ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ: ರೂಪುರೇಷ ಸಿದ್ಧ, ಇಲ್ಲಿದೆ ರೂಟ್​​ಮ್ಯಾಪ್

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರ ಬೆಂಗಳೂರು ಮೈಸೂರು ಪಾದಯಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ಇದೀಗ ಕರಡು ರೂಟ್​ಮ್ಯಾಪ್ ಸಿದ್ಧವಾಗಿದ್ದು, ಭಾನುವಾರದ ಎನ್​ಡಿಎ ಸಭೆಯಲ್ಲಿ ಇದಕ್ಕೆ ಅಂತಿಮ ಮುದ್ರೆ ಬೀಳುವ ನಿರೀಕ್ಷೆ ಇದೆ. ರೂಟ್​​ಮ್ಯಾಪ್ ವಿವರ ಇಲ್ಲಿದೆ.

ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ: ರೂಪುರೇಷ ಸಿದ್ಧ, ಇಲ್ಲಿದೆ ರೂಟ್​​ಮ್ಯಾಪ್
ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ: ರೂಪುರೇಷ ಸಿದ್ಧ
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on: Jul 26, 2024 | 2:52 PM

ಬೆಂಗಳೂರು, ಜುಲೈ 26: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆಗೆ ಬಿಜೆಪಿ ಸಿದ್ಧತೆ ಮಾಡುತ್ತಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಒಟ್ಟು 8 ದಿನಗಳ ರೂಪುರೇಷೆಯನ್ನು ಪಕ್ಷದ ನಾಯಕರು ತಯಾರಿಸಿದ್ದಾರೆ.

ಪಾದಯಾತ್ರೆ ಎಲ್ಲಿಂದ ಶುರು?

  1. ನೈಸ್​ ರಸ್ತೆ ಜಂಕ್ಷನ್​ನಲ್ಲಿರುವ ಕೆಂಪಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಬಿಜೆಪಿ ನಾಯಕರ ಪಾದಯಾತ್ರೆ ಆರಂಭವಾಗಲಿದೆ.
  2. ಮೊದಲ ದಿನ 12 ಕಿಮೀ ಪಾದಯಾತ್ರೆ ನಡೆಸಲಿರುವ ಬಿಜೆಪಿ ನಾಯಕರು ಅಂದು ರಾತ್ರಿ ಮಂಜುನಾಥ್ ಚೌಲ್ಟ್ರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  3. 2ನೇ ದಿನ 20.5 ಕಿಮೀ ಪಾದಯಾತ್ರೆ ನಡೆಸಲಿರುವ ನಾಯಕರು ಬಳಿಕ ಕೆಂಗಲ್ ಆಂಜನೇಯ ದೇಗುಲದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  4. 3ನೇ ದಿನ 19 ಕಿಮೀ ಪಾದಯಾತ್ರೆ ನಡೆಸುವ ಬಿಜೆಪಿ ನಾಯಕರು, ನಿಡಗಟ್ಟದ ಸುಮಿತ್ರಾದೇವಿ ಕನ್ವೆನ್ಷನ್ ಹಾಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  5. 4ನೇ ದಿನ 21.5 ಕಿಮೀ ಪಾದಯಾತ್ರೆ ನಡೆಸಿ ಶಶಿಕಿರಣ್ ಸಭಾಂಗಣದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  6. 5ನೇ ದಿನ 16.5 ಕಿಮೀ ಪಾದಯಾತ್ರೆ ನಡೆಸಿ ಮಂಡ್ಯ ಜಿಲ್ಲೆಗೆ ತಲುಪಲಿದ್ದಾರೆ. ಅಂದು ರಾತ್ರಿ ಇಂಡವಾಳ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  7. 6ನೇ ದಿನ 17 ಕಿಮೀ ಪಾದಯಾತ್ರೆ ನಡೆಸಿ ಮಂಜುನಾಥ ಚೌಲ್ಟ್ರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  8. 7ನೇ ದಿನ 9 ಕಿಮೀ ಮತ್ತು 8ನೇ ದಿನ 17 ಕಿಮೀ ಪಾದಯಾತ್ರೆ ಮಾಡಿ ಮೈಸೂರು ತಲುಪಲಿದ್ದಾರೆ.

ಇದನ್ನೂ ಓದಿ: ಕೊನೆಗೂ ಆ ತಪ್ಪನ್ನು ಒಪ್ಪಿಕೊಂಡ ಸಿದ್ದರಾಮಯ್ಯ: ಆದರೆ…

ಬಿಜೆಪಿ ನಾಯಕರ ಪಾದಯಾತ್ರೆಯ ರೂಟ್​​ಮ್ಯಾಪ್​ಗೆ ಭಾನುವಾರ ಅಂತಿಮ ಮುದ್ರೆ ಬೀಳಲಿದೆ. ಅಂದು ನಡೆಯಲಿರುವ ಎನ್​​ಡಿಎ ಸಭೆಯಲ್ಲಿ ರೂಟ್ ಮ್ಯಾಪ್‌ ಅಂತಿಮಗೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್