AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರು ಐಟಿ, ಇಡಿ, ಸಿಬಿಐ ಕರೆಸೋದು ಮಾಡುತ್ತಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ ಖರ್ಗೆ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ. ಬಿಜೆಪಿ ಅವಧಿಯಲ್ಲಿನ 1 ಹಗರಣಕ್ಕೂ ಐಟಿ, ಇಡಿ, ಸಿಬಿಐ ಕರೆಸಿಲ್ಲ. ಆದರೆ ಈಗ ಕರೆಸುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ. ಬಿಜೆಪಿ ಅವಧಿಯಲ್ಲಿ ಮುಡಾದಲ್ಲಿ ಅಕ್ರಮ ನಡೆದಿದೆ ಎಂದಿದ್ದಾರೆ.

ಬಿಜೆಪಿಯವರು ಐಟಿ, ಇಡಿ, ಸಿಬಿಐ ಕರೆಸೋದು ಮಾಡುತ್ತಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
ಬಿಜೆಪಿಯವರು ಐಟಿ, ಇಡಿ, ಸಿಬಿಐ ಕರೆಸೋದು ಮಾಡುತ್ತಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
ಗಂಗಾಧರ​ ಬ. ಸಾಬೋಜಿ
|

Updated on: Jul 12, 2024 | 4:53 PM

Share

ಬೆಂಗಳೂರು, ಜುಲೈ 12: ಬಿಜೆಪಿ (bjp) ಅವಧಿಯಲ್ಲಿನ 1 ಹಗರಣಕ್ಕೂ ಐಟಿ, ಇಡಿ, ಸಿಬಿಐ ಕರೆಸಿಲ್ಲ. ಈಗ ಅವರಿಗೆ ಆತಂಕವಿದ್ದು, ಹೀಗಾಗಿ ಐಟಿ, ಇಡಿ, ಸಿಬಿಐ ಕರೆಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿಪವೃದ್ಧಿ ಪ್ರಾಧಿಕಾರದಲ್ಲಿ ಅವ್ಯವಹಾರ ಪ್ರಕರಣ ತನಿಖೆ ಮುಗಿಯುವವರೆಗೆ ಬಿಜೆಪಿ ನಾಯಕರು ಕಾಯಬೇಕಿತ್ತು ಎಂದು ಹೇಳಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಬಿಜೆಪಿಯವರು ವಶಕ್ಕೆ

ಮುಡಾ‌ ಹಗರಣ‌ ವಿರೋಧಿಸಿ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ಪ್ರತಿಭಟನಾ ಮೆರವಣಿಗೆಗೆ ಸಿದ್ಧವಾಗಿದ್ದವರನ್ನು ಮುಂಜಾಗ್ರತಾ ಕ್ರಮವಾಗಿ ಬಿಜೆಪಿಯವರು ವಶಕ್ಕೆ ಪಡೆದಿದ್ದಾರೆ. ಬಿಜೆಪಿಯವರು ನಮಗೂ ಹೀಗೆ ಮಾಡಿರಲಿಲ್ಲವಾ ಎಂದು ಪ್ರಶ್ನಿಸಿದರು. ಪಿಎಸ್ಐ ನೇಮಕಾತಿ ಹಗರಣ ಹೊರಗೆಳೆದಿದ್ದಕ್ಕೆ ನೋಟಿಸ್ ನೀಡಿದ್ದರು. ಬಿಜೆಪಿ ಅವಧಿಯಲ್ಲಿ ಮುಡಾದಲ್ಲಿ ಅಕ್ರಮ ನಡೆದಿದೆ. ರಾಜ್ಯದಲ್ಲಿ ಆಡಳಿತದಲ್ಲಿ ಬಿಜೆಪಿ ಯಾಕೆ ಅಂದೇ ಪ್ರಶ್ನೆ ಮಾಡಿರಲಿಲ್ಲ. 2011ರಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸ್ಪೀಕರ್​ಗೆ ನೀಡಿದ್ದ ನೋಟ್ ಬಗ್ಗೆ ಏಕೆ ತನಿಖೆ ಮಾಡಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಲೂಟಿ ಮಾಡುವುದಷ್ಟೇ ಕಾಂಗ್ರೆಸ್ ಸರ್ಕಾರದ ಕೆಲಸ: ಆರ್ ಅಶೋಕ್ ವಾಗ್ದಾಳಿ

ಪೋಕ್ಸೋ ಕೇಸ್ ಮುಚ್ಚಿಹಾಕಲು ಮುಡಾ, ವಾಲ್ಮೀಕಿ ವಿಚಾರ ತಂದಿದ್ದಾರೆ. ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಬಗ್ಗೆ ಬಿಜೆಪಿಯವರು ಬಾಯಿಬಿಡುತ್ತಿಲ್ಲ. ಬಿಜೆಪಿಯವರ ಹಗರಣ ಆಳ, ಅಗಲ ದೊಡ್ಡದಿದೆ ಸಮಯ ಹಿಡಿಯುತ್ತೆ. 545 ಪಿಎಸ್​ಐ ನೇಮಕಾತಿ ಹಗರಣದ ಪ್ರಾಥಮಿಕ ತನಿಖಾ ವರದಿ ಬಂದಿದೆ. 40 ಪರ್ಸೆಂಟ್ ಕಮಿಷನ್ ಹಗರಣದ ಬಗ್ಗೆಯೂ ದಾಖಲೆಗಳು ಸಿಕ್ಕಿವೆ. ಒಂದೊಂದೇ ಹೊರಗೆ ಬರುತ್ತಿದೆ ಎಂದರು.

ಎಐಸಿಸಿ ಸತ್ಯ ಶೋಧನ ಸಮಿತಿ ಮುಂದೆ ಹಳೆ ಮೈಸೂರು ಭಾಗದ ಶಾಸಕರು ಸಚಿವರಿಂದ ಗಂಭೀರ ಒತ್ತಡ ಹಾಲಾಗಿದೆ. 20ಕ್ಕೂ ಹೆಚ್ಚು ಸಚಿವರ ಖಾತೆಗಳನ್ನು ಬದಲಾಯಿಸದೇ ಇದ್ದರೆ ಸಚಿವರಿಂದ ಸರ್ಕಾರಕ್ಕೆ ಪಕ್ಷಕ್ಕೆ ಪ್ರಯೋಜನವಾಗುತ್ತಿಲ್ಲ. ಹಾಲಿ ಸಚಿವರು ಕೆಲವು ಖಾತೆಗಳನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಖಾತೆಗಳ ಆಳ ಅಗಲವನ್ನೇ ಅರ್ಥ ಮಾಡಿಕೊಂಡಿಲ್ಲ ಸಚಿವರು ಎಂದಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪ್ರತಿಭಟನೆ ವೇಳೆ ಹೈಡ್ರಾಮ; ಅರೆಸ್ಟ್​ ಮಾಡಿ ಎಂದರೂ ಮಾಡದ ಪೊಲೀಸರ ವಿರುದ್ದ ‘ಕೈ’ ನಾಯಕರ ಆಕ್ರೋಶ

ಗಣಿತ ಪದವಿ ಪಡೆದು ಕನ್ನಡ ಬೋಧನೆ ಮಾಡಿದ ರೀತಿ ಆಗುತ್ತಿದೆ. ಸಚಿವರ ಕಾರ್ಯ ವೈಖರಿ ಲೋಕಸಭೆ ಸೋಲಿನ ಬಳಿಕವೂ ಬದಲಾಗಿಲ್ಲ. ದಯವಿಟ್ಟು ಸಚಿವರ ಖಾತೆಗಳನ್ನು ಅದಲು ಬದಲು ಮಾಡಿ. ಸಚಿವರಿಗೆ ಚುರುಕು ಮುಟ್ಟಿಸದಿದ್ದರೆ ಪಕ್ಷಕ್ಕೆ ಸರ್ಕಾರಕ್ಕೆ ಡ್ಯಾಮೇಜ್ ಆಗಲಿದೆ ಎಂದು ಮಧುಸೂದನ್ ಮಿಸ್ತ್ರಿ ಸಮಿತಿ ಮುಂದೆ ಬಲವಾಗಿ ಆಗ್ರಹ ಕೇಳಿ ಬಂದಿದೆ.

ವರದಿ: ಈರಣ್ಣ ಬಸವ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ