AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಸಿದ್ದರಾಮಯ್ಯ ಆಪ್ತನ 10 ಸ್ಥಿರ ಆಸ್ತಿಗಳು ಮುಟ್ಟುಗೋಲು

ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ಮತ್ತು ಮುಡಾ ಮಾಜಿ ಅಧ್ಯಕ್ಷ ಮರೀಗೌಡ ಅವರನ್ನು ತೀವ್ರ ವಿಚಾರಣೆ ನಡೆಸಿತ್ತು. ಇದೀಗ ಮುಡಾದ ಮಾಜಿ ಅಧ್ಯಕ್ಷ ಮರಿಗೌಡ ಕೂಡ ಅಕ್ರಮ ನಿವೇಶನ ಪಡೆದಿರುವುದು ಬೆಳಕಿಗೆ ಬಂದಿದೆ. ಇದರಿಂದ ಮರಿಗೌಡನ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.

ಮುಡಾ ಹಗರಣ: ಸಿದ್ದರಾಮಯ್ಯ ಆಪ್ತನ 10 ಸ್ಥಿರ ಆಸ್ತಿಗಳು ಮುಟ್ಟುಗೋಲು
Muda Scam
ರಮೇಶ್ ಬಿ. ಜವಳಗೇರಾ
|

Updated on:Jan 22, 2026 | 9:14 PM

Share

ಬೆಂಗಳೂರು.ಮೈಸೂರು, (ಜನವರಿ 22): ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಇತರರ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ (Muda Scam Case) ಮಹತ್ವದ ಬೆಳವಣಿಗೆ ನಡೆದಿದೆ. ಸಿದ್ದರಾಮಯ್ಯನವರ ಪರಮಾಪ್ತ, ಮುಡಾದ ಮಾಜಿ ಅಧ್ಯಕ್ಷ ಮರೀಗೌಡ (Marigowda)  ಕೂಡ ಅಕ್ರಮ ನಿವೇಶನ ಪಡೆದಿರುವುದು ಬೆಳಕಿಗೆ ಬಂದಿದೆ. ಇಡಿ ದಾಳಿ ವೇಳೆ ಸೈಟ್‌ಗಳ ಹಂಚಿಕೆಯಲ್ಲಿ ನಿಯಮಗಳನ ಉಲ್ಲಂಘನೆ ಕಂಡುಬಂದಿತ್ತು. ಹೀಗಾಗಿ ಇಡಿ, ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.

ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳು ಮುಟ್ಟುಗೋಲು

ಇಡಿ ದಾಳಿ ವೇಳೆ ಸೈಟ್‌ಗಳ ಹಂಚಿಕೆಯಲ್ಲಿ ನಿಯಮಗಳನ ಉಲ್ಲಂಘನೆ ಕಂಡುಬಂದಿತ್ತು. ಈ ಸಂಬಂಧ ಇನ್ನಷ್ಟು ತನಿಖೆ ನಡೆಸಿದಾಗ ಮುಡಾದ ಮಾಜಿ ಅಧ್ಯಕ್ಷ ಮರಿಗೌಡ ಕೂಡ ಅಕ್ರಮ ನಿವೇಶನ ಪಡೆದಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರ ಸಹಾಯದಿಂದ ಮರೀಗೌಡ ಅಕ್ರಮವಾಗಿ ಸೈಟ್ ಪಡೆದಿದ್ದಾರೆ ಎನ್ನುವುದು ಗೊತ್ತಾಗಿದೆ. ಇದರಿಂದ ಇಡಿ, ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. 6 ಅಕ್ರಮ ಮುಡಾ ನಿವೇಶನಗಳು, 3 ಸ್ಥಿರ ಆಸ್ತಿಗಳು ಮತ್ತು 20.85 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಒಂದು ವಾಣಿಜ್ಯ ಕಟ್ಟಡ ಮುಟ್ಟುಗೋಲು ಹಾಕಿದೆ.

ಇದನ್ನೂ ಓದಿ: ಮುಡಾದಲ್ಲಿ ಅಕ್ರಮ ದೃಢ: 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

ಇದೇ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ, ಈಗಾಗಲೇ 283 ಮುಡಾ ಸೈಟ್‌ಗಳು ಮತ್ತು 03 ವೈಯಕ್ತಿಕ ಆಸ್ತಿ ಸೇರಿದಂತೆ ಒಟ್ಟು 60 ಕೋಟಿ ರೂಪಾಯಿ ಮೌಲ್ಯದ ಅಸ್ತಿಪಾಸ್ತಿ ಮುಟ್ಟುಗೋಲು ಹಾಕಿಕೊಂಡಿತ್ತು.

ಇನ್ನೊಂದೆಡೆ ಇದೇ ಪ್ರಕರಣದಲ್ಲಿ ಈಗಾಗಲೇ ಇಡಿ ಬಂಧನಕ್ಕೊಳಗಾಗಿರುವ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಸದ್ಯ ಜೈಲಿನಲ್ಲಿದ್ದು, ನಿನ್ನೆ ಅಷ್ಟೇ ಅವರ ಜಾಮೀನು ಅರ್ಜಿಯನ್ನು ಸಹ ಹೈಕೋರ್ಟ್ ವಜಾ ಮಾಡಿದೆ. ಇನ್ನು ಸಿದ್ದರಾಮಯ್ಯ ವಿರುದ್ಧದ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್​ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಲಾಗಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ವಿಚಾರಣೆ ನಡೆಸಿದ್ದು,  ಜನವರಿ 28ಕ್ಕೆ ಆದೇಶ ಕಾಯ್ದಿರಿಸಿದೆ.

ವರದಿ: ಪ್ರದೀಪ್ ಚಿಕ್ಕಾಟೆ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:06 pm, Thu, 22 January 26

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್