತ ಗಂಗರಾಜು ಆರೋಪ ಮಾಡಿದ್ದಾರೆ.

ಮುಡಾ ಕೇಸ್​: ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿಬಂತು ಮತ್ತೊಂದು ಗಂಭೀರ ಆರೋಪ
ಪತ್ರಿಕಾ ರಂಗದ ಸುದ್ದಿಗಳನ್ನೂ ಫ್ಯಾಕ್ಟ್​​ ಚೆಕ್ ಮಾಡುತ್ತಾ ಸರ್ಕಾರ? ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು
Follow us
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Aug 21, 2024 | 6:50 PM

ಮೈಸೂರು, ಆಗಸ್ಟ್​ 21: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಳಿ ಮುಡಾದ (Muda)  ಮೂಲ ದಾಖಲೆಗಳಿರುವ ಬಗ್ಗೆ ಆರ್​ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿ, ಡಿಸಿ, ಮುಡಾ ಆಯುಕ್ತರು ಮತ್ತು ಅಧ್ಯಕ್ಷರು ಸೇರಿ ಹಲವರಿಗೆ ಪತ್ರ ಬರೆದಿದ್ದಾರೆ. ಆರ್​​ಟಿಐನಲ್ಲಿ ದಾಖಲೆ ಕೇಳಿದ್ದೆ ಆದರೆ, ಮುಡಾ ಕಚೇರಿ ಕೊಟ್ಟಿಲ್ಲ. ಬದಲಿಗೆ ಆ ದಾಖಲೆಗಳನ್ನ ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಸಿದ್ದರಾಮಯ್ಯರಿಗೆ ಆ ದಾಖಲೆಗಳು ಹೇಗೆ ಸಿಕ್ಕವು ಎಂದು ಪ್ರಶ್ನಿಸಿದ್ದಾರೆ.

ಆ ದಾಖಲೆ ಸಿಎಂ ಅವರ ಮನೆಯಲ್ಲೇ ಇರಬೇಕು. ಈ ಕುರಿತು ಸ್ಪಷ್ಟನೆ ನೀಡುವಂತೆ, ಜೊತೆಗೆ ಆದಷ್ಟು ಬೇಗ ಕೇಳಿರುವ ದಾಖಲೆ‌ ನೀಡುವಂತೆ ಪತ್ರ ಬರೆದಿದ್ದಾರೆ. ದಾಖಲೆ ನೀಡದಿದ್ದರೆ ಈ ವಿಚಾರ ಕೋರ್ಟ್​ ಗಮನಕ್ಕೆ ತಂದು ದೂರು ದಾಖಲಿಸುವುದಾಗಿ ಎಚ್ಚರಿಕೆ ಕೂಡ ನೀಡಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿಯ ಜಮೀನೇ ಇಲ್ಲ, ನಕಲಿ‌ ದಾಖಲೆ‌ ಸೃಷ್ಟಿ ಎಂದ ಆರ್​​ಟಿಐ ಕಾರ್ಯಕರ್ತ

ಹಗರಣದ ವಿರುದ್ಧ ಖಾಸಗಿ ದೂರು ದಾಖಲು ಮಾಡಲು ಹಲವಾರು ದಾಖಲೆಗಳನ್ನು ಇಲ್ಲಿವರೆಗೂ ತಮ್ಮ ಕಚೇರಿಯ ಅಧಿಕಾರಿಗಳಿಗೆ ನಾನು ಮಾಹಿತಿ ಹಕ್ಕುಅಡಿಯಲ್ಲಿ ಅರ್ಜಿ ಸಲ್ಲಿಸಿ ಹಲವಾರು ತಿಂಗಳು ಕಳೆದಿದ್ದರು ಮಾಹಿತಿ ನೀಡದೆ ಅಧಿಕಾರಿಗಳು ಸತಾಯಿಸಿದ್ದಾರೆ. ಹಾಗಾಗಿ ಭ್ರಷ್ಟಾಚಾರದ ವಿರುದ್ಧ ಘನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲು ವಿಳಂಬವಾಗುತ್ತಿದೆ.

ಇದನ್ನೂ ಓದಿ: ಮುಡಾ ಕೇಸ್​: ದಾಖಲೆಯನ್ನು ತಿದ್ದಲಾಗಿದೆ ಎಂದ ದೂರುದಾರ, ಇದಕ್ಕೆ ನಗರಾಭಿವೃದ್ಧಿ ಸಚಿವ ಹೇಳಿದ್ದಿಷ್ಟು

ಈ ಎಲ್ಲ ವಿಷಯವನ್ನು ಮುಂದೆ ಘನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು ಮಾಡುವ ಸಂದರ್ಭದಲ್ಲಿ ಘನ ನ್ಯಾಯಾಲಯದ ಗಮನಕ್ಕೆ ತರುತ್ತೇನೆ. ಈ ಮೇಲ್ಕಂಡ ವಿಷಯ ಸಂಬಂಧ ತಾವುಗಳು ತಕ್ಷಣವೇ ಪ್ರಾಧಿಕಾರದ ವತಿಯಿಂದ ಮೇಲ್ಕಂಡ ಎಲ್ಲರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲು ಮಾಡಬೇಕು ಇಲ್ಲದಿದ್ದರೆ ಅನಿವಾರ್ಯವಾಗಿ ಘನ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ದಾಖಲು ಮಾಡುವುದಾಗಿ ಗಂಗರಾಜು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:44 pm, Wed, 21 August 24

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ