AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಸೈಟ್ ವಾಪಸ್: ಸಂವಿಧಾನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದ ಅಶೋಕ್

ಮುಡಾ ನಿವೇಶನಗಳನ್ನು ವಾಪಸ್ ನೀಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಕೈಗೊಂಡಿರುವ ನಿರ್ಧಾರವನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್ ಸ್ವಾಗತಿಸಿದ್ದು, ಇದು ರಾಜ್ಯಪಾಲರಿಗೆ, ಸಂವಿಧಾನಕ್ಕೆ ಹಾಗೂ ನ್ಯಾಯಾಂಗಕ್ಕೆ ಸಿಕ್ಕ ಗೆಲುವು ಎಂದು ಬಣ್ಣಿಸಿದ್ದಾರೆ. ಅಶೋಕ್ ಪ್ರತಿಕ್ರಿಯೆಯ ವಿವರ ಇಲ್ಲಿದೆ.

ಮುಡಾ ಸೈಟ್ ವಾಪಸ್: ಸಂವಿಧಾನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದ ಅಶೋಕ್
ಅಶೋಕ್
ಗಣಪತಿ ಶರ್ಮಾ
|

Updated on: Oct 01, 2024 | 10:11 AM

Share

ಬೆಂಗಳೂರು, ಅಕ್ಟೋಬರ್ 1: ಮುಡಾ ಹಗರಣದ ಕುಣಿಕೆ ಸಿಎಂ ಸಿದ್ದರಾಮಯ್ಯಗೆ ಬಿಗಿಯಾಗುತ್ತಿರುವ ಬೆನ್ನಲ್ಲೇ ಅವರ ಪತ್ನಿ ಪಾರ್ವತಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆದ ಸೈಟುಗಳನ್ನು ವಾಪಸ್ ನೀಡುವ ನಿರ್ಧಾರ ಕೈಗೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಆರ್ ಅಶೋಕ್, ಸಂವಿಧಾನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದು ಬಣ್ಣಿಸಿದ್ದಾರೆ.

ಸಿಎಂ ಪತ್ನಿಯ ನಿರ್ಧಾರದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಅಶೋಕ್, ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಸೈಟುಗಳನ್ನು ವಾಪಸ್ಸು ನೀಡುವ ‘ದೊಡ್ದ’ ಮನಸ್ಸು ಮಾಡಿರುವುದು, ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ. ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ. ಜಗ್ಗಲ್ಲ, ಬಗ್ಗಲ್ಲ ಎಂದು ಅಧಿಕಾರದ ಮದದಿಂದ ಮೆರೆಯುತ್ತಿದ್ದವರ ವಿರುದ್ಧ ಬಾಬಾಸಾಹೇಬ್ ಅಂಬೇಡ್ಕರರ ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ ಎಂದು ಎಕ್ಸ್ ಸಂದೇಶದಲ್ಲಿ ಅಶೋಕ್ ಉಲ್ಲೇಖಿಸಿದ್ದಾರೆ.

ಅಶೋಕ್ ಎಕ್ಸ್ ಸಂದೇಶ

ಈ ವಿಚಾರವಾಗಿ ಸೋಮವಾರ ರಾತ್ರಿ ಸಹ ಅಭಿಪ್ರಾಯ ವ್ಯಕ್ತಪಡಿಸಿದ್ದ ಅಶೋಕ್, ‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ. ‘ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ’ ಸಿಎಂ ಸಿದ್ದರಾಮಯ್ಯನವರೇ, ತಾವು ತನಿಖೆ ಎದುರಿಸಲೇ ಬೇಕು. ರಾಜೀನಾಮೆ ನೀಡಬೇಕು ಎಂದಿದ್ದರು.

ಇದನ್ನೂ ಓದಿ: ಮುಡಾಗೆ ಸೈಟ್ ವಾಪಸ್: ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರಲ್ಲ ಎಂದ ಅಶೋಕ್

ಮುಡಾ ನಿವೇಶಗಳನ್ನು ವಾಪಸ್ ನೀಡುವುದಾಗಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೋಮವಾರ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್