ಮೈಸೂರು, (ಸೆಪ್ಟೆಂಬರ್ 27): ಅಕ್ರಮವಾಗಿ ಮುಡಾ ಸೈಟು ಪಡೆದ ಕೇಸ್ನಲ್ಲಿ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಸಿದ್ದರಾಮಯ್ಯ A1 ಆರೋಪಿಯಾಗಿದ್ದಾರೆ. ಇನ್ನು ಸಿಎಂ ಪತ್ನಿ ಪಾರ್ವತಿ A2, ಬಾಮೈದ ಮಲ್ಲಿಕಾರ್ಜುನ್ ಸ್ವಾಮಿ A3 ಹಾಗೂ ಭೂಮಿ ಮಾರಾಟ ಮಾಡಿದ ಮಾಲೀಕ ದೇವರಾಜು A4 ಆರೋಪಿಯಾಗಿದ್ದಾರೆ. ಇನ್ನು ಆರೋಪಿಗಳ ಮೇಲೆ ಯಾವೆಲ್ಲಾ ಸೆಕ್ಷನ್ಗಳನ್ನು ಹಾಕಲಾಗಿದೆ? ಸೆಕ್ಷನ್ಗಳು ಏನು ಹೇಳುತ್ತವೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.
ನ್ಯಾಯಾಲಯ ಸೂಚಿಸಿದ ಸೆಕ್ಷನ್ಗಳಡಿ ಎಫ್ಐಆರ್ ದಾಖಲಾಗಿದೆ. ಸಿಆರ್ಪಿಸಿ ಸೆಕ್ಷನ್ 156(3)ರ ಅಡಿ ಎಫ್ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 120B, 166, 403, 406, 420, 426, 465, 468, 340, 351ರ ಅಡಿ ಕೇಸ್ ದಾಖಲಾಗಿದೆ. ಅಷ್ಟೇ ಅಲ್ಲದೇ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್ 9, 13ರ ಅಡಿ ಎಫ್ಐಆರ್ ಆಗಿದೆ. ಇನ್ನು ಬೇನಾಮಿ ಆಸ್ತಿ ನಿಷೇಧ ಕಾಯ್ಡೆ ಸೆಕ್ಷನ್ 53 ಮತ್ತು 54, ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ ಸೆಕ್ಷನ್ 3, 4ರ ಅಡಿ ಎಫ್ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ: ಮುಡಾ ಕೇಸ್: ಕೊನೆಗೂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು, ಮುಂದೇನು?
CRPC 156(3) ಅಡಿ ಕೇಸ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿತ್ತು. ಆದ್ರೆ, ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರಿಗೆ ಕೆಲವು ಗೊಂದಲಗಳಿದ್ದವು. ಯಾವ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಬೇಕು? CRPC 156(3) ಬಿಎನ್ಎಸ್ಎಸ್ಯಡಿಯಲ್ಲಿ ಅಥಾವ ಐಪಿಸಿಯಲ್ಲಿ ಎಫ್ಐಆರ್ ದಾಖಲಿಸಬೇಕೆಂಬ ಗೊಂದಲ ಇತ್ತು. ಈ ಹಿನ್ನೆಲೆಯಲ್ಲಿ ಉದೇಶ್ ಅವರು ಹಿರಿಯ ಕಾನೂನು ಪರಿಣಿತರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದರು. ಅಲ್ಲದೇ ಕಾನೂನು ತಜ್ಞರ ಜೊತೆ ಚರ್ಚೆ ಬಳಿಕ ಖುದ್ದು ನ್ಯಾಯಾಧೀಶರನ್ನು ಭೇಟಿ ಮಾಡಿ ಸಲಹೆ ಪಡೆದುಕೊಂಡಿದ್ದರು. ಅದರಂತೆ ಇದೀಗ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ CRPC 156(3)ಯಡಿಯಲ್ಲಿಯೇ ಪ್ರಕರಣ ದಾಖಲಿಸಲಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ