AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಲೋಕಾಯುಕ್ತ ತನಿಖಾ ವರದಿಯಲ್ಲಿ ಮಹತ್ವದ ಅಂಶ ಉಲ್ಲೇಖ

ಮುಡಾ ಹಗರಣದ ಬಗ್ಗೆ ಲೋಕಾಯುಕ್ತ ನಡೆಸಿರುವ ತನಿಖೆಯ ಅಂತಿಮ ವರದಿ ಸಲ್ಲಿಕೆಯಾಗಿದ್ದು, ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಲೋಕಾಯುಕ್ತ ವರದಿಯನ್ನು ಐದು ವಿಭಾಗಗಳಾಗಿ ವಿಂಗಡಣೆ ಮಾಡಿ ಐಜಿಯವರಿಗೆ ಸಲ್ಲಿಕೆ ಮಾಡಲಾಗಿದೆ. ಅಂತಿಮ ವರದಿಯಲ್ಲೇನಿದೆ? ಅದರಲ್ಲಿ ಉಲ್ಲೇಖವಾಗಿರುವ ಮಹತ್ವದ ಅಂಶಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.

ಮುಡಾ ಹಗರಣ: ಲೋಕಾಯುಕ್ತ ತನಿಖಾ ವರದಿಯಲ್ಲಿ ಮಹತ್ವದ ಅಂಶ ಉಲ್ಲೇಖ
ಮುಡಾ, ಲೋಕಾಯುಕ್ತ
Kiran HV
| Edited By: |

Updated on: Feb 13, 2025 | 6:45 PM

Share

ಬೆಂಗಳೂರು, ಫೆಬ್ರವರಿ 13: ಮುಡಾ ಹಗರಣ ಸಂಬಂಧ ಒಂದೆಡೆ ಜಾರಿ ನಿರ್ದೇಶನಾಲಯ ತನಿಖೆ ಚುರುಕುಗೊಳಿಸಿದ್ದರೆ ಮತ್ತೊಂದೆಡೆ, ಲೋಕಾಯುಕ್ತ ತನಿಖೆಯ ಅಂತಿಮ ವರದಿ ಸಲ್ಲಿಕೆ ಮಾಡಲಾಗಿದೆ. ಹಗರಣದ ಇಂಚಿಂಚೂ ತನಿಖೆ ನಡೆಸಿರುವ ಲೋಕಾಯುಕ್ತ ಪೊಲೀಸರು, ಐಜಿಪಿ ಸುಬ್ರಮಣ್ಯೇಶ್ವರ ರಾವ್​ಗೆ ತನಿಖೆಯ ಅಂತಿಮ ವರದಿ ಸಲ್ಲಿಕೆ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ ಎಸ್​ಪಿ ಉದೇಶ್​ ಸಲ್ಲಿಸಿರುವ ವರದಿಯಲ್ಲಿ ಕೆಲವು ಮಹತ್ವದ ಅಂಶಗಳನ್ನು ಉಲ್ಲೇಖ ಮಾಡಲಾಗಿದೆ.

550 ಪುಟಗಳ ವರದಿ ಸಲ್ಲಿಕೆ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, 5 ಭಾಗಗಳಾಗಿ ವಿಂಗಡಣೆ ಮಾಡಿದ್ದಾರೆ.

ಲೋಕಾಯುಕ್ತ ರಿಪೋರ್ಟ್​ನಲ್ಲಿ ಏನಿದೆ?

ಕೆಲ ಅಧಿಕಾರಿಗಳು ನಿಯಮ ಗಾಳಿಗೆ ತೂರಿರುವುದು ಕಂಡು ಬಂದಿದೆ. ಮುಡಾದಲ್ಲಿ 14 ಸೈಟ್​ ನೀಡುವ ಅವಶ್ಯಕತೆ ಇರಲಿಲ್ಲವೆಂದು ಉಲ್ಲೇಖ ಮಾಡಲಾಗಿದೆ. ಸೈಟ್ ನೀಡುವ ಅವಶ್ಯಕತೆ ಇಲ್ಲದೇ ಇದ್ರೂ ಸೈಟ್ ನೀಡಿರುವುದು ಕಂಡುಬಂದಿದೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇನ್ನು ಹಗರಣದಲ್ಲಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿರುವುದು ಕಂಡು ಬಂದಿಲ್ಲ, ಆದರೆ, ಕೆಲವೊಂದು ದಾಖಲೆಗಳು, 14 ಸೈಟ್​ಗಳನ್ನು ನೀಡಿರುವ ಬಗ್ಗೆ ಉಲ್ಲೇಖ ಮಾಡಲಾಗಿದೆ.

ಲೋಕಾಯುಕ್ತ ಪೊಲೀಸರು ಮಾಡಿರುವ ಐದು ವಿಭಾಗಗಳು ಯಾವುವು?

  1. ದೇವರಾಜು ಜಮೀನು ಹೇಗೆ ಬಂತು ಎಂಬ ಹಿನ್ನೆಲೆಗಳ ಬಗ್ಗೆ.
  2. ಡಿನೋಟಿಫಿಕೇಷನ್​ ಹೇಗೆ ಆಯಿತು ಎಂಬುದು.
  3. ಭೂ ಪರಿವರ್ತಣೆ ಹೇಗೆ ಆಯಿತು ಎಂಬ ವಿಚಾರ.
  4. ಪಾರ್ವತಿಗೆ ಜಮೀನು ನೀಡಿರುವ ಬಗ್ಗೆ.
  5. ಸೈಟ್​ ವಾಪಸ್​ ಕೊಟ್ಟಿರುವ ಬಗ್ಗೆ ಹಾಗೂ ನಂತರದ ಇತರೆ ಬೆಳವಣಿಗೆಗಳು.

ಇದನ್ನೂ ಓದಿ: ‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿದ್ದರಾಮಯ್ಯ: ಸಿಎಂ ಹುದ್ದೆ ಚರ್ಚೆಗೆ ಮೆಗಾ ಟ್ವಿಸ್ಟ್

ತಾವೇ ವಾದ ಮಂಡನೆಗೆ ಸ್ನೇಹಮಯಿ ಕೃಷ್ಣ ನಿರ್ಧಾರ

ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ನಡೆ ನಿಗೂಢವಾಗಿದೆ. ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸದಿರಲು ನಿರ್ಧಾರ ಮಾಡಿದ್ದಾರೆ. ಮತ್ತೊಂದು ವಿಶೇಷ ಅಂದರೆ, ಮುಡಾ ಹಗರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ತಾವೇ ವಾದ ಮಂಡನೆಗೆ ಸ್ನೇಹಮಯಿ ಕೃಷ್ಣ ನಿರ್ಧಾರ ಮಾಡಿದ್ದಾರೆ. ವಕೀಲರನ್ನು ನೇಮಿಸಿಕೊಳ್ಳುವ ಬದಲು, ತಾವೇ ವಾದ ಮಂಡನೆ ಮಾಡಲಿದ್ದಾರೆ. ವಕೀಲರ ನೇಮಿಸಿಕೊಳ್ಳುವ ಹಕ್ಕನ್ನು ಉಳಿಸಿಕೊಂಡು, ವಕೀಲರ ಸಹಕಾರ ಸಲಹೆಗಳೊಂದಿಗೆ ತಮ್ಮ ಆರೋಪಗಳ ಸಂಬಂಧ ಹೋರಾಟ ಮಾಡಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು