ಮುಡಾ ಹಗರಣ: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ ಭವಿಷ್ಯ ನಾಳೆ ನಿರ್ಧಾರ, ಎಲ್ಲರ ಚಿತ್ತ ಹೈಕೋರ್ಟ್​ನತ್ತ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಭಾರೀ ಸಂಚಲನ ಮೂಡಿಸಿದೆ. ಅದರಲ್ಲೂ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ತೀರ್ಪನ್ನು ಹೈಕೋರ್ಟ್‌ ಮಂಗಳವಾರ ಪ್ರಕಟಿಸಲಿದೆ.

ಮುಡಾ ಹಗರಣ: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ ಭವಿಷ್ಯ ನಾಳೆ ನಿರ್ಧಾರ, ಎಲ್ಲರ ಚಿತ್ತ ಹೈಕೋರ್ಟ್​ನತ್ತ
ಮುಡಾ ಹಗರಣ
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Sep 23, 2024 | 6:24 PM

ಬೆಂಗಳೂರು, (ಸೆಪ್ಟೆಂಬರ್ 23): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟು ಹಂಚಿಕೆ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತವಾಗಿದ್ದು, ನಾಳೆ(ಸೆಪ್ಟೆಂಬರ್ 24) ಹೈಕೋರ್ಟ್​ ತೀರ್ಪು ಪ್ರಕಟಿಸಲಿದೆ.  ಈಗಾಗಲೇ ಎರಡು ಕಡೆಯ ವಾದವನ್ನು ಆಲಿಸಿ ವಿಚಾರಣೆ ಮುಕ್ತಾಯಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಾಳೆ (ಮಂಗಳವಾರ) ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದ್ದು, ಎಲ್ಲರ ಚಿತ್ತ ಹೈಕೋರ್ಟ್​​ನತ್ತ ನೆಟ್ಟಿದೆ.

ಸಿದ್ದರಾಮಯ್ಯ ಪರವಾಗಿ ಹಿರಿಯ ಸುಪ್ರೀಂ ಕೋರ್ಟ್‌ ವಕೀಲ ಅಭಿಷೇಕ್‌ ಮನು ಸಿಂಘ್ವಿ ಸೇರಿದಂತೆ ಹಲವು ಹಿರಿಯ ವಕೀಲರು ವಾದ ಮಂಡಿಸಿದ್ದರು. ಇನ್ನು ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ವಾದ ಮಂಡಿಸಿದ್ದರು. ಅಲ್ಲದೇ ದೂರುದಾರರಾದ ಟಿಜೆ ಅಬ್ರಾಹಂ ಮತ್ತು ಸ್ನೇಹಮಯಿ ಕೃಷ್ಣ ಪರ ವಕೀಲರು ಸಹ ತಮ್ಮ ವಾದ ಮಂಡಿಸಿದ್ದರು. ಈ ಎಲ್ಲಾ ವಾದ ಪ್ರತಿವಾದ ಆಲಿಸಿದ್ದ ನ್ಯಾ. ಎಂ.ನಾಗಪ್ರಸನ್ನ ಅವರು ಆದೇಶವನ್ನು ಕಾಯ್ದಿರಿಸಿದ್ದರು.

ಮುಡಾ ಹಗರಣದ ಹಿನ್ನೆಲೆ

ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ನೀಡಿದ್ದು, ಈಗ ವಿವಾದಕ್ಕೀಡಾಗಿದೆ.

ಮೈಸೂರಿನ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿರುವ 3 ಎಕರೆ 16 ಗುಂಟೆ ಜಾಗವನ್ನು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಸಹೋದರ, ಪಾರ್ವತಿಯವರಿಗೆ ದಾನವಾಗಿ ನೀಡಿದ್ದರು. ಈ ಜಾಗವನ್ನು ಅಭಿವೃದ್ಧಿಗಾಗಿ ಪ್ರಾಧಿಕಾರ ಕಾನೂನು ಪ್ರಕಾರವೇ ವಶಪಡಿಸಿಕೊಂಡಿತ್ತು. 1998 ರಲ್ಲಿ ನೋಟಿಫೈ ಮಾಡಿತ್ತು. ಇದೇ ಜಾಗದಲ್ಲಿ ದೇವನೂರು 3ನೇ ಹಂತದ ಬಡಾವಣೆಯನ್ನೂ ಅಭಿವೃದ್ಧಿ ಮಾಡಿದೆ. ವಿಷಯ ಏನೆಂದರೆ ವಶಪಡಿಸಿಕೊಂಡ ಜಾಗಕ್ಕೆ ಬದಲಿ ಭೂಮಿ ಕೊಡುವುದು ಪ್ರಾಧಿಕಾರದ ಕರ್ತವ್ಯ. ಹೀಗಾಗಿ ಬದಲಿ ಭೂಮಿ ನೀಡುವಂತೆ 2014ರಲ್ಲಿ ಸಿಎಂ ಪತ್ನಿ ಅರ್ಜಿ ಹಾಕಿದ್ದರು. 2017ರಲ್ಲಿ ನಡೆದ ಸಭೆಯಲ್ಲಿ ಅಭಿವೃದ್ಧಿಪಡಿಸದೇ ಇರುವ ಭೂಮಿ ನೀಡಲು ತೀರ್ಮಾನಿಸಲಾಗಿತ್ತು. ಆದರೆ ಇದಕ್ಕೆ ಒಪ್ಪದ ಸಿಎಂ ಪತ್ನಿ ಪಾರ್ವತಿ 2021ರಲ್ಲಿ ಮತ್ತೊಂದು ಪತ್ರ ಬರೆದು 50:50 ಅನುಪಾತದಲ್ಲಿ ಬದಲಿ ನಿವೇಶನ ಕೊಡಿ ಎಂದು ಮನವಿ ಸಲ್ಲಿಸಿದ್ದರು. ಸಿಎಂ ಪತ್ನಿ ಕೋರಿಕೆಯಂತೆ 2021ರಲ್ಲಿ 50:50 ಅನುಪಾತದಲ್ಲಿ ಭೂಮಿ ನೀಡಲಾಗಿದೆ.

ಕೆಸರೆಯಲ್ಲಿ ಕಡಿಮೆ ಮೌಲ್ಯದ ಜಾಗ ಸ್ವಾಧೀನ ಮಾಡಿ, ವಿಜಯನಗರದಲ್ಲಿ ಹೆಚ್ಚಿನ ಮೌಲ್ಯದ ಬದಲಿ ಭೂಮಿ ನೀಡಲಾಗಿದೆ. ಅಂದರೆ, ದೇವನೂರು ಬಡಾವಣೆಯಲ್ಲಿ ಚದರ ಅಡಿಗೆ 2,500 ರೂ. ನಿಂದ 3,000 ರೂ.ವರೆಗೆ ದರ ಇದೆ. ಆದರೆ ವಿಜಯನಗರದಲ್ಲಿ ಚದರ ಅಡಿಗೆ 7 ರಿಂದ 8 ಸಾವಿರ ರೂಪಾಯಿ ಇದೆ. ಹೀಗಾಗಿ ಸಿಎಂ ಮತ್ತು ಸಿಎಂ ಪತ್ನಿಗೆ ಆರ್ಥಿಕ ಲಾಭ ಮಾಡಿಕೊಡಲು ಮುಡಾ ಅಧಿಕಾರಿಗಳು ಸರ್ಕಾರಕ್ಕೆ ಆರ್ಥಿಕ ನಷ್ಟ ಮಾಡಿದ್ದಾರೆ. ಸಿಎಂ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರಿಂದ ಈ ಜಾಗ ಹಂಚಿಕೆ ಮಾಡಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಒಂದನೇಯದಾಗಿ ಸಿಎಂ ಪತ್ನಿಗೆ 1998ರ ಜಾಗಕ್ಕೆ 2021ರಲ್ಲಿ ಪರಿಹಾರ ಸಿಕ್ಕಿರುವುದು, ಎರಡನೇಯದ್ದು ಬೇರೆ ಕಡೆ ಭೂಮಿ ಕೊಟ್ಟಿರುವುದು, ಮೂರನೇಯದ್ದು 50-50 ಅನುಪಾತ ದುರ್ಬಳಕೆ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಬೆಳಕಿಗೆ ಬಂದಿದ್ದು ಹೇಗೆ?

50:50 ಅನುಪಾತದ ಅಡಿ ನಿವೇಶನ ಹಂಚಿಕೆ ಬಗ್ಗೆ ಆರ್‌ಟಿಐ (RTI) ಕಾರ್ಯಕರ್ತರು ಧ್ವನಿ ಎತ್ತಿದ್ದರು. ಈ ವೇಳೆ ಸಿಎಂ ಪತ್ನಿಗೂ ನಿವೇಶನ ಹಂಚಿಕೆ ಆಗಿರುವ ದಾಖಲೆ ಬೆಳಕಿಗೆ ಬಂದವು. ಹೀಗಾಗಿ ಹಗರಣ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದು, ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯಕ್ಕೆ ಮುಳುವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:12 pm, Mon, 23 September 24

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ