ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ: ಹಾಗಾದ್ರೆ, ಸಿದ್ದರಾಮಯ್ಯ ಅರೆಸ್ಟ್ ಆಗ್ತಾರಾ?
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಡಾ ಹಗರಣ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ಕೋರ್ಟ್ನಲ್ಲೂ ಸಹ ಸಿಎಂ ಸಿದ್ದರಾಮಯ್ಯಗೆ ಹಿನ್ನೆಡೆಯಾಗಿದೆ. ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಹಾಗಾದ್ರೆ, ಸಿದ್ದರಾಮಯ್ಯ ಅರೆಸ್ಟ್ ಆಗುತ್ತಾರಾ? ಮುಂದೆ ಏನೆಲ್ಲಾ ಪ್ರಕ್ರಿಯೆಗಳು ನಡೆಯಲಿವೆ ಎನ್ನುವ ವಿವರ ಇಲ್ಲಿದೆ.
ಬೆಂಗಳೂರು/ಮೈಸೂರು, (ಸೆಪ್ಟೆಂಬರ್ 25): ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಸುಮಾರು 56 ಕೋಟಿ ರು. ಮೌಲ್ಯದ 14 ಬದಲಿ ನಿವೇಶನಗಳನ್ನು ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮೋದನೆಯನ್ನು ಹೈ ಕೋರ್ಟ್ ಎತ್ತಿಹಿಡಿದಿತ್ತು.ಇದರ ಬೆನ್ನಲ್ಲೇ ಇತ್ತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಹ ಸಿಎಂ ವಿರುದ್ಧ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. 3 ತಿಂಗಳಲ್ಲಿ ಅಂದರೆ ಡಿಸೆಂಬರ್ 24ರೊಳಗೆ ತನಿಖೆ ನಡೆಸಿ ವರದಿ ನೀಡುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತಷ್ಟು ಸಂಕಷ್ಟ ಹೆಚ್ಚಾಗಿದ್ದು, ಬಂಧನವಾಗುವ ಸಾಧ್ಯತೆಗಳು ಸಹ ಇವೆ.
CRPC ಸೆಕ್ಷನ್ 156(3) ಅಡಿ ಕೇಸ್ ರಿಜಿಸ್ಟರ್ ಮಾಡಲು ಆದೇಶ ನೀಡಲಾಗಿದ್ದು, ತನಿಖಾ ವರದಿ ನೀಡಲು 3 ತಿಂಗಳ ಗಡುವು ನೀಡಲಾಗಿದೆ. ಅಂದ್ರೆ ಡಿಸೆಂಬರ್ 24 2024ಕ್ಕೆ ತನಿಖಾ ವರದಿ ನೀಡಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ. ಕೋರ್ಟ್ ಆದೇಶದ ಕಾಪಿ ಲೋಕಾಯುಕ್ತ ಡಿಜಿಗೆ ತಲುಪಲಿದೆ. ಬಳಿಕ ಲೋಕಾಯುಕ್ತ ಡಿಜಿ ಮೈಸೂರಿನ ಎಸ್‌ಪಿಗೆ ನಿರ್ದೇಶನ ನೀಡಲಿದ್ದಾರೆ. ತದ ನಂತರ ಎಸ್‌ಪಿ ಲೋಕಾಯುಕ್ತ ಎಸ್‌ಪಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಲಿದ್ದಾರೆ.
ಇದನ್ನೂ ಓದಿ: ಮುಡಾ ಹಗರಣದಲ್ಲಿ ಸಿಎಂಗೆ ಮತ್ತೆ ಶಾಕ್, ಲೋಕಾಯುಕ್ತ ತನಿಖೆಗೆ ಡೆಡ್ಲೈನ್ ನೀಡಿದ ಕೋರ್ಟ್!
ಮೊದಲು ಸಿಎಂ ವಿರುದ್ದ ಎಫ್‌ಐಆರ್ ದಾಖಲು ಮಾಡಿ ನಂತರ ತನಿಖೆ ಶುರುವಾಗಲಿದ್ದು, ಸಿದ್ದರಾಮಯ್ಯ ಬಂಧನ ಸಾಧ್ಯತೆ ಇದೆ. ಯಾಕಂದರೆ 156(3) ಅಡಿ ತನಿಖೆಗೆ ಆದೇಶವಾದರೆ ಎಫ್ಐಆರ್ ದಾಖಲಿಸಬೇಕು. ಹೀಗಾಗಿ ಶೀಘ್ರದಲ್ಲೇ ಮುಖ್ಯಮಂತ್ರಿ ವಿರುದ್ಧ ಎಫ್ಐಆರ್ ದಾಖಲಾಗಲಿದೆ. ಬಳಿಕ ಅವಶ್ಯಕತೆಗೆ ಅನುಸಾರವಾಗಿ ತನಿಖಾಧಿಕಾರಿ ಅಧಿಕಾರ ಬಳಸಬಹುದು. ಹೀಗಾಗಿ ಬಂಧನ ಸೇರಿದಂತೆ ಸಂಪೂರ್ಣ ಅಧಿಕಾರ ತನಿಖಾಧಿಕಾರಿಗೆ ಇರಲಿದೆ. ಆದ್ದರಿಂದ ಅವಶ್ಯಕತೆ ಇದ್ದರೆ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯನವರನ್ನು ಬಂಧಿಸಬಹುದು. ಹೀಗಾಗಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡ ಬಳಿಕ ಸಿದ್ದರಾಮಯ್ಯನವರನ್ನು ಯಾವ ಸಂದರ್ಭದಲ್ಲಾದರೂ ಬಂಧನ ಮಾಡಬಹುದು.
ಇದನ್ನೂ ಓದಿ: ತಮ್ಮ ವಿರುದ್ಧ ಕೋರ್ಟ್ ಲೋಕಾಯುಕ್ತ ತನಿಖೆ ಆದೇಶದ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್
ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಹೇಳುವುದೇನು?
ಇನ್ನು ಕೋರ್ಟ್ ಲೋಕಾಯುಕ್ತ ತನಿಖೆಗೆ ಆದೇಶದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ವಸಂತ ಕುಮಾರ್, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಉತ್ತಮ ಆದೇಶ ಕೊಟ್ಟಿದೆ. ನಿನ್ನೆ ಹೈಕೋರ್ಟ್ ಕೊಟ್ಟ ತೀರ್ಪಿನ ಆದೇಶದ ಪ್ರತಿಯನ್ನು ನೀಡಿದ್ದೆವು. ಖಾಸಗಿ ದೂರಿಗೆ ನ್ಯಾಯ ಸಿಕ್ಕಿದೆ. 3 ತಿಂಗಳೊಳಗೆ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತಗೆ ಸೂಚನೆ ನೀಡಿದೆ. ಪ್ರಾಮಾಣಿಕವಾಗಿ ತನಿಖೆ ಆಗಬೇಕು ಅಂತಾ ಮನವಿ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದಾಗ ತನಿಖೆ ಆಗಬೇಕು. FIR ದಾಖಲಿಸಿ ತನಿಖೆ ಆಗಬೇಕು, ಅರೆಸ್ಟ್ ಕೂಡ ಮಾಡಬಹುದು ಎಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ