AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಸೈಟ್ ಹಂಚಿಕೆ ಕೇಸ್ ಹಿನ್ನೆಲೆ ಯತೀಂದ್ರ ಖಾತೆ ಬದಲಾವಣೆಗೆ ಆಗ್ರಹ: ನೈಜ ಹೋರಾಟಗಾರರ ವೇದಿಕೆಯಿಂದ ಸಿಎಂಗೆ ಪತ್ರ

ಮೈಸೂರಿನ ಮುಡಾ (MUDA) ಸೈಟ್ ಹಂಚಿಕೆ ಹಗರಣದಲ್ಲಿ ಸಚಿವ ಡಾ. ಯತೀಂದ್ರ ಅವರ ತಂದೆ ಮತ್ತು ತಾಯಿ ಪ್ರಮುಖ ಆರೋಪಿಗಳಾಗಿರುವುದರಿಂದ, ಹಿತಾಸಕ್ತಿ ಸಂಘರ್ಷವನ್ನು ತಡೆಯಲು ತಕ್ಷಣವೇ ಅವರ ನಗರಾಭಿವೃದ್ಧಿ ಖಾತೆಯನ್ನು ಬದಲಾಯಿಸುವಂತೆ ಆಗ್ರಹಿಸಿ ‘ನೈಜ ಹೋರಾಟಗಾರರ ವೇದಿಕೆ’ಯು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದೆ.

ಮುಡಾ ಸೈಟ್ ಹಂಚಿಕೆ ಕೇಸ್ ಹಿನ್ನೆಲೆ ಯತೀಂದ್ರ ಖಾತೆ ಬದಲಾವಣೆಗೆ ಆಗ್ರಹ: ನೈಜ ಹೋರಾಟಗಾರರ ವೇದಿಕೆಯಿಂದ ಸಿಎಂಗೆ ಪತ್ರ
ಯತೀಂದ್ರ ಮತ್ತು ನೈಜ ಹೋರಾಟಗಾರರ ವೇದಿಕೆಯ ಪತ್ರದ ಪ್ರತಿImage Credit source: tv9
ಪ್ರಸನ್ನ ಗಾಂವ್ಕರ್​
| Edited By: |

Updated on: Jul 06, 2026 | 11:16 AM

Share

ಮುಖ್ಯಾಂಶಗಳು

  • ಸಚಿವ ಡಾ. ಯತೀಂದ್ರ ಖಾತೆ ಬದಲಾವಣೆಗೆ ಆಗ್ರಹ
  • ಮುಡಾ ಹಗರಣದಲ್ಲಿ ತಂದೆ, ತಾಯಿ ಆರೋಪಿಗಳು
  • ಹಿತಾಸಕ್ತಿ ಸಂಘರ್ಷ ತಡೆಯಲು ಸಿಎಂಗೆ ಪತ್ರ

ಬೆಂಗಳೂರು, ಜುಲೈ 6: ಕರ್ನಾಟಕ ರಾಜಕಾರಣದಲ್ಲಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಬದಲಿ ನಿವೇಶನ ಹಂಚಿಕೆ ಹಗರಣದ ವಿವಾದ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸಚಿವ ಡಾ. ಯತೀಂದ್ರ (Yathindra Siddaramaiah) ಅವರ ಖಾತೆ ಬದಲಾವಣೆಗೆ ತೀವ್ರ ಒತ್ತಡ ವ್ಯಕ್ತವಾಗಿದೆ. ನಗರಾಭಿವೃದ್ಧಿ ಇಲಾಖೆಯ ಸಚಿವರಾಗಿರುವ ಡಾ. ಯತೀಂದ್ರ ಅವರಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಖಾತೆಯಿಂದ ಮುಕ್ತಿ ನೀಡಿ, ಬದಲಿ ಇಲಾಖೆಯನ್ನು ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ‘ನೈಜ ಹೋರಾಟಗಾರರ ವೇದಿಕೆ’ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ (DK Shivakumar) ಪತ್ರ ಬರೆದು ಆಗ್ರಹಿಸಿದೆ.

ನ್ಯಾಯಾಲಯ ವಿಚಾರಣೆ, ಇಡಿ ತನಿಖೆ ಹಂತದಲ್ಲಿರುವ ಪ್ರಕರಣ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಬದಲಿ ನಿವೇಶನ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಾ. ಯತೀಂದ್ರ ತಂದೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿದ್ದು, ತಾಯಿ ಪಾರ್ವತಿ ಎರಡನೇ ಆರೋಪಿಯಾಗಿದ್ದಾರೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದರ ಜೊತೆಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲೂ ಕ್ರಿಮಿನಲ್ ಪ್ರಕರಣ (PCR 42/24), ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಮತ್ತು ಜಾರಿ ನಿರ್ದೇಶನಾಲಯದಲ್ಲಿ (ED) ಪ್ರಕರಣವೂ ದಾಖಲಾಗಿ ಸದ್ಯ ವಿಚಾರಣೆಯ ಹಂತದಲ್ಲಿದೆ.

ನೈಜ ಹೋರಾಟಗಾರರ ವೇದಿಕೆ ಪತ್ರದಲ್ಲೇನಿದೆ?

ವೇದಿಕೆಯ ಪರವಾಗಿ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ. ವೆಂಕಟೇಶ್ ಬರೆದಿರುವ ಪತ್ರದಲ್ಲಿ ಗಂಭೀರ ಕಾನೂನು ಮತ್ತು ನೈತಿಕ ಅಂಶಗಳನ್ನು ಪ್ರಸ್ತಾಪಿಸಲಾಗಿದೆ. ‘ಮುಡಾ ಹಗರಣದಲ್ಲಿ ಯತೀಂದ್ರರ ತಂದೆ ಮತ್ತು ತಾಯಿಯೇ ಪ್ರಮುಖ ಆರೋಪಿಗಳಾಗಿದ್ದಾರೆ. ಹೀಗಿರುವಾಗ ಅವರ ಮಗನೇ ಇಡೀ ರಾಜ್ಯದ ನಗರಾಭಿವೃದ್ಧಿ ಇಲಾಖೆಯ ಸಚಿವರಾಗಿ ಅಧಿಕಾರ ಚಲಾಯಿಸುವುದು ಮತ್ತು ನಿರ್ಧಾರಗಳನ್ನು ಕೈಗೊಳ್ಳುವುದು ಖಂಡಿತವಾಗಿಯೂ ‘ಹಿತಾಸಕ್ತಿ ಸಂಘರ್ಷ’ಕ್ಕೆ (Conflict of Interest) ಎಡೆಮಾಡಿಕೊಡುತ್ತದೆ. ಇದರಿಂದಾಗಿ ಸಾರ್ವಜನಿಕರಲ್ಲಿ, ‘ತಂದೆ-ತಾಯಿಯ ರಕ್ಷಣೆಗಾಗಿ ಅಧಿಕಾರ ದುರುಪಯೋಗವಾಗಬಹುದು’ ಎಂಬ ಅನುಮಾನ ಮೂಡುವುದು ಸಹಜ ಎಂದು ಪತ್ರದಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.

‘ಸೆಕ್ಷನ್ 167 ಮತ್ತು 169 ರ ಪ್ರಕಾರ ಸಾರ್ವಜನಿಕ ಸೇವೆಯಲ್ಲಿರುವವರು ತಪ್ಪು ದಾಖಲೆ ಸೃಷ್ಟಿಸುವುದು ಅಥವಾ ಕಾನೂನುಬಾಹಿರವಾಗಿ ಆಸ್ತಿ ಖರೀದಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಡಾ. ಯತೀಂದ್ರ ಇದೇ ಇಲಾಖೆಯಲ್ಲಿ ಮುಂದುವರಿದರೆ ಮುಡಾ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆಯಾಗಿ ನ್ಯಾಯ ಸಿಗುವುದು ಮರೀಚಿಕೆಯಾಗುತ್ತದೆ. ಆಡಳಿತಾತ್ಮಕ ಮತ್ತು ಸಂವಿಧಾನದ ಆರ್ಟಿಕಲ್ 311 ರ ನಿಯಮಾವಳಿಗಳ ಅನ್ವಯ ಪಾರದರ್ಶಕತೆ ಕಾಯ್ದುಕೊಳ್ಳಲು ಅವರನ್ನು ನಗರಾಭಿವೃದ್ಧಿ ಇಲಾಖೆಯಿಂದ ದೂರವಿಡಬೇಕು. ರಾಜ್ಯದ ನಾಗರಿಕರಲ್ಲಿ ಮೂಡಿರುವ ಗೊಂದಲಕ್ಕೆ ತೆರೆ ಎಳೆಯಲು ಮುಖ್ಯಮಂತ್ರಿಗಳು ತಕ್ಷಣವೇ ಅವರಿಗೆ ಯಾವುದೇ ಒತ್ತಡವಿಲ್ಲದ ಮತ್ತೊಂದು ಬದಲಿ ಖಾತೆಯನ್ನು ನೀಡಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡಬೇಕು’ ಎಂದು ಹೆಚ್.ಎಂ. ವೆಂಕಟೇಶ್ ಸಿಎಂ ಅವರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್!
ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್!
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!