ಸಿದ್ದರಾಮಯ್ಯಗೆ ಮುಡಾಫ್​​: ಹೈಕೋರ್ಟ್​​-ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ಆದೇಶದ ಸಾರ ಇಲ್ಲಿದೆ

ತಮ್ಮ ಪ್ರಭಾವ ಬಳಸಿ ಕುಟುಂಬಕ್ಕೆ ಅನುಚಿತ ಲಾಭ ಮಾಡಿಕೊಂಡ ಆರೋಪ ಎದುರಿಸ್ತಿರೋ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಶುರುವಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿದೆ. 3 ತಿಂಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಎಸ್ ಪಿ ಗೆ ನಿರ್ದೇಶನ ನೀಡಿದೆ. ಇನ್ನು ಹೈಕೋರ್ಟ್​ ಮತ್ತು ಜನಪ್ರತಿನಿಧಿಗಳ ಕೋರ್ಟ್ ನೀಡಿಡುವ ಆದೇಶದಲ್ಲೇನಿದೆ? ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಸಿದ್ದರಾಮಯ್ಯಗೆ ಮುಡಾಫ್​​: ಹೈಕೋರ್ಟ್​​-ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ಆದೇಶದ ಸಾರ ಇಲ್ಲಿದೆ
ಸಿದ್ದರಾಮಯ್ಯ ಮುಡಾ ಕೇಸ್
Follow us
ರಮೇಶ್ ಬಿ. ಜವಳಗೇರಾ
|

Updated on: Sep 25, 2024 | 8:01 PM

ಬೆಂಗಳೂರು, (ಸೆಪ್ಟೆಂಬರ್ 25): ಬೆಂಗಳೂರು, ಸೆಪ್ಟೆಂಬರ್ 25): ಸಿಎಂ ಸಿದ್ದರಾಮಯ್ಯಗೆ (CM Siddaramaiah) ಶಾಕ್ ಎದುರಾಗಿದೆ. ಮುಡಾ ಕೇಸ್‌ನಲ್ಲಿ (Muda Scam) ಪ್ಯಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ (Governor) ಆದೇಶವನ್ನು ಹೈಕೋರ್ಟ್ (High Court) ಎತ್ತಿ ಹಿಡಿದಿದೆ. ಇದರ ಬೆನ್ನಲ್ಲೇ ಜನಪ್ರತಿನಿಧಿಗಳ ಕೋರ್ಟ್​, ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ನೀಡಿರುವ ಅನುಮತಿ ಆದೇಶವನ್ನೇ ಹೈಕೋರ್ಟ್​ ಎತ್ತಿಹಿಡಿದಿದೆ. ಹೈಕೋರ್ಟ್​ ಈ ಆದೇಶವನ್ನೇ ಉಲ್ಲೇಖಿಸಿ ಇತ್ತ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಜಡ್ಜ್​​ ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಇನ್ನು ಹೈಕೋರ್ಟ್​ ಹಾಗೂ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ಆದೇಶದ ಸಾರ ಈ ಕೆಳಗಿನಂತಿದೆ.

ಮುಡಾ ನಿವೇಶನ ಹಂಚಿಕೆಯಲ್ಲಿ ಅನುಚಿತ ಲಾಭ ಪಡೆದ ಆರೋಪ ಹೊತ್ತಿರುವ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲಿದ್ದಾರೆ. ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಈ ಆದೇಶ ನೀಡಿದೆ. ನಿನ್ನೆಯಷ್ಟೇ ಹೈಕೋರ್ಟ್ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 ಸಿ ಅಡಿ ಆರೋಪವಿದೆ. ಈ ಸೆಕ್ಷನ್ ಅಡಿ ಜನ ಸೇವಕನಾದವನು ತನಗಾಗಲೀ, ಕುಟುಂಬದವರಿಗಾಗಲೀ ಇತರರಿಗಾಗಲೀ ತನ್ನ ಪ್ರಭಾವ ಬಳಸಿ ಅನುಚಿತ ಲಾಭ ಪಡೆದರೆ ಅಪರಾಧವೆಂದು ತಿಳಿಸಿತ್ತು. ಸಿಎಂ ಕುಟುಂಬ ನ್ಯಾಯವಲ್ಲದ ಲಾಭ ಪಡೆದಿರುವುದು ಸ್ಪಷ್ಟವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು. ಇಂದು ಈ ತೀರ್ಪಿನ ಪ್ರತಿಯನ್ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಸಲ್ಲಿಸಿದ ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲರು, ತನಿಖೆಗೆ ಆದೇಶಿಸುವಂತೆ ಮನವಿ ಮಾಡಿದರು. ವಿಚಾರಣೆ ನಡೆಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಿಸಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಎಸ್‌ಪಿಗೆ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ: ಹಾಗಾದ್ರೆ, ಸಿದ್ದರಾಮಯ್ಯ ಅರೆಸ್ಟ್​ ಆಗ್ತಾರಾ?

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಲ್ಲೇನಿದೆ?

ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದಾಗ ಡಿನೋಟಿಫಿಕೇಷನ್, ಕಾನೂನುಬಾಹಿರ ಕೃಷಿ ಭೂಮಿ ಪರಿವರ್ತನೆಗೆ ಪ್ರಭಾವ ಬೀರಿದ ಆರೋಪವಿದೆ. 2013 ರಲ್ಲಿ ಸಿಎಂ ಆದ ಬಳಿಕ 50 50 ಅಡಿಯಲ್ಲಿ ಸಿಎಂ ಪತ್ನಿ ಬದಲಿ ನಿವೇಶನ ಕೇಳಿದ್ದರು. ಸಿಎಂ ಪುತ್ರ ಪಾಲ್ಗೊಂಡಿದ್ದ ಮುಡಾ ಸಭೆಯಲ್ಲಿ 50 50 ನಿವೇಶನ ಹಂಚಿಕೆಗೆ ಅನುಮೋದನೆ ನೀಡಲಾಗಿದೆ. ಅಲ್ಲದೇ ಭೂಸ್ವಾಧೀನವಾದ ದೇವನೂರು ಬಡಾವಣೆ ಬಿಟ್ಟು ಬೆಲೆಬಾಳುವ ವಿಜಯನಗರ ಬಡಾವಣೆಯಲ್ಲಿ 14 ಬದಲಿ ನಿವೇಶನ ಪಡೆಯಲಾಗಿದೆ. ಸಿದ್ದರಾಮಯ್ಯ ವಿರುದ್ಧ ಮೇಲ್ನೋಟಕ್ಕೆ ತನಿಖೆ ಅಗತ್ಯವೆಂದು ಹೈಕೋರ್ಟ್ ಕೂಡಾ ಅಭಿಪ್ರಾಯಪಟ್ಟಿದೆ.

ಮುಖ್ಯಮಂತ್ರಿಯಾದವರು ತನಿಖೆಗೆ ಹಿಂಜರಿಯಬಾರದೆಂದು ಹೈಕೋರ್ಟ್ ಹೇಳಿದೆ. ದೂರಿನಲ್ಲಿನ ಅಂಶಗಳನ್ನು ಗಮನಿಸಿದರೆ ತನಿಖೆ ಅಗತ್ಯವೆಂದು ಕಂಡುಬಂದಿದೆ. ಗೋವಾ, ಡಿಯು ಡಮನ್ ಪ್ರದೇಶಗಳು ಭಾರತಕ್ಕೆ ಸೇರಿದ ನಂತರವೂ ಹಳೆಯ ಅಪರಾಧಗಳಿಗೆ ಪೋರ್ಚುಗೀಸ್ ಪ್ರೊಸೀಜರ್ ಕೋಡ್ ಅನ್ವಯಿಸಲಾಗುತ್ತಿತ್ತು. ಇದನ್ನು ಸುಪ್ರೀಂಕೋರ್ಟ್ ಕೂಡಾ ಎತ್ತಿ ಹಿಡಿದಿದೆ. ಈ ಪ್ರಕರಣದಲ್ಲಿಯೂ ಎಲ್ಲಾ ಆರೋಪಗಳೂ ಜುಲೈ 1ಕ್ಕೂ ಹಳೆಯ ಕೃತ್ಯಗಳಾಗಿರುವುದರಿಂದ ಸಿಆರ್‌ಪಿಸಿ 156 (3) ಅಡಿಯಲ್ಲಿಯೇ ತನಿಖೆ ನಡೆಸುವುದು ಸೂಕ್ತ. ಹೀಗಾಗಿ ಮೈಸೂರಿನ ಲೋಕಾಯುಕ್ತ ಎಸ್‌ಪಿ ತನಿಖೆ ನಡೆಸಿ ಡಿಸೆಂಬರ್ 24 ರೊಳಗೆ ವರದಿ ಸಲ್ಲಿಸಬೇಕೆಂದು ಆದೇಶಿಸುತ್ತಿದ್ದೇನೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣದಲ್ಲಿ ಸಿಎಂಗೆ ಮತ್ತೆ ಶಾಕ್‌, ಲೋಕಾಯುಕ್ತ ತನಿಖೆಗೆ ಡೆಡ್​ಲೈನ್ ನೀಡಿದ ಕೋರ್ಟ್!

ನಾಳೆ(ಸೆಪ್ಟೆಂಬರ್ 26) ಈ ಆದೇಶದ ಪ್ರತಿ ಲಭ್ಯವಾಗುವ ಹಿನ್ನೆಲೆಯಲ್ಲಿ ನಾಳೆಯೇ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ವಿರುದ್ಧ ಎಫ್‌ಐಆರ್ ದಾಖಲಿಸುವ ಸಾಧ್ಯತೆ ಇದೆ. ಎಫ್‌ಐಆರ್ ದಾಖಲಾದರೆ ತನಿಖಾಧಿಕಾರಿಗೆ ಬಂಧನ ಸೇರಿದಂತೆ ಎಲ್ಲ ಅಧಿಕಾರಗಳೂ ಇದ್ದು ಆರೋಪಿ ಸ್ಥಾನದಲ್ಲಿ ಸಿದ್ದರಾಮಯ್ಯ ನಿಲ್ಲುತ್ತಾರೆ. ವಿಚಾರಣೆಗೆ ಕರೆದಾಗ ತನಿಖಾಧಿಕಾರಿ ಮುಂದೆ ಸಿದ್ದರಾಮಯ್ಯ ಹಾಜರಾಗಬೇಕಿದೆ. ಇನ್ನು ಸಿದ್ದರಾಮಯ್ಯಗೆ ಎರಡು ದಿನಗಳಲ್ಲಿ ಎರಡು ಹಿನ್ನಡೆಗಳಾಗಿದ್ದರೂ ಕೂಡಾ ಕಾನೂನು ಹೋರಾಟಕ್ಕೆ ಸಿದ್ದರಾಗಿದ್ದಾರೆ.

ಹೈಕೋರ್ಟ್ ಆದೇಶದಲ್ಲೇನಿತ್ತು?

ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 ಸಿ ಅಡಿ ಸಿದ್ದರಾಮಯ್ಯ ವಿರುದ್ಧ ಆರೋಪವಿದೆ. ಈ ಸೆಕ್ಷನ್ ಅಡಿ ಸಾರ್ವಜನಿಕ ಸೇವಕನಾದವನು ತನಗಾಗಲೀ ಅಥವಾ ಇತರರಿಗಾಗಲೀ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ನ್ಯಾಯವಲ್ಲದ ಲಾಭ ಪಡೆದರೆ ಅದು ಅಪರಾಧವಾಗುತ್ತದೆ. ಮುಡಾ ಪ್ರಕರಣದ ವಾಸ್ತವಾಂಶಗಳನ್ನು ಗಮನಿಸಿದರೆ ಮೇಲ್ನೋಟಕ್ಕೆ ಸಿಎಂ ಕುಟುಂಬ ನ್ಯಾಯವಲ್ಲದ ಲಾಭ ಪಡೆದಿರುವುದು ಸ್ಪಷ್ಟವಾಗಿದೆ. 40 ಕಿಲೋ ಮೀಟರ್ ದೂರದ ಜಮೀನು ಬಿಟ್ಟುಕೊಟ್ಟು ಅದರ ಬದಲಿಗೆ ಮೈಸೂರಿನ ಹೃದಯ ಭಾಗದ ನಿವೇಶನಗಳನ್ನು ಪಡೆದಿದ್ದಾರೆ. ಸಾರ್ವಜನಿಕ ಸೇವಕ ತನ್ನ ಕುಟುಂಬದವರಿಗಾಗಿ ಪ್ರಭಾವ ಬಳಸಿರುವುದಕ್ಕೆ ಇದು ಸಾಕು. ಪ್ರಭಾವ ಬಳಸಲು ಸಾರ್ವಜನಿಕ ಸೇವಕ ಯಾವುದೇ ಶಿಫಾರಸು ಅಥವಾ ಆದೇಶ ಮಾಡಬೇಕಿಲ್ಲ. ಪತ್ನಿಗೆ ಲಾಭವಾಗುವುದರ ಹಿಂದೆ ನಿಸ್ಸಂದೇಹವಾಗಿ ಸಿದ್ದರಾಮಯ್ಯ ಇದ್ದಾರೆ. ಸಿದ್ದರಾಮಯ್ಯ ಅವರಿಗಿರುವ ಅಧಿಕಾರದ ಬಲದಿಂದಲೇ ಅವರ ಕುಟುಂಬ ಅನುಕೂಲ ಪಡೆದಿದೆ.

ಕೆಸರೆ ಗ್ರಾಮದಲ್ಲಿ ಜಮೀನು ಕಳೆದುಕೊಂಡವರಿಗೆ ವಿಜಯನಗರ 3ನೇ ಹಂತದ ಬಡಾವಣೆಯಲ್ಲಿ ಬದಲಿ ನಿವೇಶನ ಮಂಜೂರು ಮಾಡಿದ ಬೇರೆ ಉದಾಹರಣೆಗಳಿಲ್ಲ. ಅಚ್ಚರಿಯ ವಿಚಾರವೆಂದರೆ ಸಿಎಂ ಪತ್ನಿಗೆ 50 – 50 ಅನುಪಾತದಲ್ಲಿ ನಿವೇಶನ ಹಂಚಿಕೆಯಾದ ಬಳಿಕ ಈ ನಿಯಮವನ್ನೇ ರದ್ದುಪಡಿಸಲಾಗಿದೆ. ಸಿಎಂ ಪುತ್ರ ಭಾಗಿಯಾಗಿದ್ದ ಸಭೆಯಲ್ಲಿ 50 50 ನಿವೇಶನ ಹಂಚಿಕೆ ತೀರ್ಮಾನವಾಗಿದೆ. 50-50 ಹಂಚಿಕೆ ಕಾನೂನುಬಾಹಿರವೆಂದು ರದ್ದಾಗಿದ್ದರೆ ಸಿಎಂ ಪತ್ನಿಗೆ ದೊರಕಿದ 14 ನಿವೇಶನಗಳಿಗೆ ಏನಾಗಲಿದೆ ಎಂಬ ಬಗ್ಗೆ ತನಿಖೆಯಾಗಬೇಕಿದೆ. ಸಾಮಾನ್ಯ ನಾಗರಿಕನಾಗಿದ್ದರೆ ತನಿಖೆಗೆ ನಾಚುತ್ತಿರಲಿಲ್ಲ. ಮುಖ್ಯಮಂತ್ರಿ ದಿನಗೂಲಿಯವರು, ಜನಸಾಮಾನ್ಯರ ನಾಯಕನಾಗಿ ತನಿಖೆಗೆ ಹಿಂಜರಿಯಬಾರದು. ಸಿದ್ದರಾಮಯ್ಯ ಕುಟುಂಬದ ವಿರುದ್ಧ 56 ಕೋಟಿಯ ಅಕ್ರಮ ಲಾಭ ಪಡೆದ ಆರೋಪ, ಅನುಮಾನಗಳಿರುವಾಗ ತನಿಖೆ ಅತ್ಯಗತ್ಯವೆಂದು ಭಾವಿಸುತ್ತೇನೆ. ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

ಹೈಕೋರ್ಟ್​​-ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ಆದೇಶದ ಸಾರ

ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಪ್ರಶ್ನಿಸಿ ಸಿಎಂ ಸಿದ್ದರಾಂಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾ ಮಾಡಿದೆ. ಈ ಅರ್ಜಿ ವಜಾ ಆಗಿದ್ದಕ್ಕೆ ಇತ್ತ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ.  ಸಿಎಂ ವಿರುದ್ಧ ಏಕೆ ತನಿಖೆ ನಡೆಯಬೇಕೆಂದು ಹೈಕೋರ್ಟ್​​ ಉಲ್ಲೇಖಿಸಿದ ಅಂಶಗಳನ್ನೇ ಜನಪ್ರತಿನಿಧಿಗಳ ಕೋರ್ಟ್​ ಪಾಯಿಂಟ್​ ಮಾಡಿ ಆದೇಶ ಹೊರಡಿಸಿದೆ. ಒಂದು ವೇಳೆ ಹೈಕೋರ್ಟ್​ ಏನಾದರೂ ಸಿಎಂ ಅರ್ಜಿ ಪುರಸ್ಕರಿಸಿದ್ದರೆ ಜನಪ್ರತಿನಿಧಿಗಳ ಕೋರ್ಟ್​ನ ತೀರ್ಪು ಏನಾಗಿರುತ್ತಿತ್ತೋ..?

ಸಿದ್ದರಾಮಯ್ಯ ಮುಂದಿನ ನಡೆ ಏನು?

ಸಿಎಂ ಸಿದ್ದರಾಮಯ್ಯ ನಾಳೆಯೇ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವಂತೆಯೂ ಮನವಿ ಮಾಡಲಿದ್ದಾರೆ. ಹೈಕೋರ್ಟ್ ತಡೆಯಾಜ್ಞೆ ನೀಡಿದರೆ ಸಿದ್ಧರಾಮಯ್ಯಗೆ ತನಿಖೆಯಿಂದ ರಿಲೀಫ್ ಸಿಕ್ಕಂತಾಗಲಿದೆ. ಇನ್ನು ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮತಿ ಎತ್ತಿ ಹಿಡಿದ ನಿನ್ನೆಯ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸಿಎಂ ಸಿದ್ಧತೆ ನಡೆಸಿದ್ದಾರೆ. ರಾಜ್ಯಪಾಲರ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದರೂ ಸಿದ್ದರಾಮಯ್ಯಗೆ ರಿಲೀಫ್ ಸಿಗಲಿದೆ. ಒಂದು ವೇಳೆ ರಿಲೀಫ್ ಸಿಗದಿದ್ದರೆ ತಕ್ಷಣ ಸುಪ್ರೀಂಕೋರ್ಟ್ ಮೆಟ್ಟಿಲೇರಲೂ ಸಿಎಂ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಹಾಗೂ ಅವರ ಟೀಂ ಮುಂದಿನ ಕಾನೂನು ಹೋರಾಟಕ್ಕೆ ಅಣಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ