ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ವರದಿಯಲ್ಲಿ ಕ್ಲೀನ್​ಚಿಟ್

ಮುಡಾ ಹಗರಣದಲ್ಲಿ ಗಂಡಾಂತರಕ್ಕೆ ಸಿಲುಕಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ಒಂದು ಹಂತಕ್ಕೆ ನಿರಾಳರಾಗುವಂತಾಗಿದೆ. ಹಗರಣ ಸಂಬಂಧ ತನಿಖೆ ನಡೆಸಿರುವ ಲೋಕಾಯುಕ್ತ ಕೊನೆಗೂ ವರದಿ ಸಿದ್ಧಪಡಿಸಿದ್ದು, ಸಿದ್ದರಾಮಯ್ಯ ಹಾಗೂ ಅವರ ಪತ್ನಿಗೆ ಕ್ಲೀನ್​ಚಿಟ್ ನೀಡಿದೆ. ವರದಿಯನ್ನು ಸೋಮವಾರ ಕೋರ್ಟ್​ಗೆ ಸಲ್ಲಿಸಲಾಗುತ್ತದೆ. ಆದಾಗ್ಯೂ, ಮುಡಾ ಹಗರಣ ಸಂಬಂಧ ಇಡಿ ತನಿಖೆ ಜಾರಿಯಲ್ಲಿದೆ.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ವರದಿಯಲ್ಲಿ ಕ್ಲೀನ್​ಚಿಟ್
ಸಿದ್ದರಾಮಯ್ಯ
Follow us
Kiran HV
| Updated By: Ganapathi Sharma

Updated on:Jan 23, 2025 | 10:05 AM

ಬೆಂಗಳೂರು, ಜನವರಿ 23: ಕರ್ನಾಟಕ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಮೂಡಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎನ್ನಲಾಹಗಿದೆ.

ಸೋಮವಾರ ಕೋರ್ಟ್​ಗೆ ಸಲ್ಲಿಕೆ

ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್​ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್​​ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.

ಸಿಎಂ ಪ್ರಭಾವ ಇಲ್ಲದೆ ಸಾಧ್ಯವೇ ಇಲ್ಲ: ಸ್ನೇಹಮಯಿ ಕೃಷ್ಣ

ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್​ಚಿಟ್ ನೀಡಲಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯಿಸಿದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ, ಸಿಎಂ ಪ್ರಭಾವ ಇಲ್ಲದೆ ಅಧಿಕಾರಿಗಳು ಅಕ್ರಮ ಎಸಗಲು ಸಾಧ್ಯವೇ ಇಲ್ಲ ಎಂದಿದ್ದಾರೆ. ‘ಟಿವಿ9’ ಜತೆ ಮಾತನಾಡಿದ ಅವರು, ಲೋಕಾಯುಕ್ತ ವರದಿಯಲ್ಲಿ ಸಿಎಂ ಹಾಗೂ ಅವರ ಪತ್ನಿಗೆ ಕ್ಲೀನ್​ಚಿಟ್‌ ನೀಡಿರುವ ಬಗ್ಗೆ ಅಧಿಕೃತ ಮಾಹಿತಿ ನಮಗೆ ಬಂದಿಲ್ಲ. ಆದಾಗ್ಯೂ ಅದು ನಿರೀಕ್ಷಿತ. ಇದರಿಂದ ನನ್ನ ಹೋರಾಟಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ. ಸಿಎಂ ಪ್ರಭಾವ ಇಲ್ಲದೆ ಅಧಿಕಾರಿಗಳು ಅಪರಾಧವೆಸಗಲು ಸಾಧ್ಯವೇ ಇಲ್ಲ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಭಾವ ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಕೋಕನಟ್ ಕೋಡ್ವರ್ಡ್ ಬಳಸಿ ಅಕ್ರಮ ವ್ಯವಹಾರ, ಇಡಿ ತನಿಖೆಯಲ್ಲಿ ಬಯಲು

ಮುಡಾ ಹಗರಣ ಸಂಬಂಧ ಮತ್ತೊಂದೆಡೆ, ಜಾರಿ ನಿರ್ದೇಶನಾಲಯ ತನಿಖೆಯೂ ಪ್ರಗತಿಯಲ್ಲಿದೆ. ಏತನ್ಮಧ್ಯೆ, ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯೂ ಕರ್ನಾಟಕ ಹೈಕೋರ್ಟ್​​ನಲ್ಲಿ ನಡೆಯುತ್ತಿದೆ. ಜನವರಿ 27ರಂದು ಸಿಬಿಐ ತನಿಖೆ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡುವ ನಿರೀಕ್ಷೆ ಇದೆ. ಅದಕ್ಕೂ ಮುನ್ನ ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿಯನ್ನು ಕೋರ್ಟ್​ಗೆ ಸಲ್ಲಿಕೆ ಮಾಡಲಿದ್ದಾರೆ. ಹೀಗಾಗಿ ಪ್ರಕರಣದ ಕುರಿತ ಕುತೂಹಲ ಇದೀಗ ಮತ್ತಷ್ಟು ಹೆಚ್ಚಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:41 am, Thu, 23 January 25

ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು