ಮುಡಾ ಕೇಸ್​: ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ನೀಡಿದ ಸ್ನೇಹಮಯಿ ಕೃಷ್ಣ

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರು ಸಜ್ಜಾಗುತ್ತಿದ್ದಾರೆ. ಇತ್ತ ಪ್ರಕರಣದಿಂದ ಪಾರಾಗಲು ಸಿಎಂ ಕಾನೂನು ತಜ್ಞರ ಜತೆ ಚರ್ಚಿಸುತ್ತಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಇಡಿಗೂ ದೂರು ನೀಡಿದ್ದಾರೆ. ಆ ಮೂಲಕ ಸಿಎಂ ಮತ್ತೊಂದು ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ.

ಮುಡಾ ಕೇಸ್​: ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ನೀಡಿದ ಸ್ನೇಹಮಯಿ ಕೃಷ್ಣ
ಮುಡಾ ಕೇಸ್​: ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ನೀಡಿದ ಸ್ನೇಹಮಯಿ ಕೃಷ್ಣ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 28, 2024 | 7:53 PM

ಮೈಸೂರು, ಸೆಪ್ಟೆಂಬರ್ 28: ಸಿಎಂ ಸಿದ್ದರಾಮಯ್ಯಗೆ (Siddaramaiah) ದೊಡ್ಡ ಸಂಕಷ್ಟ ತಂದಿರುವ ಮುಡಾ ಹಗರಣದ ವಿಚಾರಣೆಗೆ, ಲೋಕಾಯುಕ್ತ ಪೊಲೀಸರು ಸಜ್ಜಾಗಿದ್ದಾರೆ. ತನಿಖೆಗೆ ನಾಲ್ಕು ತಂಡ ಸಜ್ಜಾಗಿದ್ದು, ಸೋಮವಾರದಿಂದಲೇ ಫೀಲ್ಡ್‌ಗೆ ಇಳಿಯಲಿವೆ. ಈ ಮಧ್ಯೆ ದೂರುದಾರ ಸ್ನೇಹಮಯಿ ಕೃಷ್ಣ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ನೀಡಿದ್ದಾರೆ. ಆ ಮೂಲಕ ಸಿಎಂಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮುಡಾದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಇಡಿಗೆ 16 ಪುಟಗಳ ಇ-ಮೇಲ್ ಹಾಗೂ ಪತ್ರ ಬರೆಯುವ ಮೂಲಕ ಜಾರಿ ನಿರ್ದೇಶನಾಲಯದ ಬೆಂಗಳೂರು ನಿರ್ದೇಶಕರಿಗೆ ದೂರು ನೀಡಿದ್ದಾರೆ.

ಮನಿ ಲ್ಯಾಂಡರಿಂಗ್ ಆ್ಯಕ್ಟ್​ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಮುಡಾದಲ್ಲಿ ಪತ್ನಿಯ ಹೆಸರಿನಲ್ಲಿ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಸಿಎಂ ಬೆನ್ನು ಬಿಡದ ಸ್ನೇಹಮಯಿ‌ ಕೃಷ್ಣ: ಸಾಮಾಜಿಕ ಜಾಲತಾಣದಲ್ಲಿ ಹಳೆ ವಿಡಿಯೋ ಹಂಚಿಕೊಂಡು ಟಾಂಗ್​

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ಪತ್ನಿಗೆ ಅಕ್ರಮವಾಗಿ ಸೈಟ್‌ ಹಂಚಿಕೆ ಮಾಡಿದ್ದಾರೆ ಅನ್ನೋ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಹಗರಣ ಸಂಬಂಧ ನಿನ್ನೆಯಷ್ಟೇ ಸಿಎಂ ಹಾಗೂ ಪತ್ನಿ ವಿರುದ್ಧ ಎಫ್ಐಆರ್‌ ದಾಖಲಾಗಿತ್ತು. ಇಂದು ಹಾಗೂ ನಾಳೆ ರಜೆ ಇರೋದ್ರಿಂದ ಸೋಮವಾರದಿಂದ ತನಿಖೆ ಆರಂಭ ಆಗೋ ಸಾಧ್ಯತೆ ಇದೆ.

ಇಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸಿಬ್ಬಂದಿ ಸಭೆ ನಡೆಸಿದ ಎಸ್‌ಪಿ ಉದೇಶ್‌, ತನಿಖೆಗಾಗಿ ನಾಲ್ಕು ತಂಡ ರಚನೆ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ ಎಸ್​ಪಿ ಉದೇಶ್​​​, ಡಿವೈಎಸ್​ಪಿ ಮಾಲತೀಶ್, ಚಾಮರಾಜನಗರ ಡಿವೈಎಸ್​ಪಿ ಮ್ಯಾಥ್ಯೂ ಥಾಮಸ್​​​ ಹಾಗೂ ಇನ್ಸ್​ಪೆಕ್ಟರ್​​ ಒಳಗೊಂಡ ನಾಲ್ಕು ತನಿಖಾ ತಂಡಗಳ ರಚನೆ ಮಾಡಲಾಗಿದೆ.

ಇದನ್ನೂ ಓದಿ: ಲೋಕಾಯುಕ್ತ FIR ಕುರಿತು ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ: ರಾಜೀನಾಮೆ ಬಗ್ಗೆ ಹೇಳಿದ್ದಿಷ್ಟು

ನಿನ್ನೆಯಿಂದಲೂ ಮೈಸೂರು ಪ್ರವಾಸದಲ್ಲಿರುವ ಸಿಎಂ, ನಿನ್ನೆ ಕೆಡಿಪಿ ಸಭೆ ನಡೆಸಿದ್ದರು. ಪ್ರತೀ ಸಭೆಯಲ್ಲೂ ಅಧಿಕಾರಿಗಳ ಚಳಿ ಬಿಡಿಸುತ್ತಿದ್ದ ಸಿಎಂ, ನಿನ್ನೆ ಮಾತ್ರ ಸೈಲೆಂಟ್ ಆಗಿ ಇದ್ರಂತೆ. ಎಫ್‌ಐಆರ್‌ ಎಫೆಕ್ಟ್‌ನಿಂದ ಸಿಎಂ ಮಂಕಾದ್ರಾ ಅನ್ನೋ ಪ್ರಶ್ನೆ ಮೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ