
ಬೆಂಗಳೂರು.ಮೈಸೂರು, (ಜನವರಿ 22): ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಇತರರ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ (Muda Scam Case) ಮಹತ್ವದ ಬೆಳವಣಿಗೆ ನಡೆದಿದೆ. ಸಿದ್ದರಾಮಯ್ಯನವರ ಪರಮಾಪ್ತ, ಮುಡಾದ ಮಾಜಿ ಅಧ್ಯಕ್ಷ ಮರೀಗೌಡ (Marigowda) ಕೂಡ ಅಕ್ರಮ ನಿವೇಶನ ಪಡೆದಿರುವುದು ಬೆಳಕಿಗೆ ಬಂದಿದೆ. ಇಡಿ ದಾಳಿ ವೇಳೆ ಸೈಟ್‌ಗಳ ಹಂಚಿಕೆಯಲ್ಲಿ ನಿಯಮಗಳನ ಉಲ್ಲಂಘನೆ ಕಂಡುಬಂದಿತ್ತು. ಹೀಗಾಗಿ ಇಡಿ, ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.
ಇಡಿ ದಾಳಿ ವೇಳೆ ಸೈಟ್‌ಗಳ ಹಂಚಿಕೆಯಲ್ಲಿ ನಿಯಮಗಳನ ಉಲ್ಲಂಘನೆ ಕಂಡುಬಂದಿತ್ತು. ಈ ಸಂಬಂಧ ಇನ್ನಷ್ಟು ತನಿಖೆ ನಡೆಸಿದಾಗ ಮುಡಾದ ಮಾಜಿ ಅಧ್ಯಕ್ಷ ಮರಿಗೌಡ ಕೂಡ ಅಕ್ರಮ ನಿವೇಶನ ಪಡೆದಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರ ಸಹಾಯದಿಂದ ಮರೀಗೌಡ ಅಕ್ರಮವಾಗಿ ಸೈಟ್ ಪಡೆದಿದ್ದಾರೆ ಎನ್ನುವುದು ಗೊತ್ತಾಗಿದೆ. ಇದರಿಂದ ಇಡಿ, ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. 6 ಅಕ್ರಮ ಮುಡಾ ನಿವೇಶನಗಳು, 3 ಸ್ಥಿರ ಆಸ್ತಿಗಳು ಮತ್ತು 20.85 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಒಂದು ವಾಣಿಜ್ಯ ಕಟ್ಟಡ ಮುಟ್ಟುಗೋಲು ಹಾಕಿದೆ.
ಇದೇ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ, ಈಗಾಗಲೇ 283 ಮುಡಾ ಸೈಟ್‌ಗಳು ಮತ್ತು 03 ವೈಯಕ್ತಿಕ ಆಸ್ತಿ ಸೇರಿದಂತೆ ಒಟ್ಟು 60 ಕೋಟಿ ರೂಪಾಯಿ ಮೌಲ್ಯದ ಅಸ್ತಿಪಾಸ್ತಿ ಮುಟ್ಟುಗೋಲು ಹಾಕಿಕೊಂಡಿತ್ತು.
ಇನ್ನೊಂದೆಡೆ ಇದೇ ಪ್ರಕರಣದಲ್ಲಿ ಈಗಾಗಲೇ ಇಡಿ ಬಂಧನಕ್ಕೊಳಗಾಗಿರುವ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಸದ್ಯ ಜೈಲಿನಲ್ಲಿದ್ದು, ನಿನ್ನೆ ಅಷ್ಟೇ ಅವರ ಜಾಮೀನು ಅರ್ಜಿಯನ್ನು ಸಹ ಹೈಕೋರ್ಟ್ ವಜಾ ಮಾಡಿದೆ. ಇನ್ನು ಸಿದ್ದರಾಮಯ್ಯ ವಿರುದ್ಧದ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಲಾಗಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿದ್ದು, ಜನವರಿ 28ಕ್ಕೆ ಆದೇಶ ಕಾಯ್ದಿರಿಸಿದೆ.
ವರದಿ: ಪ್ರದೀಪ್ ಚಿಕ್ಕಾಟೆ, ಟಿವಿ9 ಬೆಂಗಳೂರು
Published On - 9:06 pm, Thu, 22 January 26