BJP JDS Padayatra Live: ಬಿಜೆಪಿ-ಜೆಡಿಎಸ್ ನಾಲ್ಕನೇ ದಿನದ ಪಾದಯಾತ್ರೆ ಆರಂಭ, ಲೈವ್ ಇಲ್ಲಿ ವೀಕ್ಷಿಸಿ
MUDA Scam, Bangalore Mysore Padayatra Live: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಾಯಕರ ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ನಾಲ್ಕನೇ ದಿನದ ಪಾದಯಾತ್ರೆ ಮದ್ದೂರಿನಿಂದ ಆರಂಭವಾಗಿದೆ. ಲೈವ್ ಇಲ್ಲಿ ವೀಕ್ಷಸಿ
ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆ ಆರಂಭಿಸಿದ್ದಾರೆ. ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಸೋಮವಾರ ರಾತ್ರಿ ಪಾದಯಾತ್ರೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟಕ್ಕೆ ತಲುಪಿತ್ತು. ಇಂದು (ಆ.06) ನಾಲ್ಕನೇ ದಿನದ ಪಾದಯಾತ್ರೆ ಆರಂಭವಾಗಿದ್ದು, ಮಂಡ್ಯ ನಗರಕ್ಕೆ ತಲುಪಲಿದೆ. ಮೈತ್ರಿ ನಾಯಕರು ಇಲ್ಲೇ ವಾಸ್ತವ್ಯ ಹೂಡಲಿದ್ದಾರೆ. ನಾಲ್ಕನೇ ದಿನದ ಪಾದಯಾತ್ರೆಯನ್ನು ಬಾಣ ಬಿಡುವ ಮೂಲಕ ಚಾಲನೆ ನೀಡಲಾಯಿತು. ಪಾದಯಾತ್ರೆಯಲ್ಲಿ ಮಹಿಳೆಯರು ಪೂರ್ಣ ಕುಂಬ ಹೊತ್ತು ಸಾಗುತ್ತಿದ್ದಾರೆ. ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮುರುಗೇಶ್ ನೀರಾಣಿ, ಬಿಸಿ ಪಾಟೀಲ್ ಭಾಗಿಯಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್ ನೀಡಿದ್ದ ಭರವಸೆ ಬಗ್ಗೆ ಬೈಕ್ ಟ್ಯಾಕ್ಸಿ ರೈಡರ್ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

