ಏನಿದು ಮುಡಾ ಪ್ರಕರಣ? ಸಿದ್ದರಾಮಯ್ಯ ಪತ್ನಿಗೆ ಸೈಟ್ ಸಿಕ್ಕಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಥವಾ ಮುಡಾದಲ್ಲಿ ಅಕ್ರಮದ ಆರೋಪ ಕೇಳಿಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಪತ್ನಿಯ ಹೆಸರೂ ಕೇಳಿಬಂದಿರುವುದು ಕಾರಣ. ಹಾಗಾದರೆ, ಏನಿದು ಪ್ರಕರಣ, ಅಕ್ರಮದ ಆರೋಪ ಕೇಳಿ ಬಂದಿರುವುದೇಕೆ? ಸಿಎಂ ಸಿದ್ದರಾಮಯ್ಯ ಪತ್ನಿಗೆ ನೀಡಿದ ಸೈಟ್ ಬಿಜೆಪಿಗೆ ಅಸ್ತ್ರವಾಗಿದ್ದು ಹೇಗೆ? ಎಲ್ಲ ವಿವರ ಇಲ್ಲಿದೆ.

ಏನಿದು ಮುಡಾ ಪ್ರಕರಣ? ಸಿದ್ದರಾಮಯ್ಯ ಪತ್ನಿಗೆ ಸೈಟ್ ಸಿಕ್ಕಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ
ಏನಿದು ಮುಡಾ ಪ್ರಕರಣ? ಸಿದ್ದರಾಮಯ್ಯ ಪತ್ನಿಗೆ ಸೈಟ್ ಸಿಕ್ಕಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ
Follow us
ರಾಮ್​, ಮೈಸೂರು
| Updated By: Ganapathi Sharma

Updated on: Jul 03, 2024 | 2:34 PM

ಮೈಸೂರು, ಜುಲೈ 3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಆರೋಪಗಳು ಕೇಳಿಬರುತ್ತಿವೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಕೊಟ್ಟಿದ್ದಾರೆ ಇದು ಈಗ ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬಾಮೈದ ಜಾಗ ಕೊಟ್ಟಿದ್ದ ಬಗ್ಗೆ ಸ್ಪಷ್ಟನೆಯನ್ನೂ ನೀಡಿದ್ದಾರೆ. ಆದರೂ ಸಿಎಂ ಪತ್ನಿಗೆ ವಿಜಯನಗರದಲ್ಲೇ ಏಕೆ ಸೈಟ್ ಕೊಟ್ಟರು ಎಂಬ ಪ್ರಶ್ನೆ ಮೂಡಿದೆ. ಇದೇ ಪ್ರಶ್ನೆ ಈಗ ಮುಡಾದ ನಡೆ ಮೇಲೆ ಅನುಮಾನ ಬರುವಂತೆ ಮಾಡಿದೆ.

ಮೈಸೂರಿನ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿರೋ 3ಎಕರೆ 16 ಗುಂಟೆ ಜಾಗವನ್ನ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಸಹೋದರ, ಪಾರ್ವತಿಯವರಿಗೆ ದಾನವಾಗಿ ನೀಡಿದ್ದರು. ಈ ಜಾಗವನ್ನು ಅಭಿವೃದ್ಧಿಗಾಗಿ ಪ್ರಾಧಿಕಾರ, ಕಾನೂನು ಪ್ರಕಾರವೇ ವಶಪಡಿಸಿಕೊಂಡಿತ್ತು. 1998ರಲ್ಲಿ ನೋಟಿಫೈ ಮಾಡಿತ್ತು. ಇದೇ ಜಾಗದಲ್ಲಿ ದೇವನೂರು 3ನೇ ಹಂತದ ಬಡಾವಣೆಯನ್ನೂ ಅಭಿವೃದ್ಧಿ ಮಾಡಿದೆ. ವಿಷಯ ಏನೆಂದರೆ, ವಶಪಡಿಸಿಕೊಂಡ ಜಾಗಕ್ಕೆ ಬದಲಿ ಭೂಮಿ ಕೊಡುವುದು ಪ್ರಾಧಿಕಾರದ ಕರ್ತವ್ಯ. ಹೀಗಾಗಿ ಬದಲಿ ಭೂಮಿ ನೀಡುವಂತೆ 2014ರಲ್ಲಿ ಸಿಎಂ ಪತ್ನಿ ಅರ್ಜಿ ಹಾಕಿದ್ದರು. 2017ರಲ್ಲಿ ನಡೆದ ಸಭೆಯಲ್ಲಿ ಅಭಿವೃದ್ಧಿಪಡಿಸದ ಭೂಮಿ ನೀಡಲು ತೀರ್ಮಾನಿಸಲಾಗಿತ್ತು. ಆದರೆ, ಇದಕ್ಕೆ ಒಪ್ಪದ ಸಿಎಂ ಪತ್ನಿ ಪಾರ್ವತಿ 2021ರಲ್ಲಿ ಮತ್ತೊಂದು ಪತ್ರ ಬರೆದಿದ್ದರು. 50:50ಅನುಪಾತದಲ್ಲಿ ಬದಲಿ ನಿವೇಶನ ಕೊಡಿ ಎಂದು ಮನವಿ ಸಲ್ಲಿಸಿದ್ದರು. ಸಿಎಂ ಪತ್ನಿ ಕೋರಿಕೆಯಂತೆ 2021ರಲ್ಲಿ 50:50ಅನುಪಾತದಲ್ಲಿ ಭೂಮಿ ನೀಡಲಾಗಿದೆ ಎಂಬುದು ಆರೋಪ.

ಭೂಮಿ ವಶಪಡಿಸಿಕೊಂಡ ಜಾಗ ಬಿಟ್ಟು ಅಥವಾ ಸಮಾನಾಂತರವಾದ ಜಾಗ ಬಿಟ್ಟು ವಿಜಯನಗರದಲ್ಲಿ ಅಭಿವೃದ್ಧಿ ಆಗಿರುವ 38ಸಾವಿರದ 284 ಚದರಡಿ ಭೂಮಿ ಹಂಚಿಕೆ ಮಾಡಲಾಗಿದೆ. ಅಲ್ಲದೇ, 1998ರಲ್ಲಿ ಕಳೆದುಕೊಂಡ ಭೂಮಿಗೆ 2021ರಲ್ಲಿ ಪರಿಹಾರ ನೀಡಲಾಗಿದೆ ಎಂಬುದು ಆರ್‌ಟಿಐ ಕಾರ್ಯಕರ್ತರ ಆರೋಪವಾಗಿದೆ.

ಸಿದ್ದರಾಮಯ್ಯಗೆ ಲಾಭ ಮಾಡಿಕೊಡಲಾಗಿದೆಯಾ? ಮುಡಾ ವಿರುದ್ಧದ ಆರೋಪವೇನು?

ಭೂಮಿ ವಶಪಡಿಸಿಕೊಂಡ ಜಾಗದಲ್ಲಿ, ಅಥವಾ ಸಮಾನಾಂತರ ಜಾಗದಲ್ಲಿ ಬದಲಿ ಭೂಮಿ ನೀಡಬೇಕು ಎಂಬುದು ಕಾನೂನಿನಲ್ಲಿದೆ. ಆದರೆ ಸಿಎಂ ಪತ್ನಿಗೆ ಭೂಸ್ವಾಧೀನವಾದ ಜಾಗ ಬಿಟ್ಟು, ವಿಜಯನಗರದಲ್ಲಿ ಭೂಮಿ ಕೊಡಲಾಗಿದೆ. 50:50 ಅನುಪಾತ ನಿಯಮವನ್ನ ದುರುಪಯೋಗಪಡಿಸಿಕೊಂಡು, 1998ರಲ್ಲಿ ವಶಪಡಿಸಿಕೊಂಡ ಜಾಗಕ್ಕೆ 2020ರಲ್ಲಿ ಜಾರಿಗೆ ಬಂದ 50-50 ಅನುಪಾತ ಬಳಸಿದ್ದೇಕೆ ಎಂಬುದು ದೂರುದಾರರ ಪ್ರಶ್ನೆ.

ಕಡಿಮೆ ಮೌಲ್ಯದ ಜಾಗ ಸ್ವಾಧೀನ ಮಾಡಿ ಹೆಚ್ಚು ಮೌಲ್ಯದ ಬದಲಿ ಭೂಮಿ ನೀಡಿಕೆ

ಕೆಸರೆಯಲ್ಲಿ ಕಡಿಮೆ ಮೌಲ್ಯದ ಜಾಗ ಸ್ವಾಧೀನ ಮಾಡಿ, ವಿಜಯನಗರದಲ್ಲಿ ಹೆಚ್ಚಿನ ಮೌಲ್ಯದ ಬದಲಿ ಭೂಮಿ ನೀಡಲಾಗಿದೆ. ಅಂದರೆ, ದೇವನೂರು ಬಡಾವಣೆಯಲ್ಲಿ ಚದರ ಅಡಿಗೆ 2500 ರೂಪಾಯಿಯಿಂದ 3000 ರೂಪಾಯಿವರೆಗ ದರ ಇದೆ. ಆದರೆ, ವಿಜಯನಗರದಲ್ಲಿ 7ರಿಂದ 8ಸಾವಿರ ರೂಪಾಯಿ ಇದೆ. ಹೀಗಾಗಿ ಸಿಎಂ ಮತ್ತು ಸಿಎಂ ಪತ್ನಿಗೆ ಆರ್ಥಿಕ ಲಾಭ ಮಾಡಿಕೊಡಲು ಮುಡಾ ಅಧಿಕಾರಿಗಳು ಸರ್ಕಾರಕ್ಕೆ ಆರ್ಥಿಕ ನಷ್ಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ವಾಚ್​ ಬೆನ್ನಲ್ಲೇ ಶುದ್ಧ ಹಸ್ತ ರಾಜಕಾರಣಿ ಎನಿಸಿಕೊಂಡ ಸಿದ್ದರಾಮಯ್ಯಗೆ ಮತ್ತೊಂದು ಗಿಫ್ಟ್ ಕಂಟಕ

ಸಿಎಂ ಪತ್ನಿಗೆ 1998ರ ಜಾಗಕ್ಕೆ 2021ರಲ್ಲಿ ಪರಿಹಾರ ಸಿಕ್ಕಿರುವುದು, ಬೇರೆ ಕಡೆ ಭೂಮಿ ಕೊಟ್ಟಿರುವುದು, 50-50 ಅನುಪಾತ ದುರ್ಬಳಕೆ ಮಾಡಿರೋದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಮುಡಾದ 50:50 ಅನುಪಾತ ಹಂಚಿಕೆ ವಿಚಾರ ಕೋಟ್ಯಂತರ ರೂಪಾಯಿ ಹಗರಣ ಬಡಿದಾಟಕ್ಕೆ ವೇದಿಕೆ ಕೊಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ